BPL Card: ಮೂರು ತಿಂಗಳು ಪಡಿತರ ತೆಗೆದುಕೊಳ್ಳದವರಿಗೆ ಸರ್ಕಾರದಿಂದ ಕಹಿಸುದ್ದಿ
BPL Card: ಪರಿತರ ಚಿಟಿ (APL and BPL Ration Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಬಹುಮುಖ್ಯ ದಾಖಲೆಯಾಗಿದೆ. ಅದರಲ್ಲೂ ಬಡಕುಟುಂಬದವರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಈ ಪಡಿತರ ಚೀಟಿಯನ್ನು ಮಾಡಲಾಗಿದೆ. ಆದರೆ ಕೆಲವರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳದೆ, ಉದಾಸೀನ ತೋರುತ್ತಿದ್ದಾರೆ ಎನ್ನುವ ಅರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ಆಹಾರ ಇಲಾಖೆ ಒಂದು ದೃಢ ನಿರ್ಧಾರಕ್ಕೆ ಬಂದಿದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ.
ಮೂರು ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ಅನ್ನು ರದ್ದು ಮಾಡಲು ಆಹಾರ ಇಲಾಖೆ ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸರ್ಕಾರದ ಇತರ ಯೋಜನೆಗಳ ಪ್ರಯೋಜನೆಗಳನ್ನು ಪಡೆದುಕೊಳ್ಳಲು ಮಾತ್ರ ಬಿಪಿಎಲ್ ಕಾರ್ಡ್ ಬಳಸಿಕೊಳ್ಳುತ್ತಿರುವ ಆರೋಪ ಸರ್ಕಾರದವರೆಗೂ ಬಂದಿದ್ದು, ಆದ್ದರಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲು ಮುಂದಾಗಿದೆ ಎನ್ನಲಾಗಿದೆ.

ಇಕೆವೈಸಿ ಕಡ್ಡಾಯ: ಈಗಾಗಲೇ ಜಾರಿಗೆ ತಂದಿರುವ ಸರ್ಕಾರದ ಎಲ್ಲಾ ಯೋಜನೆಗಳಿಗೆ ಪಡಿತರ ಚೀಟಿ ಪ್ರಮುಖವಾಗಿದೆ. ಅಲ್ಲದೆ, ಸರ್ಕಾರ ರೇಷನ್ ಕಾರ್ಡ್‌ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು, ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ.
ಮತ್ತೆ ಅರ್ಜಿ ಸಲ್ಲಿಕೆ ಆರಂಭ ಯಾವಾಗ?: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಸುಮಾರು ಒಂದೂವರೆ ವರ್ಷಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇದೀಗ ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಅಂದರೆ ಜೂನ್ ತಿಂಗಳಿನಲ್ಲಿಯೇ ಮತ್ತೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವವರು ಈ ಪ್ರಮುಖಾಂಶಗಳನ್ನು ಗಮನಿಸಲೇಬೇಕಾಗುತ್ತದೆ.
ಅರ್ಹರು ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ರಾಜ್ಯದ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರು ಇಲ್ಲದವರು ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸುವುದೇಗೆ ಹಾಗೂ ಏನೆಲ್ಲ ದಾಖಲೆಗಳು ಬೇಕಿ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ವೋಟರ್ ಐಡಿ
* ಆಧಾರ್ ಕಾರ್ಡ್
* ಇತ್ತೀಚಿನ ಪಾರ್ಸ್ ಪೋರ್ಟ್
* ಮೊಬೈಲ್ ಸಂಖ್ಯೆ
ಈ ದಾಖಲೆಗಳಿದ್ದರೆ ಮಾತ್ರ ಆನ್‌ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್ kar.nic.in ಗೆ ಭೇಟಿ ನೀಡಬೇಕು. ಬಳಿಕ ಮುಖಪುಟದಲ್ಲಿನ ಇ-ಸೇವೆಗಳು ಎನ್ನುವ ಆಯ್ಕೆ ಮೇಲೆ ಕ್ಲಿಕ್ ಮಾಡಿ.
ಹಾಗೂ https://ahara.kar.nic.in/Home/EServices ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ. ಬಳಿಕ ಇ-ಪಡಿತರ ಚೀಟಿ ಆಯ್ಕೆ ಮಾಡಿ. ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದರೆ, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ. ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
ಕೊನೆಯದಾಗಿ ಅರ್ಜಿಯ ಜೊತೆ ಅಲ್ಲಿ ಕೇಳುವಂತಹ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್‌ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications