Ration Card: ರಾಜ್ಯದಲ್ಲಿ ಬಿಪಿಎಲ್, ಎಪಿಎಲ್ ಪಡಿತರ ಚೀಟಿದಾರರಿಗೆ ಯುಗಾದಿ ಹಬ್ಬಕ್ಕೆ ಭರ್ಜರಿ ಗುಡ್ ನ್ಯೂಸ್
Ration Card: ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಸರ್ಕಾರ ಆಗಾಗ ಹೊಸ ಹೊಸ ಮಾಹಿತಿಯನ್ನು ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಪಡಿತರ ವಿತರಣೆ ವಿಚಾರವಾಗಿ ಬಿಗ್ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕಾಂಗ್ರೆಸ್ 5 ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಪಡಿತರ ವಿತರಣೆ ಮಾಡಲಾಗುತ್ತಿದೆ. ಇನ್ನು ಇದೀಗ ಯುಗಾದಿ ಹಬ್ಬ ಸಮೀಪಿಸುತ್ತಿರುವ ಬೆನ್ನಲ್ಲೇ ಈ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ದೊಡ್ಡ ಶುಭಸುದ್ದಿಯೊಂದನ್ನು ನೀಡಿದೆ.

ಅನ್ನಭಾಗ್ಯ ಯೋಜನೆಯಡಿ ಮಾರ್ಚ್ ತಿಂಗಳಲ್ಲಿ ಫಲಾನುಭವಿಗಳಿಗೆ ಬಂಪರ್ ಕೊಡುಗೆ ಸಿಗಲಿದ್ದು, ಬಾಕಿ ಸೇರಿ 15 ಕೆ.ಜಿ. ಅಕ್ಕಿ ಪ್ರತಿ ಫಲಾನುಭವಿಗಳಿಗೆ ಸಿಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಫೆಬ್ರವರಿ ತಿಂಗಳಲ್ಲಿ ಬಾಕಿಯಿದ್ದ ಹೆಚ್ಚುವರಿ 5 ಕೆ.ಜಿ.ಯನ್ನು ಸೇರಿಸಿ ಈ ತಿಂಗಳು ಒಟ್ಟು 15 ಕೆ.ಜಿ. ಅಕ್ಕಿ ವಿತರಣೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದೆ.
ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿ 5 ಕೆ.ಜಿ.ಅಕ್ಕಿಗೆ ಪರ್ಯಾಯವಾಗಿ ನೀಡಲಾಗುತ್ತಿದ್ದ ಹಣದ ಬದಲು ಫೆಬ್ರವರಿ ತಿಂಗಳಿನಿಂದಲೇ ಅನ್ವಯ ಆಗುವಂತೆ ಅಕ್ಕಿ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಆದರೆ, ಸರ್ಕಾರ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ವಿಳಂಬವಾದ ಹಿನ್ನೆಲೆ ಫೆಬ್ರವರಿಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ಹಂಚಿಕೆ ಆಗಿರಲಿಲ್ಲ. ಡಿಬಿಟಿ ಮೂಲಕ ಹಣವೂ ಜಮಾ ಆಗಿರಲಿಲ್ಲ.
ಆದ್ದರಿಂದ ಫೆಬ್ರವರಿ ತಿಂಗಳಲ್ಲಿ ಬಾಕಿ ಉಳಿದಿದ್ದಾ ಹೆಚ್ಚುವರಿ 5 ಕೆ.ಜಿ. ಅಕ್ಕಿ ಮತ್ತು ಮಾರ್ಚ್ ತಿಂಗಳ 10 ಕೆ.ಜಿ. ಅಕ್ಕಿ ಸೇರಿಸಿ ಒಟ್ಟು 15 ಕೆ.ಜಿ. ಅಕ್ಕಿಯನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಹಂಚಿಕೆ ಮಾಡಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ ನೀಡಿದ್ದಾರೆ.
ರಾಜ್ಯದ ಪ್ರತಿ ನ್ಯಾಯಬೆಲೆ ಅಂಗಡಿಗಳು ಈ ತಿಂಗಳ 10 ಕೆ.ಜಿ. ಅಕ್ಕಿಯೊಂದಿಗೆ ಬಾಕಿ ಇರುವ 5 ಕೆ.ಜಿ. ಹೆಚ್ಚುವರಿ ಅಕ್ಕಿ ವಿತರಣೆ ಮಾಡಲಿವೆ ಎಂದು ತಿಳಿಸಿದ್ದರು.
ಇನ್ನು ಮಾರ್ಚ್ 31ರ ವರಗೆ ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರು ಇ-ಕೆವೈಸಿ ಮಾಡುವ ಹಾಗೂ ಪಡಿತರ ವಿತರಣೆ ಕಾರ್ಯ ಮುಂದುವರೆಯಲಿದೆ. ಪಡಿತರ ಚೀಟಿದಾರರು ಬೆರಳಚ್ಚು ನೀಡಿದ ಕೂಡಲೇ ಪಡಿತರ ಪಡೆಯಬಹುದು. ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ ಎಂದು ಆಹಾರ ಇಲಾಖೆ ಸೂಚಿಸಿದೆ.
ಫೆಬ್ರವರಿ ತಿಂಗಳ ಹೆಚ್ಚುವರಿ 5 ಕೆ.ಜಿ. ಅಕ್ಕಿಯನ್ನು ಈ ತಿಂಗಳ ಪಡಿತರದಲ್ಲಿ ವಿತರಣೆ ಮಾಡುವ ಹಿನ್ನೆಲೆ ಮಾರ್ಚ್ ತಿಂಗಳಲ್ಲಿ ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ 1ರಿಂದ 3 ಸದಸ್ಯರಿದ್ದರೆ ಪ್ರತಿ ಕಾರ್ಡ್‌ಗೆ 35 ಕೆ.ಜಿ. ಅಕ್ಕಿ ಸಿಗಲಿದೆ. 4 ಮಂದಿ ಸದಸ್ಯರಿರುವ ಕಾರ್ಡ್‌ಗೆ 45 ಕೆ.ಜಿ., 5 ಮಂದಿ ಸದಸ್ಯರು ಇರುವ ಕಾರ್ಡ್‌ಗೆ 65 ಕೆ.ಜಿ, 10 ಸದಸ್ಯರಿದ್ದರೆ 165 ಕೆ.ಜಿ ಅಕ್ಕಿ ಹಂಚಿಕೆ ಮಾಡಲಾಗುತ್ತದೆ.
ಇನ್ನು ಏಪ್ರಿಲ್‌ನಿಂದ ನಾಲ್ಕು ಸದಸ್ಯರಿರುವ ಪ್ರತಿ ಕಾರ್ಡ್‌ಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಕಾರ್ಡ್‌ಗೆ 60 ಕೆ.ಜಿಯಂತೆ ಅಕ್ಕಿ ವಿತರಣೆ ಮಾಡಲಾಗುತ್ತದೆ.
ಬಿಪಿಎಲ್ ಪಡಿತರ ಚೀಟಿಯ ಪ್ರತಿ ಫಲಾನುಭವಿಗಳಿಗೆ ಈ ತಿಂಗಳು 15 ಕೆ.ಜಿ ಅಕ್ಕಿ ಸಿಕ್ಕಿದರೆ, ಏಪ್ರಿಲ್‌ನಿಂದ ಪ್ರತಿ ಫಲಾನುಭವಿಗೆ ತಲಾ 10 ಕೆ.ಜಿ.ಯಂತೆ ಅಕ್ಕಿ ವಿತರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ಗಳ ಸಂಖ್ಯೆ 1.28 ಕೋಟಿ ಇದ್ದು, ಒಟ್ಟು 4.21 ಕೋಟಿ ಜನ ಅನ್ನಭಾಗ್ಯ ಯೋಜನೆಯನ್ನು ಪಡೆಯುತ್ತಿದ್ದಾರೆ. ಇವರೆಲ್ಲರು ಈ ಯೋಜನೆ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.












Click it and Unblock the Notifications