ಏಪ್ರಿಲ್ ನಿಂದ ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚು ಅಕ್ಕಿ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 8: ಇದೇ ವರ್ಷದ ಏಪ್ರಿಲ್ ತಿಂಗಳಿನಿಂದ ಬಿಪಿಎಲ್ ಕಾರ್ಡುದಾರರಿಗೆ ನೀಡಲಾಗುವ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸುವಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಇದು ಆದೇಶವಾಗಿ ಜಾರಿಯಾದರೆ, ಸದ್ಯಕ್ಕೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಕಾರ್ಡುಗಾರರಿಗೆ ಸಿಗುತ್ತಿರುವ 5 ಕೆಜಿ ಅಕ್ಕಿ ಬದಲಿಗೆ, ಏಪ್ರಿಲ್ ನಿಂದ ತಲಾ 8 ಕೆಜಿ ಅಕ್ಕಿ ಸಿಗಲಿದೆ.

BPL families in Karnataka to get more rice from April

ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ''2018ರ ಚುನಾವಣೆ ಹಾಗೂ ಮಾರ್ಚ್ ತಿಂಗಳಲ್ಲಿ ರಾಜ್ಯ ಸರ್ಕಾರವು ಮಂಡಿಸಲಿರುವ ಬಜೆಟ್ ಹಿನ್ನೆಲೆಯಲ್ಲಿ ರಾಜ್ಯದ ಬಡವರು ಸರ್ಕಾರದಿಂದ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ಸರ್ಕಾರ ಬಡವರ ಪರವಾಗಿ ಯೋಜನೆಗಳನ್ನು ರೂಪಿಸಬೇಕಿದೆ'' ಎಂದರು.

ಈ ಹಿನ್ನೆಲೆಯಲ್ಲಿ ಪ್ರತಿ ಬಿಪಿಎಲ್ ಕಾರ್ಡುದಾರರಿಗೆ ಈಗ ಸಿಗುತ್ತಿರುವ ಅಕ್ಕಿ ಕೋಟಾಕ್ಕಿಂತ ಹೆಚ್ಚವರಿಯಾಗಿ 3 ಕೆಜಿ ಅಕ್ಕಿ ಸಿಗಲಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Congress Legislature Party meet has recommended increase of quantum of rice being supplied to below poverty line (BPL) card holders in the state.
Please Wait while comments are loading...