BPL, APL Card: ರಾಜ್ಯದಲ್ಲಿ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ; ಎಲ್ಲಿವರೆಗೂ
BPL And APL Ration Card: ರಾಜ್ಯದಲ್ಲಿ ಹೊಸ (ಬಿಪಿಎಲ್, ಎಪಿಎಲ್) ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಲಾಗಿತ್ತು. ಆದರೆ ಇದೀಗ ಮತ್ತೆ ಆರಂಭ ಮಾಡಲಾಗಿದೆ. ಹಾಗಾದ್ರೆ ಎಲ್ಲಿವರೆಗೆ ಹಾಗೂ ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲೆಗಳು ಬೇಕಾಗುತ್ತದೆ ಎನ್ನವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಬಿಪಿಎಲ್ ಕಾರ್ಡ್ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅದರಲ್ಲೂ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಸಮಯ ನಿಗದಿ ಮಾಡಕಾಗಿದೆ. ಮಧ್ಯಾಹ್ನ 1ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025ರಿಂದ 05-05-2025ರ ವರೆಗೆ ಮಧ್ಯಾಹ್ನ 1ರಿಂದ 3 ರ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
* ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು
* ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಕೆ ಮಾಡಬಹುದು
* ಹೊಸದಾಗಿ ವಿವಾಹವಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು.
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತ ಆಗಿರಲಿದೆ.
ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ದಾಖಲೆಗಳು ಅಗತ್ಯ?
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ವಾಹನ ಚಾಲನಾ ಪರವಾನಗಿ
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದೇಗೆ?
* kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಿ
* ಮುಖಪುಟದಲ್ಲಿನ ಇ-ಸೇವೆಗಳು ಎಂಬುದರ ಮೇಲೆ ಕ್ಲಿಕ್ ಮಾಡಿ
* ಅಷ್ಟೇ ಅಲ್ಲದೆ, https://ahara.kar.nic.in/Home/EServices ವೆಬ್‌ಸೈಟ್‌ನಲ್ಲೂ ನೇರವಾಗಿ ಕ್ಲಿಕ್ ಮಾಡಬಹುದು.
* ನಂತರ ನೀವು ಇ-ಪಡಿತರ ಚೀಟಿ ಆಯ್ಕೆ ಮಾಡಿ.
* ನಂತರ ಕೆಳಗಡೆ ಸ್ಕ್ರಾಲ್ ಮಾಡಿದರೆ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ
* ಅಲ್ಲಿ ಕ್ಲಿಕ್ ಮಾಡಿ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ.
* ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ
* ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ
* ಬಳಿಕ ಅರ್ಜಿಯ ಜೊತೆಗೆ ಕೇಳುವಂತಹ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಿ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ.
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಸ್ಥಗಿತವಾಗಿದ್ದೇಕೆ?: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಬಹುತೇಕ ಮಂದಿ ಕಾರ್ಡ್‌ಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಕೇಳಿಬಂದಿತ್ತು. ಬಳಿಕ ಎಚ್ಚೆತ್ತ ಸರ್ಕಾರ ಹೊಸ ಕಾರ್ಡ್ ಅರ್ಜಿ ಸಲ್ಲಿಕೆಯನ್ನು ನಿಲ್ಲಿಸಿಬಿಟ್ಟಿತು. ಅರ್ಹರಲ್ಲದವರು ಸಹ ಬಿಪಿಎಲ್ ಕಾರ್ಡ್‌ಗಳನ್ನು ಪಡೆಯುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಆದರೆ, ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಲಾಗಿದೆ.












Click it and Unblock the Notifications