BPL: ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಆಹಾರ ಇಲಾಖೆ ಸಿಹಿಸುದ್ದಿ
BPL Card: ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇನ್ಮುದೆ ಪಡಿತರದಲ್ಲಿ ಕೇವಲ ಅಕ್ಕಿ ಮಾತ್ರವಲ್ಲದೆ ಪೌಷ್ಟಿಕಾಂಶಯುಕ್ತ ಸಿರಿಧಾನ್ಯಗಳಾದ ರಾಗಿ ಮತ್ತು ಜೋಳವನ್ನು ನೀಡಲು ಸರ್ಕಾರ ನಿರ್ಧರಿಸಿದೆ. ಹಾಗಾದ್ರೆ ಈ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ
ಸದ್ಯ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪ್ರತಿ ವ್ಯಕ್ತಿಗೆ ರಾಜ್ಯ ಹಾಗೂ ಕೇಂದ್ರದಿಂದ ಒಟ್ಟು 10 ಕೆ.ಜಿ. ಅಕ್ಕಿ ನೀಡಲಾಗಿದೆ. ಇನ್ಮುಂದೆ ಇದರ ಜೊತೆಗೆ ಈ ತಿಂಗಳಿಂದಲೇ ಹೆಚ್ಚುವರಿಯಾಗಿ 2 ಕೆ.ಜಿ. ರಾಗಿ ಅಥವಾ ಜೋಳವನ್ನು ವಿತರಣೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ಪ್ರಮಾಣ ರಾಗಿ ದಾಸ್ತಾನಿಗೆ ನಿರ್ಧಾರ
ಇನ್ಮುಂದೆ ರಾಗಿ ನೀಡಲು ಅಪಾರ ಪ್ರಮಾಣದ ರಾಗಿ ದಾಸ್ತಾನು ಮಾಡಲು ಸರ್ಕಾರ ಮುಂದಾಗಿದೆ. ರಾಗಿ ಮಾರಾಟ ಮಾಡಲು ಮೇ 15ರ ವರೆಗೆ ನೋಂದಾಯಿತ ರೈತರಿಗೆ ಅವಕಾಶ ನೀಡಲಾಗಿದೆ. 6 ಲಕ್ಷ ಮೆಟ್ರಿಕ್ ಟನ್‌ಗೂ ಅಧಿಕ ರಾಗಿ ಸಂಗ್ರಹ ಗುರಿ ಹೊಂದಿದೆ. ಮುಂದಿನ ಹತ್ತು ತಿಂಗಳ ಅವಧಿಗೆ ಬೇಕಾಗುವಷ್ಟು ಧಾನ್ಯವನ್ನು ದಾಸ್ತಾನು ಮಾಡಿಕೊಳ್ಳಲು ಆಹಾರ ಇಲಾಖೆ ಯೋಜಿಸಿದೆ. ಈ ಕುರಿತು ಕೇಂದ್ರ ಸರ್ಕಾರದಿಂದ ಅಗತ್ಯ ಅನುಮೋದನೆ ಪಡೆಯಲಾಗಿದ್ದು, ಸುಮಾರು 57 ಸಾವಿರ ಮೆಟ್ರಿಕ್ ಟನ್ ರಾಗಿ ಮತ್ತು 9 ಸಾವಿರ ಮೆಟ್ರಿಕ್ ಟನ್ ಜೋಳದ ಅಗತ್ಯವಿರಬಹುದು ಎಂದು ಅಂದಾಜಿಸಲಾಗಿದೆ.
ಪ್ರದೇಶಕ್ಕೆ ಅನುಗುಣವಾಗಿ ಧಾನ್ಯ ವಿತರಣೆ
ಪಡಿತರ ಚೀಟಿ ಹೊಂದಿರುವವರಿಗೆ ಪ್ರದೇಶಕ್ಕೆ ಅನುಗುಣವಾಗಿ ಅಕ್ಕಿ ಜೊತೆ ರಾಗಿ ಅಥವಾ ಜೋಳ ವಿತರಣೆ ಮಾಡಲಾಗುತ್ತದೆ. ರಾಜ್ಯದಲ್ಲಿ ಸುಮಾರು 8-10 ಜಿಲ್ಲೆಗಳನ್ನು ಹೊರತುಪಡಿಸಿದರೆ ಮಾಸಿಕ 57 ಸಾವಿರ ಮೆಟ್ರಿಕ್ ಟನ್ ರಾಗಿ ಹಾಗೂ 8-9 ಸಾವಿರ ಮೆಟ್ರಿಕ್ ಟನ್ ಜೋಳ ಬೇಕಾಗುತ್ತದೆ ಎಂದು ಆಹಾರ ಇಲಾಖೆ ಅಂದಾಜಿಸಿದೆ ಎಂದು ತಿಳಿದುಬಂದಿದೆ.
ಹಳೇ ಮೈಸೂರು ಭಾಗದವರಿಗೆ 2 ಕೆಜಿ ರಾಗಿ ಹಾಗೂ ಹೈದರಾಬಾದ್ ಕರ್ನಾಟಕ ಹಾಗೂ ಮುಂಬಯಿ ಕರ್ನಾಟಕ ಭಾಗದ ಪಡಿತರದಾರರಿಗೆ 2 ಕೆಜಿ ಜೋಳ ನೀಡಲು ನಿರ್ಧರಿಸಲಾಗಿದ್ದು, ಈ ತಿಂಗಳಿಂದಲೇ ಇದು ಜಾರಿಗೆ ಬರಲಿದೆ ಎಂದು ತಿಳಿಸಿದೆ. ಬಡ ಜನರ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ವರದಿಯಾಗಿದೆ.
"ಅರ್ಹ ಬಡ ಕುಟುಂಬಗಳಿಗೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು ಎನ್ನುವುದು ನಮ್ಮ ಉದ್ದೇಶ. ಪಡಿತರ ಚೀಟಿ ಪರಿಷ್ಕರಣೆ ಮತ್ತು ಪೌಷ್ಟಿಕ ಆಹಾರ ವಿತರಣೆಗೆ ಸರ್ಕಾರ ಬದ್ಧವಾಗಿದೆ," ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ತಿಳಿಸಿದ್ದಾರೆ. ಇನ್ನೂ ಈ ಯೋಜನೆಯು ಮೇ ತಿಂಗಳಿಂದಲೇ ಜಾರಿಗೆ ಬರಲಿದೆ. ಪಡಿತರ ಚೀಟಿದಾರರ ವಾಸಸ್ಥಳದ ಆಹಾರ ಪದ್ಧತಿಗೆ ಅನುಗುಣವಾಗಿ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತದೆ. ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೌಲಭ್ಯವನ್ನು ಪಡೆಯಬಹುದು.
ಕೆಎಚ್ ಮುನಿಯಪ್ಪ ಹೇಳಿದ್ದೇನು?
ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆ ಅನ್ನಭಾಗ್ಯ ಯೋಜನೆಯಲ್ಲಿ ಈ ತಿಂಗಳಿನಿಂದ 2 ಕೆ.ಜಿ ರಾಗಿ ವಿತರಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ 1.14 ಕೋಟಿ ಬಿಪಿಎಲ್ ಕಾರ್ಡ್‌ಗಳಿದ್ದು, 4.01 ಕೋಟಿ ಫಲಾನುಭವಿಗಳಿದ್ದಾರೆ. ಆದ್ದರಿಂದ ಈ ಯೋಜನೆಯಲ್ಲಿ ಪ್ರತಿ ತಿಂಗಳಿಗೆ 57 ಸಾವಿರ ಮೆಟ್ರಿಕ್ ಟನ್ ರಾಗಿ ಅಗತ್ಯವಿದೆ. ಈಗಾಗಲೇ ಹತ್ತು ತಿಂಗಳಿಗೆ ಅಗತ್ಯವಿರುವಷ್ಟು ರಾಗಿ ಸಂಗ್ರಹಿಸಲಾಗಿದೆ. ರೈತರಿಂದ 5.20 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ರಾಜ್ಯ ಸರ್ಕಾರ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡಿದೆ. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ರೈತರನ್ನು ರಕ್ಷಣೆ ಮಾಡುವುದರ ಜೊತೆಗೆ ಬಡವರ ಹೊಟ್ಟೆ ತುಂಬಿಸುವ ಮಹತ್ಕಾರ್ಯ ಮಾಡುತ್ತಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಅವರು ಹೇಳಿದ್ದಾರೆ.












Click it and Unblock the Notifications