Ration Card: ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ

ಬೆಳಗಾವಿ, ಡಿಸೆಂಬರ್‌ 09: ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶಗಳ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ ಹೆಚ್‌ ಮುನಿಯಪ್ಪ ಅವರು ಹೇಳಿದರು.

ಇಂದು ವಿಧಾನ ಪರಿಷತ್ ನಲ್ಲಿ ವಿರೋದ ಪಕ್ಷದ ಸದಸ್ಯರು ರಾಜ್ಯದಲ್ಲಿನ ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ ಹೆಚ್ ಮುನಿಯಪ್ಪ ನವರು ಮಾತನಾಡಿ, ಪಡಿತರ ಕಾರ್ಡ್ ಗಳನ್ನು ಪರಿಷ್ಕರಣೆ ಮಾಡಲು ನಾವು ಮುಂದಾದಾಗ ಕೇಂದ್ರ ಸರ್ಕಾರದ ಮಾನದಂಡಗಳ ಅಡಿಯಲ್ಲಿಯೇ ನಾವು ಪರಿಷ್ಕರಣೆ ಮಾಡಲು ಹೋಗಿದ್ದು ಕೆಲವು ಗೊಂದಲಗಳಿಂದ ನಾವು ಅದನ್ನು ತಡೆಹಿಡಿದಿದ್ದೀವಿ.

BPL Ration Cards Will Be Distributed To Those Who Are Eligible KH Muniyappa

ಅರ್ಹರ ಬಿಪಿಎಲ್ ಪಡಿತರ ಕಾರ್ಡ್ ದಾರರ ಯಾವುದೇ ಕಾರ್ಡ್ ಗಳು ರದ್ದಾಗದಂತೆ ಅಧಿಕಾರಿಗಳಿಗೆ ಸೂಚಿಸಿ ರದ್ದಾದ ಬಿಪಿಎಲ್ ಕಾರ್ಡ್ ಗಳನ್ನು ಪುನರ್ ಸ್ಥಾಪಿಸಲಾಯಿತು. ಆದರೂ ಪ್ರಸ್ತುತ ಬಿಪಿಎಲ್ ಪಡಿತರ ಕಾರ್ಡ್ ಗಳಲ್ಲಿ ಅನರ್ಹ ಫಲಾನುಭವಿಗಳ ಪತ್ತೆಹಚ್ಚಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ನಮ್ಮ ಅಧಿಕಾರಿಗಳು ಪರಿಪಕ್ವವಾದ ಅಂಕಿ ಅಂಶಗಳನ್ನು ಗುರುತಿಸಿ ನಂತರ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಕಾರ್ಡ್ ಗಳು ಎಪಿಎಲ್ ನವರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದಲ್ಲಿ ಸುಮಾರು ಶೇಕಡ 65%. ರಿಂದ 75% ರಷ್ಟು ಜನಸಂಖ್ಯೆಗೆ ಬಡತನ ರೇಖೆಗಿಂತ ಕೆಳಗಿರುವಂತೆ ಕಾರ್ಡ್ ಗಳನ್ನು ನೀಡಲಾಗಿದ್ದು ಅದನ್ನು ಪರಿಷ್ಕರಿಸಿಲಾಗುತ್ತಿದ್ದು ಈ ಪ್ರಕ್ರಿಯೆ ಪೂರ್ಣ ಗೊಂಡ ನಂತರ ನಿಜವಾದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ತೊಂದರೆಯಾಗದಂತೆ ಜಾಗ್ರತೆ ವಹಿಸಿ ನೀಡಲಾಗುವುದು ಎಂದು ಸದನದಲ್ಲಿ ಉತ್ತರಿಸಿದರು.

ಅಕ್ರಮ ಪಡಿತರ ವಿರುದ್ದ ವಿಶೇಷ ಕಾರ್ಯಾಚರಣೆ

ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ಆರೋಪ ಸಾಬೀತಾದಲ್ಲಿ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತç ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆಯು ಚಾಲ್ತಿಯಲ್ಲಿದೆ ಎಂದು ಇದೇ ಸಂದರ್ಭದಲ್ಲಿ ಸದನಕ್ಕೆ ಅವರು ತಿಳಿಸಿದರು. ವಿಧಾನ ಪರಿಷತನಲ್ಲಿ ಡಿಸೆಂಬರ್ 9ರಂದು ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ ರೂ. 13,51,30,858 ಗಳ ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ.

ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಿ, ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ವಿಲೇ ಪಡಿಸಿದ ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ ಎಂದರು.

ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು ರೂ. 2,68,07,872 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿರುತ್ತದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ ಎಂದರು. ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.

ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್ ಟಿ ಅಥವಾ ಸಿಎಸ್ ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್ ಐಸಿಯಿಂದ ಕೆಎಸ್ ಡಿಸಿ ಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+