Ration Card: ರಾಜ್ಯದಲ್ಲಿ ಹೊಸ ಎಪಿಎಲ್, ಬಿಪಿಎಲ್ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ: ಬೇಕಾಗುವ ದಾಖಲೆಗಳ ವಿವರ
BPL, APL Ration Card: ರೇಷನ್ ಕಾರ್ಡ್ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಪಡಿತರದ ಜೊತೆಗೆ ಹಲವು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು, ಇತರೆ ಅರ್ಜಿ ಸಲ್ಲಿಕೆಗಳಿಗೂ ಅಗತ್ಯವಾಗು ಬೇಕಾಗುತ್ತದೆ. ಇಷ್ಟು ದಿನ ನಿಲ್ಲಿಸಿದ್ದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಇದೀಗ ಮತ್ತೆ ಆರಂಭಿಸಲಾಗಿದೆ. ಕೊನೇ ದಿನಾಂಕ, ದಾಖಲೆಗಳು ಹಾಗೂ ಸಮಯಗಳ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಸದ್ಯ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ಆಹಾರ ಇಲಾಖೆ ಮುಂದುವರೆಸಿದೆ. ಈ ನಡುವೆಯೇ ಇದೀಗ ಮತ್ತೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಗ್ಯಾರಂಟಿ ಯೋಜನೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎನ್ನುವ ಕಾರಣದಿಂದ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.

ಕೆಲ ದಿನಗಳ ಹಿಂದೆಯಷ್ಟೇ ಒಂದು ದಿನ ಮಾತ್ರ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿ ಮತ್ತೆ ಸ್ಥಗಿತಗೊಳಿಸಲಾಗಿತ್ತು. ಆದರೆ, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಹೊಸ ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.
ಅರ್ಹ ಫಲಾನುಭವಿಗಳು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್‌ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಎಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಎಲ್ಲಾ ಸದಸ್ಯರ ಆಧಾರ್ ಕಾರ್ಡ್
* ನ್ಯಾಯ ಬೆಲೆ ಅಂಗಡಿ ಸಂಖ್ಯೆ/ಪಕ್ಕದ ಮನೆಯವರ ರೇಷನ್ ಕಾರ್ಡ್
ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಎಲ್ಲಾ ಸದಸ್ಯರ ಆಧಾರ ಕಾರ್ಡ್
* ಒಬ್ಬರ ಜಾತಿ ಮತ್ತು ಆದಾಯ ಪ್ರಮಾಣಪತ್ರ
* ನ್ಯಾಯ ಬೆಲೆ ಅಂಗಡಿ ಸಂಖ್ಯೆ/ಪಕ್ಕದ ಮನೆಯವರ ರೇಷನ್ ಕಾರ್ಡ್
ಯಾರೆಲ್ಲಾ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು?
* ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು
* ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಸಬಹುದು
* ಹೊಸದಾಗಿ ವಿವಾಹ ಆದ ನವದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧಾರ ಆಗಲಿದೆ
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ವಾಹನ ಚಾಲನಾ ಪರವಾನಗಿ
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವ ವಿಧಾನಗಳು
* kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಿ
* ಅಲ್ಲಿ ಕಾಣಿಸುವ ಇ-ಸೇವೆಗಳು ಎಂಬುದರ ಮೇಲೆ ಕ್ಲಿಕ್ ಮಾಡಿ
* ಅಲ್ಲದೆ, https://ahara.kar.nic.in/Home/EServices ವೆಬ್‌ಸೈಟ್‌ನಲ್ಲೂ ನೇರವಾಗಿ ಕ್ಲಿಕ್ ಮಾಡಬಹುದು.
* ನಂತರ ನೀವು ಇ-ಪಡಿತರ ಚೀಟಿ ಆಯ್ಕೆ ಮಾಡಿ
* ನಂತರ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ
* ಅಲ್ಲಿ ಕ್ಲಿಕ್ ಮಾಡಿ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಬೇಕಾಗುತ್ತದೆ.
* ಅಲ್ಲಿ ಕೇಳುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ
* ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ
* ಬಳಿಕ ಅರ್ಜಿಯ ಜೊತೆಗೆ ಕೇಳುವ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ಲೋಡ್ ಮಾಡಿ. ಆಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಇದೀಗ ರಾಜ್ಯದಲ್ಲಿ ಅನರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ಸೇರಿಸುವ ಕೆಲಸ ಮುಂದುವರೆದಿದೆ. ಈ ವೇಳೆ ಅರ್ಹರ ಬಳಿಯ ಬಿಪಿಎಲ್ ಕಾರ್ಡ್‌ಗಳನ್ನು ಸಹ ಎಪಿಎಲ್‌ಗೆ ವರ್ಗಾಹಿಸಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ. ಇದಕ್ಕೆ ಸರ್ಕಾರ ಮತ್ತೊಂದು ಅವಕಾಶ ಕಲ್ಪಿಸಿದೆ. ಯಾರೆಲ್ಲಾ ಅರ್ಹರನ್ನು ಎಪಿಎಲ್‌ಗೆ ಸೇರಿಸಲಾಗಿದೆಯೋ ಅಂತಹವರು ನಿಮ್ಮ ತಾಲ್ಲೂಕಿನ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಈ ಕುರಿತು ಅರ್ಜಿ ಸಲ್ಲಿಸಬಹುದು. ಪರಿಶೀಲನೆ ಬಳಿಕ ಅರ್ಹರು ಎಂದು ತಿಳಿದರೆ, ಮಾತ್ರ ಅವರಿಗೆ ಮತ್ತೆ ಬಿಪಿಎಲ್ ಕಾರ್ಡನ್ನು ಮರುಸ್ಥಾಪನೆ ಮಾಡಿಕೊಡಲಾಗುವುದು ಎಂದು ತಿಳಿಸಲಾಗಿದೆ.












Click it and Unblock the Notifications