ಸಿಎಂ ಸಿದ್ದರಾಯ್ಯಗೆ ಶಾಸಕ ಬಿಆರ್ ಪಾಟೀಲ್ ಪತ್ರ: ರಾಜೀನಾಮೆ ಕೊಡ್ತಾರಾ ಶಾಸಕರು?
ಬೆಂಗಳೂರು, ನವೆಂಬರ್ 28: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಈ ಹಿಂದೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಆಳಂದ ಕಾಂಗ್ರೆಸ್ ಶಾಸಕ ಮತ್ತೆ ಸ್ವಪಕ್ಷ ಮತ್ತು ಸರ್ಕಾರ ಆಡಳಿತ ವಿರುದ್ಧ ಸಿಡಿದೆದ್ದಿದ್ದಾರೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಾಸಕ ಅಸಮಾಧಾನ ಕುರಿತು ಕರ್ನಾಟಕ ಬಿಜೆಪಿಯು ಮಂಗಳವಾರ ಟ್ವೀಟ್ ಮಾಡಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯ ಕಂಡಿರುವ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈಯಲ್ಲಿ ಜನತೆಯ ಸಮಸ್ಯೆಗಳನ್ನು ಸಂಭಾಳಿಸುವುದು ಇರಲಿ ಸ್ವತಃ ಶಾಸಕರು, ಸಂಪುಟದ ಸಚಿವರನ್ನು ನಿಭಾಯಿಸಲು ಆಗುತ್ತಿಲ್ಲ ಎಂದು ಕುಟುಕಿದೆ.

ಶಾಸಕ ಬಿ.ಆರ್. ಪಾಟೀಲ್ ಅವರು ಬಹಿರಂಗವಾಗಿಯೇ ಸಚಿವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಈ ಸಂಬಂಧ ನೇರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
28 ಶಾಸಕರ ಜತೆ ಮತ್ತಷ್ಟು ಶಾಸಕರು ಅಸಮಾಧಾನ?
ಇದು ಕೇವಲ ಕರ್ನಾಟಕ ಕಾಂಗ್ರೆಸ್ ನ ಒಬ್ಬ ಶಾಸಕರ ಗೋಳಲ್ಲ. ಮೊದಲು ಪತ್ರ ಬರೆದ 28 ಶಾಸಕರ ಜತೆಗೆ ಮತ್ತಷ್ಟು ಶಾಸಕರು ಕೈಜೋಡಿಸಿದ್ದಾರೆ ಎಂದು ಬಿಜೆಪಿ ದೂರಿದೆ.

ಎಟಿಎಂ ಸರ್ಕಾರ (#ATMSarkara) ಎಂದ ಬಿಜೆಪಿಯು, ರಾಜ್ಯದ ಜ್ವಲಂತ ಸಮಸ್ಯೆಗಳನ್ನು ಬದಿಗೊತ್ತಿ ಒಂದು ಕಡೆ ಲೂಟಿ ಹೊಡೆಯುತ್ತಿದ್ದರೆ, ಇನ್ನೊಂದು ಕಡೆ ಒಳ ಜಗಳದಲ್ಲಿ ಮುಳುಗಿ ಹೋಗಿದೆ. ಗಂಡ ಹೆಂಡತಿಯ ನಡುವೆ ಕೂಸು ಬಡವಾಯಿತು ಎನ್ನುವಂತೆ ರಾಜ್ಯದ ಜನರು ಇವರ ಜಗಳಕ್ಕೆ ಬೇಸತ್ತು ಗುಳೆ ಹೊರಟಿದ್ದಾರೆ ಎಂದು ಆರೋಪಿಸಿತು.
ಬಿಆರ್ ಪಾಟೀಲರ ಆಕ್ರೋಶಕ್ಕೆ ಕಾರಣವೇನು?
ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಿಂದ ಕಾಮಗಾರಿ ನಡೆಸಿದ್ದು, ಅದರ ಕುರಿತು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದೇ ವಿಚಾರವಾಗಿ ಶಾಸಕ ಬಿಆರ್ ಪಾಟೀಲ್ ಅವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡನೇ ಬಾರಿಗೆ ಪತ್ರ ಬರೆದಿದ್ದಾರೆ. ಇದೆಲ್ಲವನ್ನು ಬೆಳಗಾವಿ ಅಧಿವೇಶನದಲ್ಲಿ ಪರಿಹರಿಸಬೇಕು. ಇಲ್ಲವಾದರೆ ರಾಜೀನಾಮೆ ಕೊಡುವುದಾಗಿ ಸಿಎಂಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.












Click it and Unblock the Notifications