Madal Virupakshappa Bail : ಶಾಸಕ ವಿರೂಪಾಕ್ಷಪ್ಪಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡುತ್ತಾ?

ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮಂಗಳವಾರ ನಡೆಸಲಿದೆ.

ಬೆಂಗಳೂರು, ಮಾರ್ಚ್ 07; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಲಂಚ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಚನ್ನಗಿರಿಯ ಬಿಜೆಪಿ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡುತ್ತದೆಯೇ? ಎಂಬುದು ಕುತೂಹಲ ಮೂಡಿಸಿದೆ. ಸೋಮವಾರ ಜಾಮೀನು ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಇಂದು ವಿಚಾರಣೆ ನಡೆಯಲಿದೆ. ಲಂಚ ಪ್ರಕರಣದಲ್ಲಿ ಶಾಸಕರು ಮೊದಲ ಆರೋಪಿ.

ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಸಲ್ಲಿಕೆ ಮಾಡಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮಂಗಳವಾರ ನಡೆಸಲಿದೆ. ಹೈಕೋರ್ಟ್‌ನ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ನ್ಯಾಯಪೀಠ ಮಂಗಳವಾರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ನಿರ್ಧರಿಸಲಿದೆ.

Bribe Case Will HC Sanction Bail For MLA Maadal Virupakshappa

ಸೋಮವಾರ ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಪರ ವಕೀಲರು ತುರ್ತಾಗಿ ಪ್ರಕರಣದ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ಹಾಗಾಗಿ ವಿರೂಪಾಕ್ಷಪ್ಪಗೆ ಜಾಮೀನು ಸಿಗುತ್ತಾ? ಎಂಬ ಪ್ರಶ್ನೆ ಕುತೂಹಲ ಮೂಡಿಸಿದೆ. ನಿರೀಕ್ಷಣಾ ಜಾಮೀನು ಅರ್ಜಿ ಜೊತೆಗೆ ಎಫ್‌ಐಆರ್‌ ರದ್ದು ಎಂದು ಕೋರಿ ವಿರೂಪಾಕ್ಷಪ್ಪ ಮತ್ತೊಂದು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದು, ಅದು ಇನ್ನೂ ವಿಚಾರಣೆಗೆ ಬರಬೇಕಿದೆ.

ವಿರೂಪಾಕ್ಷಪ್ಪ ಹೈಕೋರ್ಟ್‌ಗೆ ಅರ್ಜಿಯಲ್ಲಿ 'ನನ್ನ ಘನತೆಗೆ ಕುಂದುತರಲು ಹಾಗೂ ದುರುದ್ದೇಶದಿಂದ ಎಫ್‌ಐಆರ್ ದಾಖಲು ಮಾಡಲಾಗಿದೆ. ನಾನು ಲಂಚವನ್ನು ಕೇಳಿಯೂ ಇಲ್ಲ ಮತ್ತು ಪಡೆದೂ ಇಲ್ಲ. ಪ್ರಕರಣದಲ್ಲಿ ನನ್ನನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಲಾಗಿದ್ದು, ಯಾವುದೇ ಸಾಕ್ಷ್ಯವಿಲ್ಲ. ಅದರೂ ವಿಚಾರಣೆ ವೇಳೆ ಪೊಲೀಸರು ಬಂಧಿಸುವ ಸಾಧ್ಯತೆ ಇದೆ. ಹಾಗಾಗಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು' ಎಂದು ಕೋರಿದ್ದಾರೆ.

Bribe Case Will HC Sanction Bail For MLA Maadal Virupakshappa

ಪ್ರಕರಣದ ವಿವರ: ಶಾಸಕ ಕೆ. ಮಾಡಾಳು ವಿರೂಪಾಕ್ಷಪ್ಪ ಪುತ್ರ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್‌ ಮಾಡಾಳು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ ಪ್ರಕ್ರಿಯೆಯಲ್ಲಿ 40 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದರು.

ಹಾಗಾಗಿ ಅವರ ವಿರುದ್ಧ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು ಮಾರ್ಚ್ 2ರಂದು ಎಫ್‌ಐಆರ್‌ ದಾಖಲಿಸಿದ್ದಾರೆ. ಭ್ರಷ್ಟಾಚಾರ ನಿಗ್ರಹ ಕಾಯಿದೆ-1988ರ ಕಲಂ 7 (ಎ) ಮತ್ತು (ಬಿ), 7 ಎ, 8, 9 ಮತ್ತು 10ರ ಅಡಿಯಲ್ಲಿ ದಾಖಲಿಸಿರುವ ಈ ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲ ಆರೋಪಿಯಾದರೆ, ಪ್ರಶಾಂತ್ ಮಾಡಾಳು ಎರಡನೇ ಆರೋಪಿಯಾಗಿದ್ದಾರೆ. ಪ್ರಶಾಂತ್ ಮಾಡಾಳು ಬಂಧನವಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+