BPL: ಬಿಪಿಎಲ್ ಕಾರ್ಡ್ ಕೈತಪ್ಪಿದವರಿಗೆ ಭರ್ಜರಿ ಸಿಹಿ ಸುದ್ದಿ, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಯಾವಾಗ?
BPL Card: ರಾಜ್ಯದಲ್ಲಿ ಸರ್ಕಾರವು ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯ ಕೈಗೊಂಡಿತ್ತು. ಇದೇ ವೇಳೆ ಯಾರೆಲ್ಲಾ ಅರ್ಹ ಫಲಾನುಭವಿಗಳ BPL ಕಾರ್ಡ್ ರದ್ದಾಗಿವೆಯೋ, ಅಂತಹವರು ಮತ್ತೆ ಅರ್ಜಿ ಸಲ್ಲಿಸಿ ಹಿಂಪಡೆಯಬಹುದು ಅಂತಲೂ ತಿಳಿಸಿತ್ತು. ಅದರಂತೆಯೇ ಈ ಕುರಿತು ಇದೀಗ ಬಿಗ್ ಅಪ್ಡೇಟ್‌ವೊಂದನ್ನು ನೀಡಿದೆ. ಇಲ್ಲಿದೆ ನೋಡಿ ಮಾಹಿತಿ.
ರಾಜ್ಯದಲ್ಲಿ ನಿಯಮ ಉಲ್ಲಂಘನೆ ಹಾಗೂ ಇತರೆ ತಾಂತ್ರಿಕ ಕಾರಣಗಳಿಂದಾಗಿ ರದ್ದಾಗಿದ್ದ ಬಿಪಿಎಲ್ ಪಡಿತರ ಚೀಟಿಗಳನ್ನು ಮರುಪಡೆಯಲು ಸಾರ್ವಜನಿಕರಿಗೆ ಸರ್ಕಾರ ಮತ್ತೊಂದು ಸುವರ್ಣಾವಕಾಶ ನೀಡಿದೆ. ಈ ಹಿಂದೆ ಬಿಪಿಎಲ್ ಕಾರ್ಡ್‌ಗಳ ಮರುಸ್ಥಾಪನೆಗೆ ವಿಧಿಸಲಾಗಿದ್ದ 45 ದಿನಗಳ ಕಠಿಣ ಕಾಲಮಿತಿಯನ್ನು ಈಗ ರದ್ದುಗೊಳಿಸಲಾಗಿದ್ದು, ಅರ್ಹ ಕುಟುಂಬಗಳು ಯಾವುದೇ ಆತಂಕ ಇಲ್ಲದೆ ಅರ್ಜಿ ಸಲ್ಲಿಸಬಹುದಾಗಿದೆ.

4 ಲಕ್ಷಕ್ಕೂ ಹೆಚ್ಚು ಕಾರ್ಡ್‌ಗಳು ಎಪಿಎಲ್‌ಗೆ ವರ್ಗಾವಣೆ
ರಾಜ್ಯ ಸರ್ಕಾರದಿಂದ ನಡೆಸಲಾದ ಪರಿಶೀಲನೆಯಲ್ಲಿ ಒಟ್ಟು 13,87,651 ಪಡಿತರ ಚೀಟಿಗಳು ನಿಯಮಾವಳಿಗಳಿಗೆ ವಿರುದ್ಧವಾಗಿರುವುದು ಪತ್ತೆ ಆಗಿದ್ದವು. ಈ ಪೈಕಿ ಪ್ರಾಥಮಿಕ ಹಂತದಲ್ಲಿ ಸುಮಾರು 4 ಲಕ್ಷಕ್ಕೂ ಅಧಿಕ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅವುಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲಾಗಿತ್ತು. ಇದರಿಂದಾಗಿ ಅನೇಕ ಬಡ ಕುಟುಂಬಗಳು ರೇಷನ್ ಮತ್ತು ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿದ್ದವು. ಈ ಹಿನ್ನೆಲೆಯಲ್ಲಿ ಯಾವುದೇ ಅರ್ಹ ಕುಟುಂಬಕ್ಕೆ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂದ ಸರ್ಕಾರ ಗಡುವನ್ನು ಸಡಿಲಿಕೆ ಮಾಡಿದೆ.
ಬಿಪಿಎಲ್ ಕಾರ್ಡ್ ಮರುಪಡೆಯಲು ಇರುವ ಮುಖ್ಯ ಷರತ್ತುಗಳು
* ವಾರ್ಷಿಕ ಆದಾಯ: ಕುಟುಂಬದ ಒಟ್ಟು ವಾರ್ಷಿಕ ಆದಾಯವು 1.20 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿರಬಾರದು.
* ಆದಾಯ ತೆರಿಗೆ: ಕುಟುಂಬದ ಯಾವುದೇ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿರಬಾರದು.
* ಜಮೀನಿನ ಮಿತಿ: ಅರ್ಜಿದಾರರ ಹೆಸರಿನಲ್ಲಿ 7 ಎಕರೆಗಿಂತ ಹೆಚ್ಚಿನ ಕೃಷಿ ಭೂಮಿ ಇರಬಾರದು.
ಕಾರ್ಡ್ ಪಡೆಯುವ ಪ್ರಕ್ರಿಯೆಯ ವಿವರ
ಈ ಮೇಲಿನ ಷರತ್ತುಗಳಿಗೆ ಒಳಪಡುವ ನಾಗರಿಕರು ಅಗತ್ಯ ದಾಖಲೆಗಳೊಂದಿಗೆ ತಮ್ಮ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬೇಕು. ಅರ್ಜಿ ಸಲ್ಲಿಕೆಯಾದ ಬಳಿಕ ತಹಶೀಲ್ದಾರ್ ನೇತೃತ್ವದ ತಂಡವು ಸ್ಥಳ ಪರಿಶೀಲನೆ ಹಾಗೂ ದಾಖಲೆಗಳ ಮರುಪರಿಶೀಲನೆ ನಡೆಸಲಿದೆ. ಅರ್ಹತೆ ದೃಢಪಟ್ಟ ತಕ್ಷಣವೇ ಬಿಪಿಎಲ್ ಕಾರ್ಡ್ ಅನ್ನು ಮರುಸಕ್ರಿಯಗೊಳಿಸಲು ಆಹಾರ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗುತ್ತದೆ.
ಹೊಸ ಕಾರ್ಡ್‌ಗಳ ವಿತರಣೆ ಪ್ರಕ್ರಿಯೆ ಆರಂಭ ಯಾವಾಗ?
ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಈವರೆಗೆ ಯಾವುದೇ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿಲ್ಲ. ಸದ್ಯ ಬಾಕಿ ಉಳಿದಿರುವ ಸುಮಾರು 2.90 ಲಕ್ಷ ಹೊಸ ಅರ್ಜಿಗಳನ್ನು ವಿಲೇವಾರಿ ಮಾಡುವ ಮುನ್ನ ಈಗ ರದ್ದಾಗಿರುವ ಅರ್ಹ ಕಾರ್ಡ್‌ಗಳನ್ನು ಸರಿಪಡಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಇವೆಲ್ಲ ಮುಗಿದ ಬಳಿಕವೇ ಹೊಸ ಕಾರ್ಡ್‌ಗಳ ವಿತರಣೆ ಪ್ರಕ್ರಿಯೆ ಆರಂಭವಾಗಲಿದೆ.
ಇದೇ ವೇಳೆ ಸತತ ಆರು ತಿಂಗಳ ಕಾಲ ಪಡಿತರ ಧಾನ್ಯಗಳನ್ನು ಪಡೆಯದೆ ಇರುವ ಬಿಪಿಎಲ್ ಕಾರ್ಡ್‌ಗಳನ್ನು ಸ್ವಯಂಚಾಲಿತವಾಗಿ ಅಮಾನತುಗೊಳಿಸುವ ಪ್ರಕ್ರಿಯೆ ಎಂದಿನಂತೆ ಮುಂದುವರಿಯಲಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ ಯಾರೆಲ್ಲಾ ಫಲಾನುಭವಿಗಳ ಬಿಪಿಎಲ್ ಪಡಿತರ ಚೀಟಿ ರದ್ದಾಗಿದೆಯೋ ಅಂತಹವರಿಗೆ ಇದು ನೆಮ್ಮದಿ ನೀಡಿದೆ. ಮತ್ತೊಂದೆಡೆ ಈ ಮಹತ್ವದ ನಿರ್ಧಾರದಿಂದ ಅನರ್ಹರಿಗೆ ಬಿಗ್ ಶಾಕ್ ಕೊಟ್ಟಂತಾಗಿದೆ ಎಂದರೆ ತಪ್ಪಾಗಲಾರದು.












Click it and Unblock the Notifications