Karnataka Bandh: ಕಾವೇರಿಗಾಗಿ ಹೋರಾಟಕ್ಕೆ ಚಿತ್ರರಂಗ ಸಾಥ್; ನಟ ಶಿವರಾಜ್ ಕುಮಾರ್ ಹೇಳಿದ್ದೇನು?
ಬೆಂಗಳೂರು, ಸೆಪ್ಟೆಂಬರ್ 28: ಕಾವೇರಿ ವಿಚಾರವಾಗಿ ವಿವಿಧ ಸಂಘಟನೆಗಳು ಕರ್ನಾಟಕ ಬಂದ್ ಕರೆ ಕೊಟ್ಟಿದ್ದು, ಚನಲಚಿತ್ರ ವಾಣಿಜ್ಯ ಮಂಡಳಿಯೂ ಸಹ ಕಾವೇರಿ ಉಳಿವಿಗಾಗಿ ಹೋರಾಟದಲ್ಲಿ ಸಾಥ್ ನೀಡಿದೆ.
ಈ ಕುರಿತು ವಾಣಿಜ್ಯ ಮಂಡಳಿ ಹೋರಾಟದಲ್ಲಿ ನಟ ಶಿವರಾಜ್ ಕುಮಾರ್ ಮಾತನಾಡಿ, ಕಾವೇರಿ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಲಿ. ನಾವು ಆಯ್ಕೆ ಮಾಡಿರುವ ಸರ್ಕಾರ ವಿವಾದ ಬಗೆಹರಿಸಲು ಮುಂದಾಗಬೇಕು. ನಮ್ಮ ಅನುಕೂಲಕ್ಕಾಗಿ ಪರಿಸ್ಥಿತಿ ಲಾಭ ಪಡೆದುಕೊಳ್ಳಬಾರದು ಎಂದು ಹೇಳಿದರು.

ಇನ್ನೂ ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ಕಾವೇರಿ ತಾಯಿ ಪವರ್ ಅಂಥದ್ದೇ, ಕಾವೇರಿ ತಾಯಿ ಎಲ್ಲರಿಗೂ ಅಗತ್ಯ. ಕಲಾವಿದರು ಬರಲ್ಲ ಅಂತೀರಾ, ಕಲಾವಿದರು ಬಂದು ಏನ್ ಮಾಡಬೇಕು. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ? ನಾವು ಬಂದು ನಿಂತಿಕೊಳ್ತೀವಿ ಏನು ಆಗುತ್ತೆ ಹೇಳಿ? ಎಂದು ನಟ ಶಿವರಾಜ್ ಕುಮಾರ್ ಪ್ರಶ್ನಿಸಿದ್ದಾರೆ.
ನಾವು ಬಂದು ಮಾತನಾಡಿ ಹೋದರೇ ಸಮಸ್ಯೆ ಬಗೆಹರಿಯುತ್ತಾ? ಎಲ್ಲ ನಾಯಕರು ಕೂತು ಮಾತನಾಡಿ ಚರ್ಚೆ ಮೂಲಕ ಬಗೆಹರಿಸಬೇಕು. ಎಲ್ಲರೂ ರೈತರೇ, ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬಸ್ನ ಹೊಡೆದು ಹಾಕಿದರೇ ಹೋರಾಟ ಆಗುತ್ತಾ? ಎಂದು ಶಿವರಾಜ್ ಕುಮಾರ್ ಪ್ರಶ್ನಿಸಿದರು
ಎಲ್ಲ ನಾಯಕರು ಕೂತು ಮಾತನಾಡಿ ಚರ್ಚೆ ಮೂಲಕ ಬಗೆಹರಿಸಬೇಕು. ಎಲ್ಲರೂ ರೈತರೇ, ಸರ್ಕಾರಗಳು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬಸ್ನ ಹೊಡೆದು ಹಾಕಿದರೇ ಹೋರಾಟ ಆಗುತ್ತಾ? ಕಾವೇರಿ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಲಿ. ನಾವು ಆಯ್ಕೆ ಮಾಡಿರುವ ಸರ್ಕಾರ ವಿವಾದ ಬಗೆಹರಿಸಲು ಮುಂದಾಗಬೇಕು ಎಂದು ಹೇಳಿದರು.
ಕಾವೇರಿ ನಮ್ಮ ಜೀವನಾಡಿ, ರೈತರ ಜೀವನಾಡಿ, ರೈತರ ಬಾಳು ಹಸನಾದರೆ ನಾವೆಲ್ಲರೂ ಬದುಕುತ್ತೇವೆ. ನಾಡು, ನುಡಿ, ನೆಲ ಮತ್ತು ಜಲ ವಿಚಾರವಾಗಿ ಸ್ಯಾಂಡಲ್ ವುಡ್ ಕಲಾವಿದರು ಎಲ್ಲರೂ ಒಗ್ಗಟ್ಟಾಗಿ ನಿಲ್ಲುತ್ತೇವೆ. ನಮ್ಮ ಬೆಂಬಲ ಸರ್ಕಾರಕ್ಕಿರುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ರೈತರ ಹಿತ ಕಾಪಾಡಬೇಕು ಎಂದರು.
ಸಮಸ್ಯೆ ಇದೆ. ಸಮಸ್ಯೆಯಿಂದ ಹೇಗೆ ಆಚೆ ಬರಬೇಕು ಯೋಚನೆ ಮಾಡಬೇಕು. ಹೃದಯದಿಂದ ಯೋಚನೆ ಮಾಡ್ಬೇಡಿ ಬುದ್ಧಿಯಿಂದ ಯೋಚಿಸಿ, ಕನ್ನಡಿಗರು ಎಲ್ಲ ಭಾಷೆಯ ಸಿನೆಮಾ ನೋಡುತ್ತಾರೆ. ಅದು ಕನ್ನಡಿಗರು ಮಾತ್ರ. ನಮ್ಮ ಜನ, ನಮ್ಮ ರೈತರ ಮೇಲೆ ಗೌರವ ಇರಲ್ವ? ನಾನು ಯಾವತ್ತಿದ್ರು ತಲೆಯಿಂದ ಅಲ್ಲ ಹೃದಯದಿಂದ ಮಾತಾಡ್ತಿನಿ. ದಯವಿಟ್ಟು ಬ್ಲೇ ಮಾಡಬೇಡಿ. ಎಲ್ಲ ಕಲಾವಿದರು ಒಂದೇ ಅವರಿವರು ಬರಲಿಲ್ಲ ಅನ್ಬೇಡಿ ಎಂದು ಹೇಳಿದರು.











Click it and Unblock the Notifications