Ration Card: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಕರ್ನಾಟಕ ಸರ್ಕಾರ, ಇಲ್ಲಿದೆ ಅಪ್ಡೇಟ್ಸ್‌

Ration Card: ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್‌ದಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಕರ್ನಾಟಕದಲ್ಲಿ ರೇಷನ್ ಕಾರ್ಡ್‌ದಾರರಿಗೆ ಈಚೆಗೆ ಇ-ಕೆವೈಸಿ (e-KYC) ಸಂಬಂಧಿಸಿದಂತೆ ಗುಡ್‌ನ್ಯೂಸ್ ಕೊಡಲಾಗಿತ್ತು. ಕರ್ನಾಟಕದಲ್ಲಿ ಬಾಕಿ ಇರುವ ರೇಷನ್ ಕಾರ್ಡ್‌ಗಳ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಸೆಪ್ಟೆಂಬರ್ 30 ರವರೆಗೆ ಅವಕಾಶ ನೀಡಿದೆ. ಇದೀಗ ಬಿಪಿಎಲ್ ರೇಷನ್ ಕಾರ್ಡ್ ಇರುವವರಿಗೆ ಮತ್ತೊಂದು ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕ ಸರ್ಕಾರವು ರೇಷನ್ ಕಾರ್ಡ್‌ದಾರರಿಗೆ ರಿಲೀಫ್ ಕೊಟ್ಟಿದ್ದು, ಬಿಪಿಎಲ್ ಕಾರ್ಡ್‌ದಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ. ಪಡಿತರ ಚೀಟಿದಾರರ ಹಿತದೃಷ್ಟಿಯಿಂದ ಸರ್ಕಾರದ ಮಾನದಂಡಗಳನ್ನು ಉಲ್ಲಂಘನೆ ಮಾಡಿ ಬಿಪಿಎಲ್ ಕಾರ್ಡ್ ತೆಗೆದುಕೊಂಡಿರುವವರ ರೇಷನ್ ಕಾರ್ಡ್‌ಗಳ ರದ್ದು ಪ್ರಕ್ರಿಯೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಮಾತನಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್‌ ಅರ್ಷದ್ ಅವರು ನಿಯಮ ಉಲ್ಲಂಘನೆ ಮಾಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಕಾರ್ಡ್‌ಗಳನ್ನು ತೆಗೆದು ಹಾಕುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್‌ದಾರರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.

Ration Card

ಈಚೆಗೆ ಕೇಂದ್ರ ಸರ್ಕಾರವು ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ರೇಷನ್ ಕಾರ್ಡ್ ಪಡೆದಿದ್ದಾರೆ ಎನ್ನುವ ಆರೋಪದ ಮೇಲೆ 7.65 ಲಕ್ಷ ರೇಷನ್ ಕಾರ್ಡ್‌ಗಳನ್ನು ಬ್ಲ್ಯಾಕ್‌ಲಿಸ್ಟ್‌ಗೆ ಸೇರಿಸಿ, ಆ ಪಟ್ಟಿಯನ್ನು ಕರ್ನಾಟಕ ಸರ್ಕಾಕ್ಕೆ ಕಳುಹಿಸಿತ್ತು. ಇನ್ನು ಕೇಂದ್ರ ಸರ್ಕಾರವು ಕಳುಹಿಸಿದ ಪಟ್ಟಿಯ ಆಧಾರದ ಮೇಲೆ 3.50 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಎಪಿಎಲ್‌ಗೆ ಪರಿವರ್ತಿಸಿದ್ದಾರೆ ಎಂದು ಪತ್ತೆ ಮಾಡಲಾಗಿತ್ತು. ಅಲ್ಲದೆ ಉಳಿದ ಪಡಿತರ ಚೀಟಿಗಳ ಪರಿಷ್ಕರಣೆ ಕಾರ್ಯ ಸಹ ನಡೆದಿತ್ತು. ಇದೀಗ ಈ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಹಾಗೂ ರದ್ಧತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡುವುದಕ್ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್‌ ಅರ್ಷದ್ ಅವರು ಹೇಳಿದ್ದಾರೆ.

5 ವರ್ಷಗಳ ನಂತರ ಕರ್ನಾಟಕದಲ್ಲಿ ಇ-ಕೆವೈಸಿ

ಇನ್ನು ಕರ್ನಾಟಕದಲ್ಲಿ 5 ವರ್ಷಗಳ ನಂತರ ರೇಷನ್ ಕಾರ್ಡ್ ಇ - ಕೆವೈಸಿ ಪ್ರಕ್ರಿಯೆ ನಡೆಯುತ್ತಿದೆ. ಬೋಗಸ್‌ ಪಡಿತರ ಚೀಟಿ ಪತ್ತೆ ಮಾಡುವುದು ಹಾಗೂ ಪಡಿತರ ಸೋರಿಕೆ ತಡೆಯುವುದು ಸೇರಿದಂತೆ ಹಲವು ಕಾರಣಗಳಿಗಾಗಿ ಇ - ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯ ಮಾಡಲಾಗಿದೆ. ರೇಷನ್ ಕಾರ್ಡ್ ಇರುವವರು ಪಡಿತರ ಚೀಟಿಗೆ ಆಧಾರ್‌ ದೃಢೀಕರಣ (ಇ-ಕೆವೈಸಿ) ಜೋಡಣೆ ಮಾಡಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ.

ಕರ್ನಾಟಕದಲ್ಲಿ ರೇಷನ್‌ ಕಾರ್ಡ್‌ನಲ್ಲಿ ಹೆಸರು ಇರುವ ಪ್ರತಿಯೊಬ್ಬ ಸದಸ್ಯರು ಸಹ ಸಮೀಪದ ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ. ಈ ಪ್ರಕ್ರಿಯೆ ಪೂರ್ಣವಾದ ನಂತರ ನಿಖರವಾಗಿ ಅನರ್ಹ ರೇಷನ್ ಕಾರ್ಡ್‌ಗಳ ಮಾಹಿತಿ ಸಿಗಲಿದೆ. 5 ವರ್ಷಗಳ ಮೇಲೆ ಇದೀಗ ರೇಷನ್ ಕಾರ್ಡ್‌ಗೆ ಇ-ಕೆವೈಸಿ ಪ್ರಕ್ರಿಯೆ ನಡೆಯುತ್ತಿದೆ.

ಪಡಿತರ ಚೀಟಿಗಳ ರದ್ದತಿ ಆಧಾರದಲ್ಲಿ ಹೊಸದಾಗಿ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ಕೊಡಲಾಗುತ್ತಿದೆ. ಇದಲ್ಲದೆ, ಹಣದುಬ್ಬರದ ಹಿನ್ನೆಲೆ ಹಳೇ ಬಿಪಿಎಲ್‌ ನಿಯಮಗಳನ್ನು ಅನುಸರಿಸುವುದು ಕಷ್ಟವಾಗುತ್ತಿದ್ದು, ಈ ವಿಚಾರವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಜ್ವಾನ್‌ ಅರ್ಷದ್ ಹೇಳಿದ್ದಾರೆ. ಹೀಗಾಗಿ, ಮುಂದಿನ ದಿನಗಳಲ್ಲಿ ರೇಷನ್ ಕಾರ್ಡ್‌ ನಿಯಮಗಳನ್ನು ಇನ್ನಷ್ಟು ಬದಲಾವಣೆ ಆಗುವ ಸಾಧ್ಯತೆಯೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+