BPL Card: ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಮತ್ತೊಂದು ಬಿಗ್ ಶಾಕ್
BPL Ration Card: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾವಣೆ ಮಾಡುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಯಾರೆಲ್ಲಾ ಬಿಪಿಎಲ್ ಕಾರ್ಡ್‌ಗೆ ಅನರ್ಹರು ಎನ್ನುವ ಚಿಂತೆ ಬಹುತೇಕರಲ್ಲಿ ಇರುತ್ತದೆ. ಅದಕ್ಕೆಲ್ಲ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಅನರ್ಹರು ಕೂಡ ಈ ಕಾರ್ಡ್‌ಗಳನ್ನು ಹೊಂದಿದ್ದು, ಅರ್ಹರಿಗೆ ಸಿಗಬೇಕಾದ ಅನ್ನ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದಾರೆ. ಇದೀಗ ಇದಕ್ಕೆ ಕಡಿವಾಣ ಹಾಕುವಲ್ಲಿ ಆಹಾರ ಇಲಾಖೆ ಕಾರ್ಯನಿರತವಾಗಿದೆ.

* ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ಹೊಂದಿರುವ ಜಮೀನು ಸೇರಿಸಿದಾಗ 7 ಹೆಕ್ಟೇರ್‌ಗೂ ಅಧಿಕ ಜಮೀನು ಹೊಂದಿದ್ದರೆ, ಅಂತಹವರು ಬಿ.ಪಿ.ಎಲ್/ಅಂತ್ಯೋದಯ ಪಡಿತರ ಚೀಟಿಗೆ ಅನರ್ಹರು.
* ಪಡಿತರ ಚೀಟಿಯ ಯಾವುದೇ ಸದಸ್ಯ 4 ಚಕ್ರ ವಾಹನ ಹೊಂದಿದ್ದಲ್ಲಿ ಅಂತಹ ಕುಟುಂಬದವರು ಅಂತ್ಯೋದಯ ಪಡಿತರ ಚೀಟಿ ಹೊಂದಲು ಅನರ್ಹರು.
* ಜಿಎಸ್‌ಟಿ ಅಥವಾ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರು.
* ಸರ್ಕಾರಿ ನೌಕರಿ ಮಾಡುತ್ತಿರುವ ಯಾವುದೇ ವ್ಯಕ್ತಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರು.
* ಸಹಕಾರಿ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಯಂ ಸಿಬ್ಬಂದಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರು.
* ವೃತ್ತಿಪರ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರು.
* ನೋಂದಾಯಿತ ಗುತ್ತಿಗೆದಾರರು, ಎಪಿಎಂಸಿ ಟ್ರೇಡರ್‌ಗಳು, ಕಮಿಷನ್ ಏಜಂಟರು, ಬೀಜ ಮತ ಗೊಬ್ಬರ ಡೀಲರ್‌ಗಳು ಇತ್ಯಾದಿ ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರ ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರು.
* ಅನುದಾನಿತ ಶಾಲಾ ಕಾಲೇಜುಗಳ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರು.
* ಸರ್ಕಾರಿ ಸ್ವಾಮ್ಯದ ಉದ್ಯಮಗಳು/ಮಂಡಳಿಗಳು/ನಿಗಮಗಳ ಖಾಯಂ ನೌಕರರು, ಸ್ವಾಯ ಸಂಸ್ಥೆ/ಮಂಡಳಿಯ ನೌಕರರು ಅಥವಾ ಅಂತಹ ವ್ಯಕ್ತಿಯ ಅವಲಂಬಿತ ಕುಟುಂಬ ಸದಸ್ಯರು ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರು.
ಮಡಿಕೇರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಮಿತಿ ಸದಸ್ಯರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಮಾತನಾಡಿ ಮಡಿಕೇರಿ, ತಾಲ್ಲೂಕಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅನುಷ್ಠಾನ ಇಲಾಖೆಗಳು ಉತ್ತಮ ಪ್ರಗತಿಯನ್ನು ಸಾಧಿಸಿವೆ. ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಸರ್ಕಾರದ ಮಹಾತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಶ್ರಮಿಸಬೇಕು ಹಾಗೂ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಗ್ರಾಮಪಂಚಾಯತಿ ಮಟ್ಟದಲ್ಲಿ ಫಲಾನುಭವಿಗಳ ಕುಂದುಕೊರತೆ ಸಭೆಯನ್ನು ಮಾಡಬೇಕು ಎಂದು ಸಭೆಯಲ್ಲಿ ತಿಳಿಸಿದರು. ಹೀಗೆ ರಾಜ್ಯದಲ್ಲಿ ಆಹಾರ ಇಲಾಖೆಯು ನಕಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಕಡಿವಾಣ ಹಾಕುತ್ತಿದೆ.












Click it and Unblock the Notifications