BPL Card: ನವೆಂಬರ್ 19ರಿಂದ ಬಿಪಿಎಲ್ ಕಾರ್ಡ್‌ಗಳ ಪರಿಶೀಲನೆ
BPL Card: ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಪಡೆದಂತಹ ಬಿಪಿಎಲ್ ಕಾರ್ಡುದಾರರ ವಿರುದ್ಧ ಸರ್ಕಾರ ಸಮರ ಸಾರಲು ಮುಂದಾಗಿದೆ. ಇನ್ನು ಸರ್ಕಾರವು ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಮಾಡಲು ಮುಂದಾಗಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಆಗಲಿದೆ ಎಂದು ತಿಳಿದುಬಂದಿದೆ.
ಇನ್ನು ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುತ್ತಿದ್ದಂತೆ ಜನರಿಂದ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನೆಲ್ಲೆ ಎಚ್ಚೆತ್ತ ಸರ್ಕಾರ ಐಟಿ ಹೆಸರಿನಲ್ಲಿ ರದ್ದಾಗಿರುವ ಬಿಪಿಎಲ್ ಕಾರ್ಡ್‌ಗಳನ್ನು ನಾಳೆಯಿಮದ ಅಂದರೆ ನವೆಂಬರ್ 18ರಿಂದ ಪರಿಷ್ಕರಣೆ ಮಾಡಲು ಸರ್ಕಾರ ಮುಂದಾಗಿದೆ. ಐಟಿ, ಜಿಎಸ್‌ಟಿ ಇರುವ 10,000 ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

BPL ಕಾರ್ಡ್ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು?
* ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ.
* ಆದಾಯ ತೆರಿಗೆ/ಸೇವಾ ತೆರಿಗೆ/ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು.
* ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
* ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.
* ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂಪಾಯಿಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು. ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ.
ಇನ್ನು ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು. ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಸಲಾಗಿದೆ.












Click it and Unblock the Notifications