BPL Card Cancelation: ಬಿಪಿಎಲ್ ಕಾರ್ಡ್ದಾರರಿಗೆ ಕೇಂದ್ರ ಸರ್ಕಾರದ ವರದಿ ಬಿಗ್ ಶಾಕ್
BPL Card Cancelation: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಇದೀಗ ಕೇಂದ್ರ ಸರ್ಕಾರ ಕಳುಹಿಸಿರುವ ವರದಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಮತ್ತೊಂದು ಬಿಗ್ ಕೊಟ್ಟಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಶ್ರೀಮಂತರು ಅಂದರೆ ಅನರ್ಹರು ಸಹ ಬಿಪಿಎಲ್ ಕಾರ್ಡ್ಗಳನ್ನು ಪಡೆದುಕೊಂಡಿದ್ದು, ಅಂತಹವರನ್ನು ಎಪಿಎಲ್ಗೆ ವರ್ಗಾಹಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈ ನಡುವೆಯೇ ಇದೀಗ ಕೇಂದ್ರ ಸರ್ಕಾರ ವರದಿ ರಾಜ್ಯದ ಬಿಪಿಎಲ್ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಅದೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ರಾಜ್ಯದಲ್ಲಿ ಅಕ್ರಮವಾಗಿ ಬಿಪಿಎಲ್ ಪಡಿತರ ಚಿಟಿಗಳನ್ನು ಹೊಂದಿರುವುದರ ವಿರುದ್ಧ ಕೇಂದ್ರ ರಾಜ್ಯ ಸರ್ಕಾರಗಳು ಜಂಟಿ ಸಮರ ಸಾರಿವೆ. ಈ ಹಿನ್ನೆಲೆ ರಾಜ್ಯದಲ್ಲಿ ನಕಲಿ ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್ ಎದುರಾದಂತಾಗಿದೆ. ದಾಖಲೆ ಪ್ರಕಾರ, 7.5 ಎಕ್ಟೇರ್ (3.035 ಹೆಕ್ಟೇರ್) ಭೂಮಿ ಹೊಂದಿದ್ದರೂ 34,710 ಕುಟುಂಬಗಳು ಬಿಪಿಎಲ್ ಕಾರ್ಡ್ದಾರರಾಗಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಬೇಕಂದ್ರೆ, ಅದಕ್ಕೆ ಆಧಾರ್ ನಂಬರ್ ಜೋಡಣೆ ಕಡ್ಡಾಯವಾಗಿದೆ. ಇದನ್ನೇ ಪ್ರಮುಖ ದಾಖಲೆಯನ್ನಾಗಿ ಮಾಡಿ ಅಕ್ರಮ ಬಿಪಿಎಲ್ ಕಾರ್ಡ್ದಾರರನ್ನು ಕೇಂದ್ರ ಸರ್ಕಾರ ಪತ್ತೆ ಹಚ್ಚಿ ರಾಜ್ಯ ಸರ್ಕಾರಕ್ಕೆ ವರದಿ ಕಳುಹಿಸಿದೆ ಎಂದು ವಿಜಯ ಕರ್ನಾಟಕ ವರದಿ ಮಾಡಿದೆ.
ಮಾಹಿತಿ ಪ್ರಕಾರ, 7,76,206 ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 2,09,048 ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸಲಾಗಿದೆ. ಇದೇ ಆಧಾರದಲ್ಲಿ ರಾಜ್ಯ ಸರ್ಕಾರವು ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆಯನ್ನು ನೀಡಿದೆ.
ಬ್ಯಾಂಕ್ ಲೋನ್, ಖಾಸಗಿ ಹಾಗೂ ಸರ್ಕಾರಿ ಉದ್ಯೋಗಿಗಳು, ವ್ಯಾಪಾರ ನಡೆಸುವವರು ಐಟಿ ರಿಟರ್ನ್ಸ್ ಫೈಲ್ ಮಾಡಿಸುತ್ತಿದ್ದು, ಇದರಿಂದ ವಾರ್ಷಿಕ 1.20 ಲಕ್ಷ ರೂಪಾಯಿಗೂ ಅಧಿಕ ಆದಾಯ ಇರುವವರ ಸ್ಪಷ್ಟ ಮಾಹಿತಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಿಕ್ಕಿದೆ. ಇದೇ ಅಂಕಿ-ಸಂಕಿಗಳ ಪ್ರಕಾರ, ರಾಜ್ಯದಲ್ಲಿ 1.20 ಲಕ್ಷ ರೂಪಾಯಿಗೂ ಹೆಚ್ಚು 5,80,415 ಮಂದಿ ಬಿಪಿಎಲ್ ಪಡಿತರ ಹೊಂದಿದ್ದು, ಅದರಲ್ಲಿ 1,00,592 ಪಡಿತರ ಚೀಟಿದಾರರ ಮೇಲೆ ಕ್ರಮ ಜರುಗಿಸಿ ಎಪಿಎಲ್ಗೆ ವರ್ಗಾಹಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಹೀಗೆ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಇದೀಗ ಕೇಂದ್ರ ಸರ್ಕಾರ ನೀಡಿದ ವರದಿ ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಈ ಗಾಳದಿಂದ ನಕಲಿ ಬಿಪಿಎಲ್ ಕಾರ್ಡ್ದಾರರು ತಪ್ಪಿಸಿಕೊಳ್ಳದಂತೆ ಆಗಿದೆ. ಅನರ್ಹರು ನಕಲಿ ದಾಖಲೆ ಸೃಷ್ಟಿಸಿ ಬಡವರ ಅನ್ನ ಹಾಗೂ ಸೌಲಭ್ಯಗಳನ್ನು ಕಿತ್ತುಕೊಳ್ಳುವ ಕೆಲಸ ಮಾಡುತ್ತಿದ್ದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications