ಈ ಕಾಂಗ್ರೆಸ್ ಸಚಿವನಿಗೆ ಸಿಎಂ ಆಗುವ ಯೋಗ ಎಂದ ಸ್ವಾಮೀಜಿ
ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕಿತ್ತಾಟ ಬೂದಿ ಮುಚ್ಚಿದ ಕೆಂಡದಂತಿದೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಿಂದ ಇಳಿಯುವ ಬಗ್ಗೆ ಮಾತುಗಳು ಕೇಳಿ ಬರುತ್ತಿದೆ. ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದು ಎಲ್ಲೆಡೆ ಘೋಷಣೆಗಳು ಮೊಳಗುತ್ತಿವೆ. ಈ ಹೊತ್ತಲ್ಲೇ ಕಾಂಗ್ರೆಸ್‌ನ ಮತ್ತೊಬ್ಬ ಪ್ರಭಾವಿ ಸಚಿವರಿಗೆ ಸಿಎಂ ಆಗುವ ಯೋಗದ ಬಗ್ಗೆ ಸ್ವಾಮೀಜಿ ಮಾತನಾಡಿದ್ದಾರೆ.
ಬೋವಿ ಗುರುಪೀಠ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರು ಕಾಂಗ್ರೆಸ್ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ವೇದಿಕೆಯಲ್ಲಿ ಹೇಳಿದ್ದಾರೆ. ಗದಗದಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ ಅವರು, ಸಚಿವ ಎಚ್.ಕೆ.ಪಾಟೀಲ್ ಅವರಿಗೆ ರಾಜ್ಯದ ಮುಖ್ಯಮಂತ್ರಿ ಆಗುವ ಯೋಗವಿತ್ತು. ಈ ಹಿಂದೆಯೇ ಪಾಟೀಲರು ಎರಡರಿಂದ ಮೂರು ಬಾರಿ ಸಿಎಂ ಆಗಿರುತ್ತಿದ್ದರು ಎಂದು ಹೇಳಿದ್ದಾರೆ.

ಈ ಹಿಂದೆ ಎಸ್.ಎಂ.ಕೃಷ್ಣ ಬಳಿಕ ಸಿಎಂ ಸ್ಥಾನಕ್ಕೆ ಎಚ್.ಕೆ.ಪಾಟೀಲ್ ಅವರ ಹೆಸರು ಕೇಳಿಬಂದಿತ್ತು. ಇನ್ನೇನು ಪಾಟೀಲರೇ ಸಿಎಂ ಆಗ್ತಾರೆ ಎಂದು ಹೇಳಲಾಗಿತ್ತು. ಆದರೆ ತಡವಾದರೂ ಅವರಿಗೆ ಸಿಎಂ ಆಗುವ ಯೋಗ ಕೂಡಿ ಬರಲಿ ಎಂದು ಸ್ವಾಮೀಜಿ ಆಶಿಸಿದ್ದಾರೆ. ಸದ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಎಚ್.ಕೆ.ಪಾಟೀಲ್ ಅವರ ಹೆಸರು ಮೊದಲಿನಿಂದಲೂ ಕೇಳಿಬರುತ್ತಲೇ ಇದೆ.
ಮತ್ತೊಂದೆಡೆ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸಿಎಂ ಬದಲಾವಣೆ ಬಗ್ಗೆ ಸ್ಫೋಟಕ ಭವಿಷ್ಯ ನುಡಿದು ಸಂಚಲನ ಸೃಷ್ಟಿಸಿದ್ದಾರೆ. ದಿನಾಂಕದ ಸಮೇತ ಅಶೋಕ್ ಅವರು ಭವಿಷ್ಯ ನುಡಿದಿದ್ದು, ಈ ವರ್ಷದ ನವೆಂಬರ್ ತಿಂಗಳಲ್ಲೇ ಸಿಎಂ ಬದಲಾಗಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ನವೆಂಬರ್ ತಿಂಗಳ 15 ಅಥವಾ 16ನೇ ತಾರೀಖಿನಂದು ಸಿಎಂ ಸಿದ್ದರಾಮಯ್ಯ ತಮ್ಮ ಗಂಟು ಮೂಟೆ ಕಟ್ಟುತ್ತಾರೆ. ಆಗ ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮ್ಯೂಸಿಕಲ್ ಚೇರ್ ಸ್ಪರ್ಧೆ ಇರಲಿದೆ. ಇದು ನೂರರಷ್ಟು ಪಕ್ಕಾ ಸುದ್ದಿ ಎಂದು ಹೇಳುವ ಮೂಲಕ ಚರ್ಚೆ ಹುಟ್ಟುಹಾಕಿದ್ದಾರೆ.
ಕಾಂಗ್ರೆಸ್‌ನಲ್ಲಿ ಮೊದಲೇ ಅಧಿಕಾರ ಹಂಚಿಕೆಯ ಒಪ್ಪಂದವಾಗಿದೆ. ನಾನು ಜ್ಯೋತಿಷಿಯೇನಲ್ಲ, ಆದರೆ ಕಾಂಗ್ರೆಸ್‌ನಲ್ಲಿ ನನಗೂ ಆಪ್ತರಿದ್ದಾರೆ. ಹೀಗಾಗಿಯೇ ಸಿಎಂ ಬದಲಾಗುವ ವಿಚಾರ ನನಗೆ ತಿಳಿದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಕುರ್ಚಿಯನ್ನು ಒದ್ದಾದರೂ ಅಧಿಕಾರವನ್ನು ಕಿತ್ತುಕೊಳ್ಳಲಿದ್ದಾರೆ ಎಂದು ಅಶೋಕ್ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಮೊದಲೇ ಅಧಿಕಾರ ಹಂಚಿಕೆಯ ಒಪ್ಪಂದ ನಡೆದಿದೆ. ಭವಿಷ್ಯ ನುಡಿಯಲು ನಾನು ಜ್ಯೋತಿಷಿಯಲ್ಲ. ಆದರೆ ಕಾಂಗ್ರೆಸ್‌ನಲ್ಲಿ ನನಗೂ ತುಂಬಾ ಜನ ಆಪ್ತರಿರುವ ಕಾರಣ ಸಿಎಂ ಬದಲಾಗುವ ವಿಚಾರ ನನಗೂ ತಿಳಿದಿದೆ. ಡಿ.ಕೆ.ಶಿವಕುಮಾರ್ ಅವರು ಸಿಎಂ ಕುರ್ಚಿಯನ್ನು ಒದ್ದಾದರೂ ಅಧಿಕಾರವನ್ನು ಕಿತ್ತುಕೊಳ್ತಾರೆ ಎಂದು ಅಶೋಕ್ ಹೇಳಿಕೆ ನೀಡಿದ್ದಾರೆ. ಹಾಗಾಗಿ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಫೈಟ್ ಜೋರಾಗಿದ್ದು, ಹಲವರು ಈ ರೇಸ್‌ನಲ್ಲಿದ್ದಾರೆ.












Click it and Unblock the Notifications