Government Employee: ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದ ಕರ್ನಾಟಕ ಸರ್ಕಾರ
ಬೆಂಗಳೂರು, ನವೆಂಬರ್ 21: ಕರ್ನಾಟಕದ ಸರ್ಕಾರಿ ನೌಕರರು ತುಟ್ಟಿಭತ್ಯೆ (ಡಿಎ) ಏರಿಕೆ ಮಾಡಲಿದೆ ಎಂದು ಕಾದು ಕುಳಿತಿದ್ದರು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಸರ್ಕಾರಿ ನೌಕರರು ಈ ಕುರಿತು ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರದ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿಯೇ ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕೆಲವು ಬಿಪಿಎಲ್ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಗೊಳಿಸಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಲಾಗುತ್ತಿದೆ.

ಭಾನುವಾರ ಬಾಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, "ಅನರ್ಹರ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ" ಎಂದು ಸ್ಪಷ್ಟಪಡಿಸಿದ್ದರು.
ಸಿದ್ದರಾಮಯ್ಯ ಟ್ವೀಟ್: ಬುಧವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, "ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ" ಎಂದು ಹೇಳಿದ್ದಾರೆ.
"ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು. ಬಡ ಕುಟುಂಬದವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು" ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ ಫಲಾನುಭವಿಗಳ ವಿಚಾರ ಬಂದಾಗ ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿತ್ತು. ಈಗ ಫಲಾನುಭವಿಗಳ ಪರಿಶೀಲನೆ ವೇಳೆ ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದೆ.
ಬಹಳ ವರ್ಷಗಳಿಂದ ಬಿಪಿಎಲ್ ಕಾರ್ಡ್ ಫಲಾನುಭವಿಗಳನ್ನು ಗುರುತಿಸುವಾಗ ಸರ್ಕಾರಿ ನೌಕರರನ್ನು ಕೈ ಬಿಡಬೇಕು ಎಂದು ಒತ್ತಾಯಿಸಲಾಗುತ್ತಿತ್ತು. ಈಗ ಮುಖ್ಯಮಂತ್ರಿಗಳೇ ಸರ್ಕಾರಿ ನೌಕರರ ಬಿಪಿಎಲ್ ಕಾರ್ಡ್ ರದ್ದಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.
— CM of Karnataka (@CMofKarnataka) November 20, 2024
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ…
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರ ಬಹಳ ಗೊಂದಲಕ್ಕೆ ಕಾರಣವಾಗಿದೆ. ಆದ್ದರಿಂದ ಗುರುವಾರ ವಿಧಾನಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ. ಎಚ್. ಮುನಿಯಪ್ಪ ಪತ್ರಿಕಾಗೋಷ್ಠಿಯನ್ನು ಕರೆದಿದ್ದು, ಈ ಕುರಿತು ಮಾಹಿತಿ ನೀಡಲಿದ್ದಾರೆ.
ಅನರ್ಹ ಬಿಪಿಎಪ್ ಕಾರ್ಡ್ ರದ್ದು ವಿಚಾರ, ಬಿಪಿಎಲ್ ಕಾರ್ಡ್ ಹಂಚಿಕೆ ಮಾನದಂಡ, ಎಪಿಎಲ್ ಕಾರ್ಡ್ ರದ್ದಾಗುವ ಆತಂಕ ಮುಂತಾದ ವಿಚಾರಗಳ ಕುರಿತು ಸಚಿವರು ಸ್ಪಷ್ಟನೆಯನ್ನು ನೀಡುವ ನಿರೀಕ್ಷೆ ಇದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರಾಜ್ಯದಲ್ಲಿ ರೇಷನ್ ಕಾರ್ಡ್ ಪರಿಷ್ಕರಣೆಗೆ ಸಿದ್ಧತೆ ನಡೆಸುತ್ತಿದೆ. ಸದ್ಯದ ಮಾಹಿತಿ ಪ್ರಕಾರ 13,87,652 ರೇಷನ್ ಕಾರ್ಡ್ ಪರಿಷ್ಕರಣೆ ಮಾಡಲಾಗುತ್ತದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಹ ವರದಿ ಸಲ್ಲಿಕೆ ಮಾಡಲಾಗಿದೆ. ಇಲ್ಲಿಯವರೆಗೆ 3,81,983 ರೇಷನ್ ಕಾರ್ಡ್‌ಗಳನ್ನು ರದ್ದು/ ಅಮಾನತು ಮಾಡಲಾಗಿದ್ದು 10,05,669 ರೇಷನ್ ಕಾರ್ಡ್ ಪರಿಷ್ಕರಣೆ ಮಾಡಬೇಕಿದೆ ವರದಿಯಲ್ಲಿ ತಿಳಿಸಿದೆ.












Click it and Unblock the Notifications