BPL Card: ರಾಜ್ಯದಲ್ಲಿ ಬಿಪಿಎಲ್ ಪಡಿತರ ಚೀಟಿ ಕುರಿತು ಮತ್ತೊಂದು ಮಹತ್ವದ ಅಪ್ಡೇಟ್ ಕೊಟ್ಟ ಸಚಿವ ಕೆ.ಎಚ್.ಮುನಿಯಪ್ಪ
BPL Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇದರಲ್ಲೂ ಹಲವು ವಿಧಗಳಿದ್ದು, ಬಿಪಿಎಲ್ ರೇಷನ್ ಕಾರ್ಡ್‌ಗೆ ಹೆಚ್ಚು ಸರ್ಕಾರಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಈ ಹಿನ್ನೆಲೆ ಇದನ್ನು ಅರ್ಹರಲ್ಲದವರು ಕೂಡ ಪಡೆದುಕೊಂಡಿದ್ದು, ಇದರಿಂದ ಅರ್ಹರಿಗೆ ತುಂಬಾ ತೊಂದರೆ ಆಗುತ್ತಿದೆ ಎನ್ನುವ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಲಿದೆ. ಇದೀಗ ಇದಕ್ಕೆಲ್ಲ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರಕ್ಕೆ ಕೈಹಾಕಿದೆ. ಹಾಗಾದ್ರೆ, ಅದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಅನರ್ಹರು ಕೂಡ ನಕಲಿ ದಾಖಲೆ ಸೃಷ್ಟಿಸಿ ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ ಎಂದು ಮೊದಲಿನಿಂದಲೂ ಆರೋಪ ಕೇಳಿಬರುತ್ತಲಿದ್ದು, ಈಗಾಗಲೇ ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತ್ತು. ಆದರೂ, ಇನ್ನೂ ಸಹ ತುಂಬಾ ಜನ ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದು, ಇವುಗಳನ್ನು ರದ್ದುಪಡಿಸಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಮತ್ತೆ ಎಚ್ಚೆತ್ತ ಸರ್ಕಾರ ಮತ್ತೆ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ರಾಜ್ಯದಲ್ಲಿ ಚಾಲ್ತಿಯಲ್ಲಿ ಇರುವ ವಿವಿಧ ಪಡಿತರ ಚೀಟಿಗಳ ಪೈಕಿ 12.69 ಲಕ್ಷ ಪಡಿತರ ಚೀಟಿಗಳು ಶಂಕೆಗೆ ಕಾರಣವಾಗಿವೆ. ಇಂತಹ ಪಡಿತರ ಚೀಟಿ ಮತ್ತು ಫಲಾನುಭವಿಗಳನ್ನ ಪರಿಶೀಲನೆ ಮಡಿ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸಹಕರಿಸಬೇಕು ಎಂದು ಆಹಾರ ಸಚಿವ ಕ.ಹೆಚ್.ಮುನಿಯಪ್ಪ ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಎಂ.ನಾಗರಾಜ ಯಾದವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇಡೀ ದಕ್ಷಿಣ ಭಾರತದಲ್ಲಿಯೇ ಕರ್ನಾಟಕದಲ್ಲಿ ಶೇಕಡ 80ರಷ್ಟು ಬಿಪಿಎಲ್ ಕುಟುಂಬಗಳು ಇವೆ. ತಮಿಳುನಾಡು, ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ಬಿಪಿಎಲ್ ಕುಟುಂಬಗಳ ಸಂಖ್ಯೆ ಶೇಕಡ 50ರ ಒಳಗೆ ಇದೆ. ಆದ್ದರಿಂದ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರನ್ನು ಗುರುತಿಸಿ ಅಂತಹವರ ಕಾರ್ಡ್ ರದ್ದುಗೊಳಿಸಲು ಮುಂದಾದಾಗ ಭಾರೀ ವಿರೋಧಗಳು ವ್ಯಕ್ತವಾದವು ಎಂದು ತಿಳಿಸದರು.
ಅನರ್ಹರು ಬಿಪಿಲ್ ರೇಷನ್ ಕಾರ್ಡ್ ಹೊಂದಿರುವ ಹಿನ್ನೆಲೆ ಅರ್ಹರು ಪಡಿತರ ಪಡೆಯಲು ತುಂಬಾ ಸಮಸ್ಯೆ ಎದುರಿಸುವಂತಾಗಿದೆ. ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಕೇಂದ್ರ ಸರ್ಕಾರಕ್ಕಿಂತ ರಾಜ್ಯದ ಮಾನದಂಡಗಳು ಹೆಚ್ಚಾಗಿ ಇವೆ. ಈ ಹಿನ್ನೆಲೆ ಹೆಚ್ಚು ಜನರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಇಲಾಖೆಯ ತಂತ್ರಾಂಶದಲ್ಲಿ ಕಂಡುಬಂದ ದೋಷವನ್ನು ಪರಿಹರಿಸಲಾಗಿದೆ. ಇನ್ನೂ ಪಡಿತರ ಚೀಟಿದಾರರಿಗೆ ಯಾವುದೇ ಸಮಸ್ಯೆ ಇಲ್ಲದೆ, ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ಮುನಿಪ್ಪ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ: ಈಗಾಗಲೇ ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದಿದ್ದಾರೆ ಎನ್ನಲಾದ ಬಿಪಿಎಲ್ ಕಾರ್ಡ್‌ಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿ ಅವರನ್ನು ಎಪಿಎಲ್‌ಗೆ ಸೇರ್ಪಡೆ ಮಾಡುವ ಕೆಲಸವನ್ನು ಮಾಡಿತ್ತು. ಈ ವೇಳೆ ಬಡವರ ಬಳಿಯಿರುವ ಬಿಪಿಎಲ್ ಕಾರ್ಡ್‌ಗಳನ್ನು ಸಹ ಸರ್ಕಾರ ರದ್ದುಪಡಿಸಿದೆ ಎಂದು ಹಲವಯ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ಜನರು ಆಕ್ರೋಶ ಹೊರಹಾಕಿದ್ದರು. ಬಳಿಕ ಎಚ್ಚೆತ್ತ ಸರ್ಕಾರ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್‌ಗಳನ್ನು ಹಿಂತಿರುಗಿಸಲಾಗುವುದು. ಅವರಿಗೆ ಸಿಗಬೇಕಾದ ಪಡಿತರವನ್ನು ಕೂಡ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿತ್ತು.












Click it and Unblock the Notifications