ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಪಿಎಲ್, ಎಪಿಎಲ್ ಪಡಿತರ ಚೀಟಿದಾರರ ಗಮನಕ್ಕೆ ಈ ಸುದ್ದಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30: ಬಿಪಿಎಲ್, ಎಪಿಎಲ್ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಿಕೊಳ್ಳಲು ಇದ್ದ ಸಮಸ್ಯೆಗೆ ಈಗ ಪರಿಹಾರ ಸಿಕ್ಕಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ, ನವೆಂಬರ್ ತಿಂಗಳದ ಅಂತ್ಯದವರೆಗೂ ಇಂಥದ್ದೊಂದು ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಕಲ್ಪಿಸಿದೆ. ನಿಯಮಾನುಸಾರ ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡುದಾರರು ಇ-ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳಬೇಕಿದೆ.

 ಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಿಪಿಎಲ್‌ ಕಾರ್ಡ್‌ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಪಡಿತರ ಚೀಟಿದಾರರು ಇ -ಕೆವೈಸಿ ಮಾಡಿಸಿಕೊಳ್ಳಲು ಇದ್ದ ಸರ್ವರ್ ಸಮಸ್ಯೆಯನ್ನು ಈಗ ಸರಿಪಡಿಸಲಾಗಿದೆ ಪಡಿತರ ವಿತರಣೆ ಹಾಗೂ ಇ ಕೈವೆಸಿ ಎರಡು ಏಕಕಾಲಕ್ಕೆ ಕಾರ್ಯನಿರ್ವಹಣೆ ಸಾಧ್ಯವಾಗದೆ ಸರ್ವರ್ ಓವರ್ ಲೋಡ್ ಆಗಿ ತಾಂತ್ರಿಕ ತೊಂದರೆ ಕಾಣಿಸಿಕೊಳ್ಳುತ್ತಿತ್ತು. ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪಡಿತರ ಅಂಗಡಿಗಳಲ್ಲಿ ಪಡಿತರ ವಿತರಣೆ ಇಲ್ಲದ ದಿನಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ತಿಳಿಸಲಾಗಿತ್ತು.

ಒನ್ ನೇಶನ್, ಒನ್ ರೇಶನ್: ದೇಶದಾದ್ಯಂತ ಒಂದೇ ಪಡಿತರ ಚೀಟಿಒನ್ ನೇಶನ್, ಒನ್ ರೇಶನ್: ದೇಶದಾದ್ಯಂತ ಒಂದೇ ಪಡಿತರ ಚೀಟಿ

ಇ -ಕೆವೈಸಿ ಅಪ್ಡೇಟ್ ಮಾಡಿಸಿಕೊಂಡ ಬಳಿಕ ನೈಜ ಫಲಾನುಭವಿಗಳ ಲೆಕ್ಕ ಸಿಗಲಿದೆ. ಇಕೆವೈಸಿ ಅಪ್ಡೇಡ್ ಗಾಗಿ ಪಡಿತರ ಚೀಟಿದಾರರು ಯಾವುದೇ ಶುಲ್ಕ ಪಾವತಿಸಬೇಕಿಲ್ಲ. ಇನ್ನು ವೃದ್ಧರು, ವಿಶೇಷಚೇತನರು ಮತ್ತು ಕುಟುಂಬದವರೊಂದಿಗೆ ವಾಸವಿಲ್ಲದ ಸದಸ್ಯರು ಈ ಕೆವೈಸಿ ಅಪ್ಡೇಟ್ ಮಾಡಲು ಸಾಧ್ಯವಾಗದಿದ್ದರೆ ಆಹಾರ ನಿರೀಕ್ಷಕರ ಪರಿಶೀಲನೆಗೆ ಒಳಪಟ್ಟು ಅವರಿಗೆ ವಿನಾಯಿತಿ ಪಡೆಯಬಹುದು.

BPL APL card holders e KYC now at Public Distribution System Shop

ಪಡಿತರ ಚೀಟಿದಾರರು ನಿಗದಿತ ಅವಧಿಯಲ್ಲಿ ತಮ್ಮ ಇ ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳದಿದ್ದರೆ ಪಡಿತರ ಹಂಚಿಕೆ ಸ್ಥಗಿತಗೊಳಿಸುವುದಾಗಿ ಆಹಾರ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಪಡಿತರ ಚೀಟಿಯಲ್ಲಿ ಹೆಸರಿದ್ದು, ಮೃತಪಟ್ಟವರು, ಮನೆ ಬಿಟ್ಟು ಹೋದವರು, ಮದುವೆಯಾಗಿ ಗಂಡನ ಮನೆಗೆ ಹೋದವರ ಹೆಸರಿನಲ್ಲಿಯೇ ಪಡಿತರ ಪೂರೈಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಕಾರ್ಡುದಾರರ ಬಯೋಮೆಟ್ರಿಕ್ ಪಡೆಯಲಾಗುತ್ತದೆ.

English summary
BPL APL card holders now can get their e KYC done at any Public Distribution System Shopes in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X