ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ: ಬೇಕಾಗುವ ದಾಖಲೆಗಳ ವಿವರ
Ration Card: ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಇದು ಬರೀ ರೇಷನ್ ಪಡೆಯಲು ಅಷ್ಟೇ ಅಲ್ಲದೆ, ಸರ್ಕಾರಿ ಯೋಜನೆಗಳನ್ನು ಪಡೆಯಲು ಸೇರಿದಂತೆ ಇತರೆ ಯಾವುದೇ ಅರ್ಜಿ ಸಲ್ಲಿಕೆಗೆ ಅತ್ಯಗತ್ಯವಾಗಿ ಬೇಕೇ ಬೇಕಾಗುತ್ತದೆ. ಇನ್ನೂ ಈ ಕಾರ್ಡ್ ಕುರಿತು ಆಗಾಗ ಮಹತ್ವದ ಮಾಹಿತಿಗಳು ಹೊರಬೀಳುತ್ತಿರುತ್ತವೆ. ಕೆಲ ದಿನಗಳ ಹಿಂದೆಯಷ್ಟೇ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿದಿದ್ದು, ಇದೀಗ ಮತ್ತೆ ಆರಂಭವಾಗಿದೆ. ಕೊನೆ ದಿನಾಂಕ ಹಾಗೂ ಬೇಕಾಗುವ ದಾಖಲೆಗಳ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ.
ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸ ನಡೆಯುತ್ತಿದೆ. ಅಲ್ಲದೆ, ಶ್ರೀಮಂತರು ಅಂದರೆ ಅನರ್ಹರ ಬಳಿಯಿರುವ ಪಡಿತರ ಚೀಟಿಗಳನ್ನು ರದ್ದುಪಡಿಸುತ್ತವ ಕಾರ್ಯವೂ ಮುಂದುವರೆದಿದೆ. ಈ ನಡುವೆಯೇ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಇಂದು ಮತ್ತೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಹೌದು.. ರಾಜ್ಯದಲ್ಲಿ ಹೊಸ (ಬಿಪಿಎಲ್, ಎಪಿಎಲ್, ಇತ್ಯಾದಿ) ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಅರ್ಹರು ಇಂದು (ಸೆಪ್ಟೆಂಬರ್ 6) ಮಧ್ಯಾಹ್ನ 12 ಗಂಟೆಯೊಳಗೆ ಅರ್ಜಿ ಸಲ್ಲಿಕೆ ಮಾಡಬೇಕಿದೆ. ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಫಲಾನುಭವಿಗಳು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಇರಬೇಕಾದ ಅರ್ಹತೆಗಳು
* ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು
* ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಕೆ ಮಾಡಬಹುದು
* ಹೊಸದಾಗಿ ವಿವಾಹ ಆದ ನವದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತ ಆಗಲಿದೆ
ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ವಾಹನ ಚಾಲನಾ ಪರವಾನಗಿ
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ
ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ವಿಧಾನ
* kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಿ
* ಅಲ್ಲಿ ಕಾಣಿಸುವ ಇ-ಸೇವೆಗಳು ಎಂಬುದರ ಮೇಲೆ ಕ್ಲಿಕ್ ಮಾಡಿ
* ಅಲ್ಲದೆ, https://ahara.kar.nic.in/Home/EServices ವೆಬ್‌ಸೈಟ್‌ನಲ್ಲೂ ನೇರವಾಗಿ ಕ್ಲಿಕ್ ಮಾಡಬಹುದು.
* ನಂತರ ನೀವು ಇ-ಪಡಿತರ ಚೀಟಿ ಆಯ್ಕೆ ಮಾಡಿ
* ನಂತರ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ
* ಅಲ್ಲಿ ಕ್ಲಿಕ್ ಮಾಡಿ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಾಡಬೇಕಾಗುತ್ತದೆ
* ಅಲ್ಲಿ ಕೇಳುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕಾಗುತ್ತದೆ
* ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ
* ಬಳಿಕ ಅರ್ಜಿಯ ಜೊತೆಗೆ ಕೇಳುವ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ಲೋಡ್ ಮಾಡಿ. ಆಗ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.












Click it and Unblock the Notifications