ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಡಿಯೋ; ಪತ್ರಕರ್ತರಿಗೆ ಲಂಚ, ಮೌನ ಮುರಿದ ಮುಖ್ಯಮಂತ್ರಿಗಳು!

|
Google Oneindia Kannada News

ಬೆಂಗಳೂರು, ಅಕ್ಟೋಬರ್ 30; ಪತ್ರಕರ್ತರಿಗೆ ದೀಪಾವಳಿ ಹಬ್ಬದ ಸ್ವೀಟ್ ಬಾಕ್ಸ್ ಜೊತೆಗೆ ಹಣ ನೀಡಿರುವ ಪ್ರಕರಣ ಕರ್ನಾಟಕದಲ್ಲಿ ಸಂಚಲನ ಮೂಡಿಸಿದೆ. ಪ್ರತಿಪಕ್ಷಗಳು ಇದೇ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವಿಚಾರದ ಕುರಿತು ಮೌನ ಮುರಿದಿದ್ದಾರೆ. "ಪತ್ರಕರ್ತರಿಗೆ ಉಡುಗೊರೆ ನೀಡುವಂತೆ ನಾನು ಯಾರಿಗೂ ಸೂಚನೆ ನೀಡಿಲ್ಲ. ಲೋಕಾಯುಕ್ತ ತನಿಕೆ ಆಗಲಿ" ಎಂದು ಹೇಳಿದ್ದಾರೆ.

"ಇದು ಕಾಂಗ್ರೆಸ್‌ನ ಟೂಲ್‌ಕಿಟ್‌ ಪರಿಣಾಮ. ಸುಳ್ಳನ್ನು ಸೃಷ್ಟಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಪತ್ರಕರ್ತರಿಗೆ ಉಡುಗೊರೆ ನೀಡುವಂತೆ ನಾನು ಯಾರಿಗೂ ಸೂಚನೆ ನೀಡಿಲ್ಲ" ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಕರ್ನಾಟಕದಲ್ಲಿ ಪತ್ರಕರ್ತರಿಗೆ 1 ಲಕ್ಷ ರೂ. ಲಂಚ ನೀಡಿತಾ ಸಿಎಂ ಕಚೇರಿ?: ದೂರಿನ ಪ್ರತಿಯಲ್ಲಿ ಏನಿದೆ? ಕರ್ನಾಟಕದಲ್ಲಿ ಪತ್ರಕರ್ತರಿಗೆ 1 ಲಕ್ಷ ರೂ. ಲಂಚ ನೀಡಿತಾ ಸಿಎಂ ಕಚೇರಿ?: ದೂರಿನ ಪ್ರತಿಯಲ್ಲಿ ಏನಿದೆ?

basavaraj bommai

ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿಗಳು, "ಕಾಂಗ್ರೆಸ್‌ನವರು ಹಲವರಿಗೆ ಏನೇನು ಉಡುಗೊರೆಗಳನ್ನು ನೀಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ. ಪತ್ರಿಕೆಗಳಲ್ಲಿಯೂ ವರಿದಿಯಾಗಿದೆ" ಎಂದರು.

 ಪತ್ರಕರ್ತರಿಗೆ ಸ್ವೀಟ್‌ ಬಾಕ್ಸ್‌ ಜೊತೆ 2.5 ಲಕ್ಷ ರೂ. ಲಂಚ ಆರೋಪ : ನ್ಯಾಯಾಂಗ ತನಿಖೆಗೆ ಕಾಂಗ್ರೆಸ್‌ ಒತ್ತಾಯ ಪತ್ರಕರ್ತರಿಗೆ ಸ್ವೀಟ್‌ ಬಾಕ್ಸ್‌ ಜೊತೆ 2.5 ಲಕ್ಷ ರೂ. ಲಂಚ ಆರೋಪ : ನ್ಯಾಯಾಂಗ ತನಿಖೆಗೆ ಕಾಂಗ್ರೆಸ್‌ ಒತ್ತಾಯ

"ಐಫೋನ್, ಲ್ಯಾಪ್‌ಟಾಪ್, ಬಂಗಾರದ ನಾಣ್ಯಗಳನ್ನು ನೀಡಿದ್ದಾರೆ. ಅವರಿಗೆ ಮಾತನಾಡಲು ಯಾವುದೇ ನೈತಿಕ ಹಕ್ಕೂ ಇಲ್ಲ. ಯಾರೋ ಒಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದು, ತನಿಖೆಯಾಗುತ್ತದೆ" ಎಂದು ಮುಖ್ಯಮಂತ್ರಿಗಳು ಹೇಳಿದರು.

ಕಾಂಗ್ರೆಸ್ ಪಕ್ಷದ ಸರಣಿ ಟ್ವೀಟ್; ಶುಕ್ರವಾರ ಪತ್ರಕರ್ತರಿಗೆ ಲಂಚ ನೀಡಿರುವ ಪ್ರಕರಣ ಬೆಳಕಿಗೆ ಬಂದ ಬಳಿಕ ಪ್ರತಿಪಕ್ಷ ಕಾಂಗ್ರೆಸ್ ಸರಣಿ ಟ್ವೀಟ್ ಮಾಡುತ್ತಿದೆ. #SayCM ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿಕೊಂಡು ಟ್ವೀಟ್‌ಗಳ ಬಾಣ ಬಿಡುತ್ತಿದೆ.

ಮುಖ್ಯಮಂತ್ರಿಗಳ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್‌ನಲ್ಲಿ ನೀಡಿದ ಹಣವೇ?, 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ?, ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?, ಬಸವರಾಜ ಬೊಮ್ಮಾಯಿ ಅವರೇ, ಆ 'ಲಂಚ'ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು. ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು' ಎಂದು ಕಾಂಗ್ರೆಸ್ ಟ್ವೀಟ್ ಮಾಡಿತ್ತು.

'ಆ ಹಣ ಯಾರದ್ದು?, ಸರ್ಕಾರದ್ದೇ?, ಬಿಜೆಪಿ ಪಕ್ಷದ್ದೇ?, ಮುಖ್ಯಮಂತ್ರಿಗಳದ್ದೇ?, 40% ಕಮಿಷನ್ ಆ ಹಣದ ಮೂಲವೇ?, ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ?, ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ ಹಾಗೂ ತನಿಖೆಯಾಗಬೇಕು' ಎಂದು ಕಾಂಗ್ರೆಸ್ ಆಗ್ರಹಿಸಿತ್ತು.

'ಸಿಎಂ ಕಚೇರಿ ನೀಡಿದ 2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ಧಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು' ಎಂದು ಪಕ್ಷ ಒತ್ತಾಯಿಸಿತ್ತು.

ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ, 'ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ಸ್ವೀಟ್ ಬಾಕ್ಸ್ ಲಂಚದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ?. ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ?. ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು' ಎಂದು ಹೇಳಿತ್ತು.

'ನಾವು ಸುಮ್ಮನೇ ಬಸವರಾಜ ಬೊಮ್ಮಾಯಿ ಅವರನ್ನು ಪೇ ಸಿಎಂ ಎಂದಿಲ್ಲ!. ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ!. ಇವೆಲ್ಲವೂ #PayCMಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ!? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?' ಎಂದು ಟ್ವೀಟ್ ಮಾಡಿತ್ತು.

English summary
Karnataka Chief Minister's office sweet box bribe to journalists. Chief minister Basavaraj Bommai clarification on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X