BPL Card Big Update: ರಾಜ್ಯದಲ್ಲಿ ಇಂತಹ ಬಿಪಿಎಲ್, ಎಪಿಎಲ್ ಕಾರ್ಡ್‌ದಾರರಿಗೆ ಬಿಗ್ ಶಾಕ್ ನೀಡಲು ಮುಂದಾದ ಸರ್ಕಾರ
BPL Card Big Update: ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಅದರಲ್ಲೂ ಹಲವು ವಿಧದ ಕಾರ್ಡ್‌ಗಳಿವೆ. ಒಂದು ವೇಳೆ ಬಿಪಿಎಲ್ ಕಾರ್ಡ್ ಪಡೆಯಬೇಕೆಂದರೆ ಕೆಲವೊಂದು ನಿಯಮಗಳಿರುತ್ತವೆ. ಇದೀಗ ಕೆಲವರ ಕೆಲವರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗದೆ. ಹಾಗಾದರೆ ಇದಕ್ಕೆ ಪ್ರಮುಖ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬಿಪಿಎಲ್ ಕಾರ್ಡ್‌ಗೆ ಸಂಬಂಧಿಸಿದಂತೆ ಸರ್ಕಾರ ಕೆಲವೊಂದು ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದ್ದು, ಇನ್ಮುಂದೆ ಕೆಲವರ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ. ನಿಯಮಗಳ ವಿರುದ್ಧವಾಗಿ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊಂದಿದ್ದರೆ ತಕ್ಷಣವೇ ಆಯಾ ತಾಲೂಕು ಕಚೇರಿಯ ಆಹಾರ ಇಲಾಖೆಗೆ ಒಪ್ಪಿಸಬೇಕು ಎಂದು ಸೂಚನೆ ನೀಡಿದೆ. ಹಾಗೆಯೇ ಯಾರೆಲ್ಲ ಪಡಿತರ ಚೀಟಿ ಹೊಂದಬಹುದೆಂತಲೂ ತಿಳಿಸಿದೆ.

ಅನರ್ಹರು ಕಾರ್ಡ್‌ಗಳಮ್ನು ಒಂದು ವೇಳೆ ಒಪ್ಪಿಸದಿದ್ದರೆ ಕಾನೂನು ಪ್ರಕಾರ ದಂಡ ಮತ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಇನ್ನು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಸಲು ಮುಂದಾಗಿದ್ದು, ಗ್ಯಾರಂಟಿ ಯೋಜನೆಗಳ ಫಲ ಅರ್ಹರಿಗೆ ಮಾತ್ರ ಸಿಗುವಂತಾಗಬೇಕು. ಈ ಮೂಲಕ ಅನಗತ್ಯವಾಗಿ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.
ಪಡಿತರ ಚೀಟಿಗೆ ಯಾರೆಲ್ಲ ಅನರ್ಹರು.?
* ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳಿಂದ ವೇತನ ಪಡೆಯುತ್ತಿರುವವರು.
* ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು.
* ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
* ಜೀವನೋಪಾಯಕ್ಕಾಗಿ ಸ್ವಂತ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಕಾರು ಸೇರಿದಂತೆ ನಾಲ್ಕು ಚಕ್ರದ ವಾಣಿಜ್ಯ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.
* ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂಪಾಯಿಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು.
* ಸರ್ಕಾರ ನಿಗದಿಪಡಿಸಿರುವ ಈ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಸೂಚನೆ ನೀಡಿದೆ.
* ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಈಗಾಗಲೇ ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 52,000 ಕಾರ್ಡ್ ರದ್ದಾಗುವ ಸಾಧ್ಯತೆಯಿದೆ ಎನ್ನುವ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.












Click it and Unblock the Notifications