ಕಾಂಗ್ರೆಸ್ ಬಿಗ್ ಶಾಕ್: ಶಾಸಕ ಬಿ. ಆರ್. ಪಾಟೀಲ್ ರಾಜೀನಾಮೆ
ಬೆಂಗಳೂರು, ಫೆಬ್ರವರಿ 01: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ನಡುವೆ ಕಾಂಗ್ರೆಸ್ ಬಿಗ್ ಶಾಕ್ ಎದುರಾಗಿದೆ. ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಶಾಸಕರ ಸಮರ ಮತ್ತೆ ಮುಂದುವರೆದಿದ್ದು, ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಶಾಸಕರ ಸಮರ ಮತ್ತೆ ಮುಂದುವರೆದಿದೆ.
ರಾಜ್ಯ ಕಾಂಗ್ರೆಸ್ ವಿರುದ್ಧ ಈ ಹಿಂದೆ ಪತ್ರ ಬರೆಯುವ ಮೂಲಕ ಸಮರ ಸಾರಿದ್ದ ಕಲಬುರಗಿ ಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿಆರ್ ಪಾಟೀಲ್ ಅವರು ಇದೀಗ ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಬಿಗ್ ಶಾಕ್ ಎದುರಾಗಿದೆ.

ಮುಖ್ಯಮಂತ್ರಿ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ರಾಜೀನಾಮೆ ನೀಡಿದ ಬಿ.ಆರ್ ಪಾಟೀಲ್ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಮುಖ್ಯಮಂತ್ರಿ ಸಲಹೆಗಾರರಗಾಗಿ ಒಂದು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಬಿ.ಆರ್ ಪಾಟೀಲ್ ಅವರು ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನವನ್ನ ಹೊರಹಾಕಿದ್ರು. ಇದೀಗ ಧಿಡೀರ್ ಬಿ ಆರ್ ಪಾಟೀಲ್ ಅವರು ರಾಜೀನಾಮೆ ನೀಡಿದ್ದು, ರಾಜೀನಾಮೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಆಳಂದ ಕ್ಷೇತ್ರದ ಶಾಸಕರಾಗಿರುವ ಬಿಆರ್ ಪಾಟೀಲ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಲಹೆಗಾರರ ಹುದ್ದೆಗೆ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ನೀಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲ ಸೃಷ್ಟಿಸಿದೆ. ಶಾಸಕ ಬಿ.ಆರ್.ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಳೆಯ ಸ್ನೇಹಿತ ಹಾಗೂ ಪರಮಾಪ್ತರಲ್ಲಿ ಒಬ್ಬರು. ಈ ಹಿಂದೆ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರಿಗೆ ಪ್ರಿಯಾಂಕ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್ ಕಲಬುರಗಿ ಜಿಲ್ಲೆಯಿಂದ ಅಡ್ಡಲಾಗಿದ್ದರು. ಹೀಗಾಗಿ ಬಿ ಆರ್ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಸಲಹೆಗಾರರ ಹುದ್ದೆಯನ್ನ ನೀಡಲಾಗಿತ್ತು.
ಈ ಹಿಂದೆ ಶಾಸಕಾಂಗ ಸಭೆಯಲ್ಲಿ ಬಿ ಆರ್ ಪಾಟೀಲ್ ಅವರು ಸರ್ಕಾರ ಹಾಗೂ ಸಚಿವರ ಮೂಲಕ ಬಹಿರಂಗವಾಗಿ ಹೇಳಿಕೆ ನೀಡುವ ಮೂಲಕ ಪಕ್ಷಕ್ಕೆ ಮುಜುಗರ ಉಂಟು ಮಾಡಿದರು. ಇದೇ ರೀತಿ ಕಾಂಗ್ರೆಸ್‌ನಲ್ಲಿ ಬಸವರಾಜರಾಯ ರೆಡ್ಡಿ ಕೂಡ ಹಲವು ಬಾರಿ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸಿದ್ದರು. ಈ ಇಬ್ಬರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಸವರಾಜರಾಯರೆಡ್ಡಿ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ, ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿಗಳ ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದರು. ಆದರೆ, ಇದೀಗ ಶಾಸಕ ಬಿ.ಆರ್.ಪಾಟೀಲ್ ರಾಜ್ಯ ಹಾಗೂ ಜಿಲ್ಲಾ ರಾಜಕಾರಣದಿಂದ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆಯೂ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಆಳಂದ ಕಾಂಗ್ರೆಸ್ ಶಾಸಕ ಮತ್ತೆ ಸ್ವಪಕ್ಷ ಮತ್ತು ಸರ್ಕಾರ ಆಡಳಿತ ವಿರುದ್ಧ ಸಿಡಿದೆದ್ದಿದ್ದರು. ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು. ಶಾಸಕ ಬಿ.ಆರ್. ಪಾಟೀಲ್ ಅವರು ಬಹಿರಂಗವಾಗಿಯೇ ಸಚಿವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಸಿಡಿದೆದ್ದಿದ್ದರು.












Click it and Unblock the Notifications