• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಡಿ ವಿವಾದ: ಮುಂದಿನ ವಾರ ಸರ್ವಪಕ್ಷ ಸಭೆ ಕರೆದ ಸಿಎಂ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ನವೆಂಬರ್ 24: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಗುರುವಾರ ಗೃಹ ಸಚಿವ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಹೇಳಿರುವುದನ್ನು ಗಮನಿಸಿದ್ದೇನೆ. ಈ ಬಗ್ಗೆ ಮುಂದಿನ ವಾರ ಸರ್ವಪಕ್ಷ ಸಭೆ ಕರೆದು, ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಹಾರಾಷ್ಟ್ರದ ಮುಖ್ಯಮಂತ್ರಿ ಸಭೆ ನಡೆಸಿದ್ದು, ಸುಪ್ರೀಂಕೋರ್ಟ್‌ನಲ್ಲಿ ಗಡಿವಿವಾದ ಪ್ರಕರಣ ಬಗ್ಗೆ ಮಾತುಕತೆ ಮೂಲಕವೂ ವಿವಾದ ಬಗೆಹರಿಸಿಕೊಳ್ಳುವ ಚಿಂತನೆಯಿರುವುದಾಗಿ ತಿಳಿಸಿರುವ ಮಾಹಿತಿ ದೊರೆತಿದೆ. ಈಗಾಗಲೇ ಸುಪ್ರೀಂಕೋರ್ಟ್‌ನಲ್ಲಿ ಅವರು ದಾವೆ ಹೂಡಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡನೆಯ ನಿರ್ಣಯವನ್ನು ಸರ್ವಪಕ್ಷ ಸಭೆ ಹಾಗೂ ಗಡಿ ಪ್ರಾಧಿಕಾರದೊಂದಿಗೆ ಚರ್ಚಿಸಿ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ವಾದ ಮಂಡಿಸಲು ನಿರ್ಧಾರ ಕೈಗೊಂಡಿದೆ ಎಂದರು.

ಗಡಿವಿವಾದವೇ ಮುಗಿದುಹೋಗಿದೆ. ಆದರೆ ಮಹಾರಾಷ್ಟ್ರ ರಾಜ್ಯದವರು ಮತ್ತೆ ವಿವಾದವನ್ನು ಎಬ್ಬಿಸಿದ್ದಾರೆ. ಗ್ರಾಮಪಂಚಾಯತಿ ನಿರ್ಣಯ ಹಾಗೂ ಪೂರಕ ವರದಿಗಳೆಲ್ಲವೂ ಇದೆ. ಬರುವ ದಿನಗಳಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.

Border dispute; All party meeting next week Says Basavaraj Bommai

ಗಡಿವಿವಾದದ ಬಗ್ಗೆ ಮಹಾರಾಷ್ಟ್ರದಷ್ಟೇ ಕರ್ನಾಟಕ ಮುತುವರ್ಜಿ ವಹಿಸಿಲ್ಲ ಎಂದು ಸಿದ್ದರಾಮಯ್ಯ ವಿಷಾದ ಬೆಳಗಾವಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರೆದಿರುವ ಪತ್ರಕ್ಕೆ ಪ್ರತ್ಯುತ್ತರ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೀವು ಬರೆದಿರುವ ಪತ್ರ ತಲುಪಿದೆ. ಅತ್ಯಂತ ಮಹತ್ವಪೂರ್ಣವಾದ ಈ ವಿಷಯದ ಬಗ್ಗೆ ವಿಳಂಬವಾಗಿಯಾದರೂ ಕಾರ್ಯಪ್ರವರ್ತರಾಗಿರುವುದು ಸಂತೋಷ ಮತ್ತು ಸಮಾಧಾನದ ವಿಷಯ ಎಂದು ಪತ್ರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದ ವ್ಯಾಜ್ಯದ ಬಗ್ಗೆ ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಅತೀವ ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ನಾನು ಒಂದು ಪತ್ರಿಕಾ ಹೇಳಿಕೆ ನೀಡಿ ಕರ್ನಾಟಕ ಸರ್ಕಾರ ಕೂಡಾ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದುಕೊಂಡು ರಾಜ್ಯದ ಕಾರ್ಯತಂತ್ರವನ್ನು ರೂಪಿಸಬೇಕೆಂದು ಸಲಹೆ ನೀಡಿದ್ದೆ. ಮಹಾರಾಷ್ಟ್ರ ಸರ್ಕಾರ ಗಡಿವಿವಾದದ ಬಗ್ಗೆ ಸತತವಾಗಿ ವಿರೋಧಪಕ್ಷಗಳ ಜೊತೆ ಸಮಾಲೋಚನೆ ನಡೆಸುತ್ತಾ ಬಂದಿದೆ.

ಕಳೆದ ಒಂದು ತಿಂಗಳಿನಿಂದ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಯನ್ನು ಎದುರಿಸಲು ವಿರೋಧಪಕ್ಷಗಳ ನಾಯಕರನ್ನೂ ಸೇರಿಸಿಕೊಂಡು 16 ಸದಸ್ಯರ ಸಲಹಾ ಸಮಿತಿಯನ್ನೂ ಕೂಡಾ ರಚಿಸಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಈ ಸಮಿತಿ ಈಗಾಗಲೇ ಸಭೆ ನಡೆಸಿ ನ್ಯಾಯಾಂಗದ ಹೋರಾಟಕ್ಕೆ ಕಾರ್ಯತಂತ್ರಗಳನ್ನು ರೂಪಿಸಿದೆ ಎಂದು ಹೇಳಿದ್ದಾರೆ.

ಸುಪ್ರೀಂಕೋರ್ಟ್‌ನಲ್ಲಿ ನಡೆಯುವ ಗಡಿ ವ್ಯಾಜ್ಯ ವಿಚಾರಣೆಯ ಮೇಲುಸ್ತುವಾರಿಗಾಗಿ ಇಬ್ಬರು ಸಚಿವರ ಸಮಿತಿಯನ್ನು ಕೂಡಾ ಮಹಾರಾಷ್ಟ್ರ ಸರ್ಕಾರ ರಚಿಸಿದೆ. ಆದರೆ ಕರ್ನಾಟಕ ಗಡಿವಿವಾದದ ಬಗ್ಗೆ ಮಹಾರಾಷ್ಟ್ರದಷ್ಟೇ ಮುತುವರ್ಜಿ ವಹಿಸಿಲ್ಲ ಎನ್ನುವುದು ವಿಷಾದನೀಯವಾದರೂ ವಾಸ್ತವವಾಗಿದೆ.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
Bommai said an all-party meeting has been convened next week to discuss in detail the Maharashtra Government's intentions to resolve the border row amicably through talks, and other important issues.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X