BPL Card: ಬಿಪಿಎಲ್ ಕಾರ್ಡ್‌ದಾರರಿಗೆ ಸಂಕ್ರಾಂತಿಗೂ ಸಿಗದ ಇಂದಿರಾ ಕಿಟ್?; ವಿಳಂಬಕ್ಕೆ ಅಸಲಿ ಕಾರಣ ಏನು?
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ದೇವರಾಜ್ ಅಸರು ಅವರ ದಾಖಲೆ ಬ್ರೇಕ್ ಮಾಡಿದ ಖುಷಿಯಲ್ಲಿದ್ದಾರೆ. ಆದರೆ, ಕರ್ನಾಟಕ ಸರ್ಕಾರದ ಜನಪ್ರಿಯ ಯೋಜನೆಯಾದ ಅನ್ನಭಾಗ್ಯದಡಿ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು ಇಂದಿರಾ ಕಿಟ್ ವಿತರಿಸುವ ಭರವಸೆ ನೀಡಿತ್ತು. ಆದರೆ ಇದೀಗ ಜನವರಿ ತಿಂಗಳಲ್ಲೂ ಈ ಭರವಸೆ ಈಡೇರಿಲ್ಲ. ರಾಜ್ಯ ಸರ್ಕಾರ ಕೊಟ್ಟ ಭರವಸೆಯಂತೆ ನಡೆದುಕೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
5 ಕೆಜಿ ಅಕ್ಕಿ ಬದಲಾಗಿ ಬಡ ಕುಟುಂಬಗಳಿಗೆ ಸಕ್ಕರೆ, ಅಡುಗೆ ಎಣ್ಣೆ, ತೊಗರಿ ಬೇಳೆ ಮತ್ತಿತರ ದಿನಸಿ ಪದಾರ್ಥಗಳನ್ನು ನೀಡುವ ಭರವಸೆಯನ್ನ ನೀಡಿತ್ತು. ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಜನವರಿಯಿಂದ ಇಂದಿರಾ ಕಿಟ್ ವಿತರಣೆ ಮಾಡುವ ನಿರ್ಧಾರ ತೆಗೆದುಕೊಂಡಿದ್ದ ಸರ್ಕಾರ, ಈ ತಿಂಗಳು ಕೂಡ ನೀಡಿಲ್ಲ.

ಹೊಸ ವರ್ಷದ ಹೊಸ್ತಿಲಲ್ಲಿ ನಡೆಯುವ ಮಕರ ಸಂಕ್ರಾಂತಿ ವೇಳೆಗೆ ಪಡಿತರದಾರಿಗೆ 5 ಕೆಜಿ ಅಕ್ಕಿ ಬದಲಾಗಿ ಇಂಡಿರಾ ಕಿಟ್ ಅನ್ನು ಪರ್ಯಾಯವಾಗಿ ನೀಡಲು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ, ರಾಜ್ಯ ಸರ್ಕಾರ ಇದೀಗ ಸದ್ದಿಲ್ಲದೇ ಇಂದಿರಾ ಕಿಟ್ ಬದಲಾಗಿ ತಲಾ 5 ಕೆಜಿ ಅಕ್ಕಿಯನ್ನೇ ವಿತರಿಸಲು ಮುಂದಾಗಿದೆ.
ಅನ್ನಭಾಗ್ಯ ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ ತಲಾ 5 ಕೆಜಿ ಹೆಚ್ಚುವರಿ ಅಕ್ಕಿ ನೀಡುತ್ತಿದ್ದ ಸರ್ಕಾರ, ಇದನ್ನು ಬದಲಾಯಿಸಿ ಇಂದಿರಾ ಕ್ಯಾಂಟೀನ್ ಕಿಟ್ ನೀಡುವ ನಿರ್ಧಾರ ತೆಗೆದುಕೊಂಡಿತ್ತು. ಇಂದಿರಾ ಕಿಟ್‌ನಲ್ಲಿ ಅಕ್ಕಿ, ಬೇಳೆ, ಎಣ್ಣೆ, ಉಪ್ಪು ಮುಂತಾದ ಅಗತ್ಯ ವಸ್ತುಗಳು ಇರುತ್ತವೆ ಎಂದು ಘೋಷಿಸಲಾಗಿತ್ತು. ಆಹಾರ ಸಚಿವರಾದ ಕೆ ಹೆಚ್ ಮುನಿಯಪ್ಪ ಅವರು ಜನವರಿಯಲ್ಲಿ ಇಂದಿರಾ ಕಿಟ್ ನೀಡುವುದಾಗಿ ಹೇಳಿದ್ರು. ಅಲ್ಲದೇ ಜನವರಿ ತಿಂಗಳಿಂದ ಇಂದಿರಾ ಕಿಟ್ ವಿತರಣೆ ಆರಂಭವಾಗುತ್ತದೆ ಎಂದು ಸರ್ಕಾರದ ಮೇಲ್ಮಟ್ಟದ ಅಧಿಕಾರಿಗಳು ಹೇಳಿದ್ದರು. ಆದರೆ ಟೆಂಡರ್ ಪ್ರಕ್ರಿಯೆ ಸಂಪೂರ್ಣ ಮುಗಿಯದ ಕಾರಣದಿಂದ ಈ ತಿಂಗಳೂ ಹಳೆಯ ವ್ಯವಸ್ಥೆಯೇ ಮುಂದುವರಿದಿದೆ.
ಗೃಹ ಲಕ್ಷ್ಮಿ ಯೋಜನೆ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಸರ್ಕಾರ ಇದೀಗ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಇಂದಿರಾ ಕಿಟ್ ನೀಡುತ್ತೇವೆ ಎಂದಿದ್ದು, ಮತ್ತಷ್ಟು ವಿಳಂಬ ಮಾಡಿದೆ. ಇದರಿಂದ ಪಡಿತರದಾರರಲ್ಲಿ ನಿರಾಸೆ ಮೂಡಿದೆ. ಮಾರ್ಚ್ ವೇಳೆಗೆ ಕಿಟ್ ವಿತರಣೆ ಸಾಧ್ಯವಾಗಬಹುದು ಎಂಬ ನಿರೀಕ್ಷೆಯಿದೆ. ಇನ್ನೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ತಿಳಿಸಿರುವ ಮಾಹಿತಿ ಪ್ರಕಾರ, ಇಂದಿರಾ ಕಿಟ್ ವಿತರಣೆಗೆ ಟೆಂಡರ್ ಕರೆಯಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಪ್ರಕ್ರಿಯೆ ವಿಳಂಬವಾಗಿದೆ. ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಲ್ಲಿ ಕಿಟ್ ವಿತರಣೆ ಆರಂಭವಾಗಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಳೆದ ವರ್ಷಗಳಲ್ಲಿ ಅನ್ನಭಾಗ್ಯ ಯೋಜನೆಯಿಂದ ಹೆಚ್ಚುವರಿ ಅಕ್ಕಿ ಸಿಕ್ಕಿದ್ದು ಸಹಾಯಕವಾಗಿತ್ತು. ಆದರೆ ಈ ಬಾರಿ ರಾಜ್ಯ ಸರ್ಕಾರ ಇಂದಿರಾ ಕಿಟ್ ಭರವಸೆ ಈಡೇರದೇ ಇರುವುದು ನಿರಾಸೆ ಮೂಡಿಸಿದೆ ಎಂದು ಪಡಿತರ ಚೀಟಿ ಹೊಂದಿರುವ ಕುಟುಂಬಗಳು ತಿಳಿಸಿವೆ. ಸರ್ಕಾರದ ಮೇಲ್ಮಟ್ಟದ ಸೂತ್ರಗಳ ಪ್ರಕಾರ, ಟೆಂಡರ್ ಪ್ರಕ್ರಿಯೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ. ಇಂದಿರಾ ಕಿಟ್‌ನಲ್ಲಿ ಒಳಗೊಳ್ಳುವ ವಸ್ತುಗಳ ಗುಣಮಟ್ಟ ಇಮತ್ತು ಪೂರೈಕೆದಾರರ ಆಯ್ಕೆಯಲ್ಲಿ ಜಾಗೃತಿ ವಹಿಸಲಾಗುತ್ತಿದೆ. ಇದರಿಂದ ಪ್ರಕ್ರಿಯೆ ವಿಳಂಬವಾಗಿದೆ. ಆದರೆ ಶೀಘ್ರದಲ್ಲೇ ಟೆಂಡರ್ ಪೂರ್ಣಗೊಳ್ಳಲಿದ್ದು, ಮಾರ್ಚ್‌ನಿಂದ ಕಿಟ್ ವಿತರಣೆ ಆರಂಭವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications