Madal Virupakshappa : ಮಾಡಾಳ್ ವಿರೂಪಾಕ್ಷಪ್ಪ 5 ದಿನ ಪೊಲೀಸರ ವಶಕ್ಕೆ

ಬೆಂಗಳೂರು, ಮಾರ್ಚ್ 28; ಚನ್ನಗಿರಿಯ ಬಿಜೆಪಿ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪರನ್ನು 5 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ರದ್ದು ಮಾಡಿದ ಬಳಿಕ ಲೋಕಾಯುಕ್ತ ಪೊಲೀಸರು ಸೋಮವಾರ ಶಾಸಕರನ್ನು ಬಂಧಿಸಿದ್ದರು.

ಮಂಗಳವಾರ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪರನ್ನು ಬೆಂಗಳೂರನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶ ಬಿ. ಜಯಂತ್ ಕುಮಾರ್‌ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಏಪ್ರಿಲ್ 1ರ ತನಕ ಲೋಕಾಯುಕ್ತ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.

Bribe Case : Madal Virupakshappa send to 5 days Police Custody

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ಗೆ 40 ಲಕ್ಷ ರೂ. ಲಂಚ ಪಡೆಯುವಾಗ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಬೆಂಗಳೂರಿನಲ್ಲಿರುವ ಶಾಸಕರ ಖಾಸಗಿ ಕಚೇರಿಯಲ್ಲಿ ಲೋಕಾಯಕ್ತರ ಕೈಗೆ ಸಿಕ್ಕಿಬಿದ್ದರು. ಈ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿ.

ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಮಾರ್ಚ್‌ 7ರಂದು ಜಾಮೀನು ನೀಡಿತ್ತು. ಆದರೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಕೆಎಸ್‌ಡಿಎಲ್ ಕಚೇರಿಗೆ ಭೇಟಿ ನೀಡುವಂತಿಲ್ಲ ಎಂದು ಷರತ್ತು ಹಾಕಿತ್ತು. ಬಳಿಕ ಶಾಸಕರು ಎರಡು ದಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.

lokayukta

ಮತ್ತೊಂದು ಕಡೆ ಲೋಕಾಯುಕ್ತರು ಕರ್ನಾಟಕ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಮಾರ್ಚ್‌ 27ರ ಸೋಮವಾರ ಕರ್ನಾಟಕ ಹೈಕೋರ್ಟ್‌ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದು ಮಾಡಿತ್ತು. ಬಳಿಕ ಲೋಕಾಯುಕ್ತ ಪೊಲೀಸರು ಶಾಸಕರನ್ನು ಬಂಧಿಸಲು ಚನ್ನಗಿರಿಯ ನಿವಾಸಕ್ಕೆ ತೆರಳಿದ್ದರು.

ಆದರೆ ನಿರೀಕ್ಷಣಾ ಜಾಮೀನು ರದ್ದಾಗುತ್ತಿದ್ದಂತೆಯೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದರು. ಬಳಿಕ ಸಂಜೆ 7 ಗಂಟೆ ಸುಮಾರಿಗೆ ಅವರನ್ನು ಲೋಕಾಯುಕ್ತ ಪೊಲೀಸರು ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕ್ಯಾತ್ಸಂದ್ರ ಟೋಲ್‌ಗೇಟ್‌ ಬಳಿ ಬಂಧಿಸಿದ್ದರು. ಬಳಿಕ ಆರೋಗ್ಯ ತಪಾಸಣೆ ನಡೆಸಿ ಲೋಕಾಯುಕ್ತ ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದರು. ಮಂಗಳವಾ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಜಾಮೀನು ನೀಡಲು ಮನವಿ; ಲೋಕಾಯುಕ್ತ ಪೊಲೀಸರು ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಆದರೆ ಮಾಡಾಳ್ ವಿರೂಪಾಕ್ಷಪ್ಪ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಹಲವು ಬಾರಿ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಅವರು ವಿಚಾರಣೆ ಎದುರಿಸಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದ್ದರಿಂದ ಜಾಮೀನು ನೀಡಬೇಕು ಎಂದು ಜಾಮೀನು ಅರ್ಜಿಯನ್ನು ಸಲ್ಲಿಕೆ ಮಾಡಿದರು. ಅಂತಿಮವಾಗಿ ಕೋರ್ಟ್‌ 5 ದಿನಗಳ ಕಾಲ ಶಾಸಕರನ್ನು ಪೊಲೀಸರ ವಶಕ್ಕೆ ನೀಡಿತು.

ಇನ್ನು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ಗೆ 40 ಲಕ್ಷ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದಿರುವ ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಟೆಂಡರ್‌ಗೆ 80 ಲಕ್ಷ ಲಂಚ ಕೇಳಿದ್ದ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಪಡೆಯುವಾಗ ಸಿಕ್ಕಿಬಿದ್ದಿದ್ದರು. ಬಳಿಕ ಪ್ರಶಾಂತ್ ಮಾಡಾಳ್ ನಿವಾಸದ ಮೇಲೆ ಲೋಕಾಯುಕ್ತರು ದಾಳಿ ಮಾಡಿದಾಗ 6 ಕೋಟಿ ಹಣ ಪತ್ತೆಯಾಗಿತ್ತು. ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಚನ್ನಗಿರಿ ನಿವಾಸದ ಮೇಲೆ ಸಹ ದಾಳಿ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+