ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಲಿತ ಕೋಟಾದಡಿ ಸುನೀಲ್ ವಲ್ಯಾಪುರೆಗೆ ಸಚಿವ ಸ್ಥಾನ ನೀಡಲು ಆಗ್ರಹ

|
Google Oneindia Kannada News

ಬೆಂಗಳೂರು ಜುಲೈ 30: ಚಿಂಚೋಳಿ ಉಪಚುನಾವಣೆಯ ಸಂದರ್ಭದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪನವರು ನುಡಿದಂತೆ ವಿಧಾನಪರಿಷತ್‌ ಸದಸ್ಯರಾದ ಸುನೀಲ್‌ ವಲ್ಯಾಪುರೆ ಅವರನ್ನು ದಲಿತ ಕೋಟಾದಡಿಯಲ್ಲಿ ಮಂತ್ರಿ ಸ್ಥಾನ ನೀಡಬೇಕು ಎಂದು ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಭೋವಿ(ವಡ್ಡರ) ಸಮುದಾಯದ ಮುಖಂಡರುಗಳು ಮನವಿ ಮಾಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಭೋವಿ(ವಡ್ಡರ) ಮಹಾಸಭಾ ಕಾರ್ಯಾಧ್ಯಕ್ಷ ರಾಘವೇಂದ್ರ ಧಾರವಾಡ ಮಾತನಾಡಿ, ''ಕರ್ನಾಟಕ ರಾಜ್ಯದಲ್ಲಿ ಸುಮಾರು 60 ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಭೋವಿ (ವಡ್ಡರ) ಸಮುದಾಯವು ಬಿ.ಜೆ.ಪಿ. ಪಕ್ಷಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದೆ. ಅದರಲ್ಲೂ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಭೋವಿ (ವಡ್ಡರ) ಸಮುದಾಯ ಬಿ.ಜೆ.ಪಿ. ಪಕ್ಷಕ್ಕೆ ನಿರಂತರವಾಗಿ ಬೆಂಬಲ ಸೂಚಿಸಿದೆ. ಈ ಭಾಗದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯ ಸಂಧರ್ಭದಲ್ಲಿ ಪಕ್ಷದಿಂದ ಶಾಸಕರು ಮತ್ತು ಸಂಸದರಾಗಿ ಆಯ್ಕೆಯಾಗಲು ನಮ್ಮ ಸಮುದಾಯದ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸುನೀಲ ವಲ್ಯಾಪುರೆ ಅವರ ಕೊಡುಗೆ ಅಪಾರವಾಗಿದೆ,'' ಎಂದು ಹೇಳಿದರು.

ತಿಪ್ಪಣ್ಣ ಒಡಿರಾಜ, ಅಧ್ಯಕ್ಷರು, ಜಿಲ್ಲಾ ಭೋವಿ (ವಡ್ಡರ) ಸಮಾಜ, ಕಲಬುರ್ಗಿ ಮಾತನಾಡಿ, 2 ಬಾರಿ ಶಾಸಕರಾಗಿ 1 ಬಾರಿ ಸಚಿವರಾಗಿ ಸುನೀಲ್‌ ವಲ್ಯಾಪುರೆ ಉತ್ತಮ ಕೆಲಸ ಮಾಡಿದ್ದು ಉತ್ತಮ ಆಡಳಿತದ ಅನುಭವ ಹೊಂದಿದ್ದವರಾಗಿದ್ದಾರೆ. ಶ್ರೀ.ಬಿ.ಎಸ್. ಯಡಿಯೂರಪ್ಪನವರು ಈ ರಾಜ್ಯದ ಮುಖ್ಯ ಮಂತ್ರಿಯಾಗಬೇಕೆಂದು ತಮ್ಮ ಮೀಸಲು ಕ್ಷೇತ್ರವಾದ ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ಉಪ ಚುನಾವಣೆ ಸಮಯದಲ್ಲಿ ಡಾ. ಅವಿನಾಶ ಜಾಧವರವರಿಗೆ ಬಿಟ್ಟುಕೊಡುವ ಮೂಲಕ ತ್ಯಾಗ ಮನೋಭಾವ ಮರೆದಿದ್ದಾರೆ. ಅಷ್ಟೆ ಅಲ್ಲದೆ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಗೆಲ್ಲಸುವ ಮುಖಾಂತರ .ಬಿ.ಎಸ್.ಯಡಿಯೂರಪ್ಪನವರ ಕೈ ಬಲಪಡಿಸಿದ್ದರು.

Bovi Community demand Minister post to Sunil Vallyapure under Dalit Quota

ಚಿಂಚೋಳಿ ಉಪ ಚುನಾವಣೆ ಪ್ರಚಾರಕ್ಕೆ ಬಂದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪನವರು ಸಾರ್ವಜನಿಕ ಸಮಾರಂಭದಲ್ಲಿ ಸುನೀಲ ವಲ್ಯಾಪುರವರನ್ನು ಎಂ.ಎಲ್.ಸಿ. ಮಾಡಿ ಮಂತ್ರಿಯನ್ನಾಗಿ ಮಾಡಿ ನನ್ನ ಪಕ್ಷದಲ್ಲಯೇ ಇಟ್ಟುಕೊಳ್ಳುತ್ತೇನೆ ಎಂದು ಸಭೆಯಲ್ಲಿ ಘೋಷಿಸಿದ್ದರು. ಅಂದು ಪಕ್ಷಕ್ಕಾಗಿ ತ್ಯಾಗ ಮಾಡಿದ ಸುನೀಲ್‌ ವಲ್ಯಾಪುರೆ ಅವರಿಗೆ ತಾವು ಕೊಟ್ಟ ಮಾತನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಉಳಿಸಿಕೊಳ್ಳುತ್ತಾರೆ ಎನ್ನುವ ನಂಬಿಕೆ ನಮ್ಮದಾಗಿದೆ ಎಂದು ಹೇಳಿದರು.

ಈ ಹಿನ್ನಲೆಯಲ್ಲಿ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಏಕೈಕ ಭೋವಿ (ವಡ್ಡರ) ಸಮುದಾಯದ ಶಾಸಕರಾಗಿರುವ ಸುನೀಲ ವಲ್ಯಾಪುರೆ(55 ವರ್ಷ) ರವರಿಗೆ ದಲಿತ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡಬೇಕು. ಈ ಮೂಲಕ ಹಿಂದುಳಿದ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗಾಗಿ ಅವಕಾಶ ಕಲ್ಪಿಸಬೇಕು ಎಂದು ಮುಖ್ಯಮಂತ್ರಿಗಳಾದ ಬಸವರಾಜ್‌ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪನವರು ಹಾಗೂ ಬಿಜೆಪಿ ಮುಖಂಡರುಗಳಿಗೆ ಮನವಿಯನ್ನು ಸಲ್ಲಿಸಲಿದ್ದೇವೆ ಎಂದು ತಿಪ್ಪಣ್ಣ ಹೇಳಿದರು.

Bovi Community demand Minister post to Sunil Vallyapure under Dalit Quota

ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸ್‌ ಕಂದಗಲ್‌ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೋವಿ ಸಮಾಜ, ಮಹಿಳಾ ಭೋವಿ(ವಡ್ಡರ) ಮಹಾಸಭಾ ಬೆಂಗಳೂರು ರಾಜ್ಯಾಧ್ಯಕ್ಷೆ ಶ್ರೀಮತಿ ಪದ್ಮಾ, ಬಾಗಲಕೋಟೆ ಜಿಲ್ಲಾ ಬೋವಿ ಸಮಾಜದ ಯುವ ಮುಖಂಡ ಈರಣ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Bovi Community demand Minister post to Sunil Vallyapure under Dalit Quota

Recommended Video

ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ಶುರುವಾಯ್ತು ಢವಢವ | Oneindia Kannada

2003ರಲ್ಲಿ ಪರಿಶಿಷ್ಟ ಜಾತಿ ಮೋರ್ಚಾ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದ ಸುನಿಲ್ ವಲ್ಯಾಪುರೆ ಅವರು 2004ರಲ್ಲಿ ಷಹಾಬಾದ್ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದರು. 2008ರಲ್ಲಿ ಚಿಂಚೋಳಿ ಕ್ಷೇತ್ರದಿಂದ ಸ್ಪರ್ಧಿಸಿ ಮತ್ತೊಮ್ಮೆ ಗೆಲುವು ಸಾಧಿಸಿ ಶಾಸಕರಾದರು. 2012ರಲ್ಲಿ ಮೊದಲ ಬಾರಿಗೆ ಮೂಲ ಸೌಕರ್ಯ ಅಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದರು. 2013 ಹಾಗೂ 2018ರಲ್ಲಿ ಚಿಂಚೋಳಿ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಸೋಲು ಕಂಡರು. 2020ರಿಂದ ವಿಧಾನಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

English summary
Bovi Community demand Minister post in Basavaraj Bommai Cabinet to MLC Sunil Yamanappa Vallyapure under Dalit Quota.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X