Breaking: ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಹಿಂತೆಗೆತ ಇಲ್ಲ
ಬೆಂಗಳೂರು, ಜೂ.3: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಶುಕ್ರವಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಎರಡನೇ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಅವರ ನಾಮಪತ್ರ ಹಿಂತೆಗೆತ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿ ಡಿ ಕುಪೇಂದ್ರ ರೆಡ್ಡಿ ಅವರಿಗೆ ಬೆಂಬಲ ಕೊಡಬೇಕು ಎಂದು ಜೆಡಿಎಸ್ ನಾಯಕರು ಮಾಡಿದ ಮನವಿಯನ್ನು ಕಾಂಗ್ರೆಸ್ ತಿರಸ್ಕರಿಸಿದ್ದು, ತನ್ನ ಅಭ್ಯರ್ಥಿಯನ್ನು ಕಣದಲ್ಲಿ ಉಳಿಸಿಕೊಳ್ಳುವುದಾಗಿ ಹೇಳಿದೆ.
"ಕಾಂಗ್ರೆಸ್‌ನ ಎರಡನೇ ಅಭ್ಯರ್ಥಿ ಮನ್ಸೂರ್ ಆಲಿ ಖಾನ್ ಸ್ಪರ್ಧೆಯಲ್ಲಿ ಇರುತ್ತಾರೆ. ಅವರನ್ನು ಗೆಲುವು ಸಹ ಖಚಿತ. ಕಾಂಗ್ರೆಸ್ ಮತಗಳ ಜೊತೆಗೆ ಇತರೆ ಪಕ್ಷಗಳ ಶಾಸಕರೂ ನಮ್ಮ ಅಭ್ಯರ್ಥಿ ಗೆಲುವಿಗಾಗಿ ಮತ ಹಾಕುತ್ತಾರೆ. ಕಾದು ನೋಡಿ," ಎಂದು ಹೇಳಿದ್ದಾರೆ.

ನಾವು ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಅವರೂ ಅವರ ಪಕ್ಷದ ಅಭ್ಯರ್ಥಿಯನ್ನು ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications