ಡಿಕೆ ಶಿವಕುಮಾರ್ ಗೆ ಜಾಮೀನು, ನಿಜವಾಯ್ತೆ ಬ್ರಹ್ಮಾಂಡ ಗುರೂಜಿ ಭವಿಷ್ಯ
ಬೆಂಗಳೂರು, ಅಕ್ಟೋಬರ್ 23: ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ದೆಹಲಿ ಹೈಕೋರ್ಟ್ ಬುಧವಾರದಂದು ಡಿಕೆಶಿಗೆ ಜಾಮೀನು ನೀಡಿದೆ. ಈ ಸಂದರ್ಭದಲ್ಲಿ ಇತ್ತೀಚೆಗೆ ಬ್ರಹ್ಮಾಂಡ ಗುರೂಜಿ ಅವರು ಡಿಕೆ ಶಿವಕುಮಾರ್ ಬಗ್ಗೆ ನೀಡಿದ ಭವಿಷ್ಯ ಮತ್ತೆ ಚರ್ಚೆಗೆ ಬಂದಿದೆ.
ಹಾಸನಾಂಬೆ ದರ್ಶನ ಪಡೆದ ಬ್ರಹ್ಮಾಂಡ ಗುರೂಜಿ (ಜ್ಯೋತಿಷಿ ನರೇಂದ್ರ ಬಾಬು ಶರ್ಮ) ದೇಶದ ಪ್ರಧಾನಿ ಹಾಗೂ ರಾಜ್ಯಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಭವಿಷ್ಯವೊಂದನ್ನು ನುಡಿದಿದ್ದರು.

ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ. ಪ್ರಧಾನಿಯ ಈ ಗಂಡಾಂತರಕ್ಕೆ ವೃಶ್ಚಿಕ ರಾಶಿ ದೋಷವೇ ಕಾರಣ ಎಂದು 2017ರಲ್ಲಿ ಇದೇ ಹಾಸನಾಂಬ ದೇಗುಲದ ಎದುರು ನಿಂತು ಹೇಳಿದ್ದರು. ಈಗಲೂ ಇದೇ ಮಾತನ್ನು ಪುನರುಚ್ಚರಿಸಿದ್ದರು. ಇದಾದ ಬಳಿಕ ಡಿ.ಕೆ ಶಿವಕುಮಾರ್ ಅವರ ಬಂಧನ, ಬಿಡುಗಡೆ ಬಗ್ಗೆ ತಿಳಿಸಿದ್ದರು.
ಡಿಕೆ ಶಿವಕುಮಾರ್ ಅವರ ಜೈಲುವಾಸ ಮುಂದಿನ ತಿಂಗಳು ಅಂತ್ಯವಾಗಲಿದೆ. ಆದರೆ, ಕೋಟಿ ಕೋಟಿ ಹಣ ಮಾಡಿದವರು ಕೃಷ್ಣ ಜನ್ಮಸ್ಥಳಕ್ಕೆ ಹೋಗಲೇಬೇಕು. ಮುಂದಿನ 10 ವರ್ಷದಲ್ಲಿ ಡಿ.ಕೆ.ಶಿವಕುಮಾರ್ ಒಂದು ಬಾರಿ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ .ಆದರೆ, ಮುಂದಿನ 10 ವರ್ಷಗಳಲ್ಲಿ ಐದು ವರ್ಷ ಸಿಎಂಗಳನ್ನು ಕರ್ನಾಟಕ ಕಾಣಲಿದೆ ಎಂದಿದ್ದರು.
ರಾಜ್ಯ ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ಭಾರಿ ಬದಲಾವಣೆಯಾಗಲಿದೆ. ಹಿರಿಯ ರಾಜಕಾರಣಿಗಳು ಶಾಶ್ವತವಾಗಿ ಮೂಲೆಗುಂಪಾಗುವ ಕಾಲ ಬಂದಿದೆ, ಹಳಬರ ಪೈಕಿ ಯಾರೂ ಮುಖ್ಯಮಂತ್ರಿ ಆಗುವ ಯೋಗ ಹೊಂದಿಲ್ಲ. ಮುಂಬರುವ ಸರ್ಕಾರಕ್ಕೆ ಹೊಸಬರೇ ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪನವರು ಪೂರ್ಣಾವಧಿ ಮುಖ್ಯಮಂತ್ರಿಯಾಗುವ ಯೋಗ ಹೊಂದಿಲ್ಲ. ಇನ್ಮುಂದೆ ಯಾವುದೇ ಸಮ್ಮಿಶ್ರ ಸರ್ಕಾರ ಇನ್ನು ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications