BPL Card: ಬಿಪಿಎಲ್ ಕಾರ್ಡ್‌ಗಳ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ
BPL Card: ರಾಜ್ಯಗದಲ್ಲಿ ಈಗಾಗಲೇ ಅನರ್ಹರ ಬಳಿಯಿದ್ದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತಿದೆ. ಬಳಿಕ ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇನ್ನು ಇದೀಗ ಈ ಕಾರ್ಡ್‌ಗಳ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಹಾಗಾದರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಛೇರಿ ಕೃಷ್ಣಾದಲ್ಲಿ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಲಾಗಿದೆ. ಈ ವೇಳೆ ಬಿಪಿಎಲ್ ಕಾರ್ಡ್‌ಗಳ ಬಗ್ಗೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಕೇಂದ್ರ ಸರ್ಕಾರ ನಿಗದಿ ಮಾಡಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ-ಹಂತವಾಗಿ ತೆಗೆದು ಹಾಕಬೇಕು. ಆದರೆ, ಅರ್ಹರ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಬಾರದು. ಅನರ್ಹರು ಸ್ವಯಂ ತಮ್ಮ ಬಳಿಯಿರುವ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಬಳಿಕ ಅಂತಹವರಿಗೆ ನೊಟೀಸ್ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಈಗಾಗಲೇ 4,000 ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ 4,692 ಕೋಟಿ ರೂಪಾಯಿ ಅನುದಾನ ಬಿಡುಗಡೆ ಆಗಿದ್ದು, ಅಕ್ಟೋಬರ್ ಅಂತ್ಯದವರೆಗೆ 3,253 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. 4,44,48,294 ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದಾರೆ.ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನ ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು ಎಂದರು.
ರಾಜ್ಯದಲ್ಲಿ ಒಟ್ಟು 4518 ಪೆಟ್ರೋಲ್ ಬಂಕ್‌ಗಳಿದ್ದು, ಡಿಸೆಂಬರ್ ಅಂತ್ಯದವರೆಗೆ 503 ಪೆಟ್ರೋಲ್ ಬಂಕ್‌ಗಳ ತಪಾಸಣೆ ನಡೆಸಲಾಗಿದೆ. ಪೆಟ್ರೋಲ್ ಬಂಕ್‌ಗಳ ತಪಾಸಣೆಯನ್ನ ಹೆಚ್ಚಿಸಿ ಅಳತೆ ಮತ್ತು ಗುಣಮಟ್ಟದಲ್ಲಿ ಮೋಸದಂತಹ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಕನಿಷ್ಠ ಬೆಂಬಲ ಬೆಲೆಯಡಿ ಆಹಾರ ಧಾನ್ಯ ಸಂಗ್ರಹಿಸಲು ಎಲ್ಲಾ ವ್ಯವಸ್ಥೆ ಮಾಡಬೇಕು. ರೈತರಿಗೆ ಸಮಸ್ಯೆ ಆಗದಂತೆ ತ್ವರಿತವಾಗಿ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ರಾಜ್ಯದಲ್ಲಿ 1,53,69,945 ರೇಷನ್ ಕಾರ್ಡ್‌ಗಳಿದ್ದು, 5,30,88,636 ಸದಸ್ಯರು ಫಲಾನುಭವಿಗಳಿದ್ದಾರೆ. ಇಲಾಖೆಯಲ್ಲಿ ಒಟ್ಟು 709 ಹುದ್ದೆಗಳು ಖಾಲಿಯಿವೆ. ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯಡಿ ಕರ್ನಾಟಕದಲ್ಲಿ ಬೇರೆ ರಾಜ್ಯಗಳ 13,383 ಫಲಾನುಭವಿಗಳು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಕುಟುಂಬದಲ್ಲಿ ಒಬ್ಬರೇ ಇರುವ, 80 ವರ್ಷ ದಾಟಿದವರಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ಒದಗಿಸುವ ಅನ್ನ-ಸುವಿಧಾ ಯೋಜನೆಯನ್ನು ಜಾರಿ ಮಾಡಲಾಗಿದೆ. 8,500 ಪಡಿತರ ಚೀಟಿದಾರರು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದಲ್ಲಿ ಸರ್ಕಾರವು ಅರ್ಹರ ಬಳಿಯಿದ್ದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುತ್ತಿದೆ ಎಂದು ಹಲವು ಜಿಲ್ಲೆಗಳಲ್ಲಿ ಹೋರಾಟ ನಡೆಸಿದ ಘಟನೆಗಳನ್ನು ನಡೆಸದಿದ್ದವು. ಬಳಿಕ ಎಚ್ಚೆತ್ತ ಸರ್ಕಾರ ಯಾರೆಲ್ಲ ಅರ್ಹರ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆಯೋ ಅಂತಹವರ ಬಿಪಿಎಲ್ ಕಾರ್ಡ್‌ಗಳನ್ನು ಮತ್ತೆ ಹಿಂದಿರುಗಿಸುವುದಾಗಿಯೂ ಹೇಳಿತ್ತು. ಅಲ್ಲದೆ, ಅವರಿಗೆ ತಲುಪಬೇಕಾದ ಆಹಾರ ಧಾನ್ಯ ಕೂಡ ತಲುಪಿಸಲಾಗುತ್ತದೆ ಎಂದು ಹೇಳಿತ್ತು.












Click it and Unblock the Notifications