ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಜಾತಿ, ಆದಾಯ ಪ್ರಮಾಣಪತ್ರ ವಿತರಣೆ
ಬೆಂಗಳೂರು, ಜುಲೈ 15: ರಾಜ್ಯದಲ್ಲಿರುವ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ವಿತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.
Recommended Video
ಈ ಬಗ್ಗೆ ಇಲಾಖೆಯ ಸಚಿವ ಆರ್.ಅಶೋಕ್, "ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ. ಮೂರರಷ್ಟು ಬ್ರಾಹ್ಮಣರಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣಪತ್ರವನ್ನು ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ"ಎಂದು
ಸಚಿವರು ಹೇಳಿದರು.
'ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ದಿ, ಸ್ವಯಂ ಉದ್ಯೋಗ ಹಾಗೂ ಇನ್ನಿತರ ಸೌಕರ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶಕ್ಕಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ದಿಯನ್ನು ಮಂಡಳಿಯನ್ನು ಸ್ಥಾಪಿಸಲಾಗಿರುತ್ತದೆ'ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

'ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ, ನಾಗರಿಕ ಹುದ್ದೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಗರಿಷ್ಠ ಶೇ.10ರಷ್ಟು ಮೀಸಲಾತಿ ಒದಗಿಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿರುತ್ತದೆ'ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
"ಸಮುದಾಯದಿಂದ ಹಲವು ಬಾರಿ ಮನವಿ ಬಂದಿತ್ತು. ಬ್ರಾಹ್ಮಣ ಸಮುದಾಯದವರಿಗೆ ಜಾತ್ರಿ ಪ್ರಮಾಣಪತ್ರ ಸಿಕ್ಕಿರಲಿಲ್ಲ. ಇದರಿಂದ ಎಲ್ಲಾ ಕ್ಷೇತ್ರದಲ್ಲಿ ಅವರಿಗೆ ತೊಂದರೆಯಾಗುತ್ತಿತ್ತು. ಹಾಗಾಗಿ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ"ಎಂದು ಸಚಿವ ಆರ್.ಅಶೋಕ್ ಹೇಳಿದರು.
"ಜಾತಿ ಪ್ರಮಾಣ ಪತ್ರ ಎಲ್ಲಾ ಜಿಲ್ಲಾಧಿಕಾರಿಗಳ ಮತ್ತು ತಾಲೂಕು ಕಚೇರಿಗಳಲ್ಲಿ ಸಿಗಲಿದೆ" ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.












Click it and Unblock the Notifications