BPL ರೇಷನ್ ಕಾರ್ಡ್ದಾರರಿಗೆ ಗುಡ್ನ್ಯೂಸ್: ಆಹಾರ ಸಚಿವ ಕೆಎಚ್ ಮುನಿಯಪ್ಪ ಮಹತ್ವದ ಮಾಹಿತಿ
ಬೆಳಗಾವಿ: ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸುಮಾರು 13 ಲಕ್ಷ ಕಾರ್ಸ್ಗಳು ಅನರ್ಹ ಕಾರ್ಡಗಳಿದ್ದು, ಇವುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಿರುವ ಬಗ್ಗೆ ಚರ್ಚೆ ನಡೆಸಿದ್ದು. ರಾಜ್ಯದಲ್ಲಿ ಅರ್ಹ ಫಲಾನುಭವಿಯನ್ನು ಶೀಘ್ರದಲ್ಲಿ ಗುರುತಿಸಬೇಕು ಅನರ್ಹರನ್ನು ಮಾತ್ರ ತಾವು ಎಪಿಎಲ್ ಗೆ ವರ್ಗಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ ಹೇಳಿದರು.
ಈ ಕುರಿತು ಅಧಿಕಾರಿಗಳು ಮತ್ತು ನ್ಯಾಯ ಬೆಲೆ ಅಂಗಡಿಗಳ ಮಾಲಿಕರ ಸಂಘದ ಅಧ್ಯಕ್ಷರುಗಳೊಂದಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್.ಮುನಿಯಪ್ಪ ರವರು ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು. ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇಕೆವೈಸಿ ಮಾಡಿಸತಕ್ಕದ್ದು ಎಂದು ತಿಳಿಸಿದರು.

ಪಡಿತರ ಪರಿಷ್ಕರಣೆಯ ಕಾರ್ಯ ಸಮರ್ಪಕವಾಗಿರಲಿ ಮತ್ತು ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ ಗೆ ಬದಲಾಗಿದ್ದಲ್ಲಿ ಅದನ್ನು ಸಂಬಂದಪಟ್ಟ ತಾಲ್ಲೂಕಿನ ತಹಶಿಲ್ದಾರರ ಕಚೇರಿಗೆ ಬೇಟಿ ಮಾಡಿ ಮನವಿ ಸಲ್ಲಿಸುದಾಗ ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ ಗೆ ವರ್ಗಾಯಿಸಲಾಗುತ್ತದೆ ಎಂದರು. ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಅರ್ಹ ಫಲಾನುಭವಿಗಳ ಮನೆಗಳಿಗೆ ಬೇಟಿ ನೀಡಿ ಪಡಿತರ ಕಾರ್ಡ್ ನ್ನು ಪರಿಶೀಲನೆ ಮಾಡಿ ಸತ್ಯಾಂಶವನ್ನು ನಮಗೆ ಒಂದು ವಾರದೊಳಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾನದಂಡಗಳ ನಿರದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಹಚ್ಚಿ ಎಪಿಎಲ್ ಆಗಿ ಪರಿವರ್ತಿಸುವುದು. ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳ ಕಾರ್ಡ್ಗಳನ್ನು ರದ್ದು ಮಾಡಬಾರದು ಎಂದು ತಿಳಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ನ್ಯಾಯಬೆಲೆ ಅಂಗಡಿಗಳನ್ನು ಆಧ್ಯಾತೆಯ ಮೇಲೆ ಮಂಜೂರು ಮಾಡಲು ಒಂದು ತಿಂಗಳೊಳಗೆ ಕ್ರಮ ವಹಿಸಲಾಗುವುದು ಇದರಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಮೇರೆಗೆ ಸುಮಾರು 3517 ನೂತನ ನ್ಯಾಯ ಬೆಲೆ ಅಂಗಡಿಗಳನ್ನು ಒಳ ಮೀಸಲಾತಿ ಆದಾರದ ಮೇಲೆ ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನೀಡುತ್ತಿರುವುದು ಎಂದರು.
ನ್ಯಾಯಬೆಲೆ ಅಂಗಡಿ ಮಾಲಿಕರಿಗೆ ಯಾವುದೇ ಸಮಸ್ಯೆಗಳಿಲ್ಲದೆ ಪರಿಹರಿಸಲಾಗುವುದು ನ್ಯಾಯ ಬೆಲೆ ಅಂಗಡಿಗಳಲ್ಲಿ ಯಂತ್ರಗಳ ಅಳವಡಿಕೆಗೆ ತಾವು ಮುಂದಾಗಿ ಇದನ್ನು ಒಳಪಡಿಸಬೇಕು ತಮಗೆ ಬರುವ ಚಿಲ್ಲರೆ ಲಾಭಾಂಶವನ್ನು ಸರಿಯಾದ ಸಮಯಕ್ಕೆ ಸಮರ್ಪಕವಾಗಿ ನೀಡಲಾಗುತ್ತದೆ ತಾವು ಗ್ರಾಹಕರಿಗೆ ಸರಿಯಾದ ಸಮಯದಲ್ಲಿ ಪಡಿತರ ವಿತರಿಸಬೇಕು ಎಂದರು. ಇತರೆ ರಾಜ್ಯಗಳ ಮಾನದಂಡಗಳನ್ನು ಸಹಾ ತಾವು ಸಂಗ್ರಹಿಸಿ ಅವನ್ನು ಪರಿಶೀಲನೆ ನಡೆಸಿ ಅನ್ವಯಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
3 ಲಕ್ಷದ 96 ಸಾವಿರ ಪಡಿತರ ಕಾರ್ಡ್ಗಳನ್ನು ಒಂದು ತಿಂಗಳೊಳಗೆ ಪರಿಷ್ಕರಣೆ ಮಾಡಿ ನೂತನ ಕಾರ್ಡ್ ನೀಡಲು ಕ್ರಮ ವಹಿಸಲು ಸೂಚಿಸಿದರು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಾಲ್ ರಾಗಿಗೆ ರೂ 4886 ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಇದರಿಂದ ಒಟ್ಟು 3000 ಕೋಟಿ ರೂಗಳೊಂದಿಗೆ 257000 ಸಾವಿರ ರೈತರಿಗೆ ಈ ಯೋಜನೆಯು ಪ್ರಯೋಜನವಾಗಲಿದೆ.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ವತಿಯಿಂದ ಬೆಳಗಾವಿ ಮತ್ತು ಕಲಬುರಗಿ ವಿಭಾಗದಲ್ಲಿ ಸುಮಾರು 71 ಸಕ್ಕರೆ ಕಾರ್ಖಾನೆಗಳ ತಪಾಸಣೆ ಮಾಡಿದ್ದು ಕಬ್ಬು ಬೆಳೆಗಾರರ ಹಿಂದೆ ಇದ್ದ ಲೋಪದೋಷಗಳನ್ನು ಸರಿಪಡಿಸಲಾಗಿದೆ ತೂಕದಲ್ಲಿ ಮೋಸವನ್ನು ತಡೆಯಲಾಗಿದೆ ಇಲ್ಲಿಯವರೆಗೂ ಸುಮಾರು 50 ಸಾವಿರ ಕೋಟಿ ರೂಗಳು ಅಭಿಸಂಧಾನ ಶುಲ್ಕ ವಸೂಲಿ ಮಾಡಲಾಗಿದೆ ಎಂದರು
ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಪ್ರಸಾದ್ ಎನ್.ವಿ,ಆಯುಕ್ತರಾದ ಎಂ. ಕನಗವಲ್ಲಿ,ಕಾನೂನು ಮಾಪನ ಇಲಾಖೆಯ ನಿಯಂತ್ರಕರಾದ ಎಂ.ಎಸ್.ಎನ್ ಬಾಬು,ನಿಗಮ ನಿರ್ದೇಶಕ ಜಗದೀಶ್,ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಜಂಟಿ ನಿರ್ದೇಶಕರು ಐಟಿ ರಾಜಶೇಖರ್,ಕುಮುದಾ ಹಾಗೂ ಪಡಿತರ ವಿತರಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ, ಮತ್ತು ಕೃಷ್ಣ ನಾಯಕ್ ಹಾಗೂ ಸಂಘದ ಪಧಾದಿಕಾರಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.
-
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ












Click it and Unblock the Notifications