Ration Card: ಹೊಸ ರೇಷನ್ ಕಾರ್ಡ್ ಸಲ್ಲಿಕೆಗೆ ಯಾವೆಲ್ಲ ದಾಖಲೆಗಳು ಬೇಕು?-ಮಾಹಿತಿ ಇಲ್ಲಿದೆ ತಿಳಿಯಿರಿ
Ration Card: ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಹಾಗೆಯೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಯನ್ನು ಸುಮಾರು ಒಂದೂವರೇ ವಂರ್ಷದಿಂದ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಅವಕಾಶ ಕಲ್ಪಿಸಿಕೊಡಲಾಗಿದೆ. ಹಾಗಾದರೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ವಿಧಾನ, ಯಾವೆಲ್ಲಾ ದಾಖಲೆಗಳು ಬೇಕು ಹಾಗೂ ಯಾವಾಗಿನಿಂದ ಆರಂಭವಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದೀಗ ಲೋಕಸಭೆ ಚುನಾವಣೆ ಇದ್ದು, ಮತ ಎಣಿಕೆ ಮುಗಿದ ಬಳಿಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಮಾಹಿತಿ ನೀಡಿದೆ. ಇದೀಗ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಿಂದ ಸಿಗುತ್ತಿರುವ ಗ್ಯಾರಂಟಿ ಯೋಜನೆಗಳಿಗೂ ಈ ರೇಷನ್ ಕಾರ್ಡ್ ಬೇಕೆ ಬೇಕು. ಆದ್ದರಿಂದ ಇದರ ಅಗತ್ಯ ಅನಿವಾರ್ಯ ಆಗಿಬಿಟ್ಟಿದೆ.

ಆದರೆ ಈ ಕಾರ್ಡ್ ಇಲ್ಲದೆ ಅದೆಷ್ಟೋ ಮಂದಿ ಅರ್ಹರು ಈ ಸೌಲಭ್ಯಗಳಿಂದ ವಂಚಿತರಾಗಿದ್ದು, ಹೊಸ ಕಾರ್ಡ್ ಅರ್ಜಿ ಸಲ್ಲಿಕೆಗೆ ಕಾತರದಿಂದ ಕಾಯುತ್ತಿದ್ದಾರೆ. ಇದೀಗ ಸರ್ಕಾರ ಜೂನ್‌ನಲ್ಲಿ ಹೊಸ ರೇಷ್‌ನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ. ಹಾಗಾದರೆ ಯಾವೆಲ್ಲ ದಾಖಲೆಗಳು ಬೇಕಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಯಾವೆಲ್ಲ ದಾಖಲೆಗಳು ಬೇಕು?
* ಗುರುತಿನ ಚೀಟಿ
* ಆಧಾರ್ ಕಾರ್ಡ್
* ಫೋಟೋ
* ಮೊಬೈಲ್ ನಂಬರ್
ಅರ್ಜಿ ಸಲ್ಲಿಸುವ ವಿಧಾನ: ಮೊದಲಿಗೆ ಆಹಾರ ಇಲಾಖೆಯ ವೆಬ್‌ಸೈಟ್ https://ahara.kar.nic.in/ಗೆ ಭೇಟಿ ನೀಡಿ ಲಾಗಿನ್ ಆಗಿ. ನಂತರ ಆಯ್ಕೆ ಬಟನ್ ಮೇಲೆ ಕ್ಲಿಕ್ ಮಾಡಿ, ಅಲ್ಲಿ ಕೇಳಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಿ. ಇನ್ನು ಈ ಆನ್‌ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಹಣ ಪಾವತಿ ಮಾಡಬೇಕಿಲ್ಲ. ಆದರೆ ಪಡಿತರ ಚೀಟಿ ಬಂದ ಬಳಿಕ ಸಂಬಂಧಪಟ್ಟಂತಹ ಅಧಿಕಾರಿಯಿಂದ ಪಡೆಯಲು 100 ರೂಪಾಯಿ ಪಾವತಿಸಬೇಕಾಗುತ್ತದೆಯಂತೆ.
ಯಾರೆಲ್ಲ ಅರ್ಹರು?: ವ್ಯಕ್ತಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಕರ್ನಾಟಕದಲ್ಲಿ ವಾಸಿಸುತ್ತಿದ್ದರೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅದೇ ರೀತಿ ಪಡಿತರ ಚೀಟಿ ಹೊಂದಿಲ್ಲದವರು, ಹೊಸದಾಗಿ ವಿವಾಹವಾದ ದಂಪತಿ ಅರ್ಜಿ ಸಲ್ಲಿಸಬಹುದಾಗಿದೆ.












Click it and Unblock the Notifications