ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ; ರಾಜ್ಯಪಾಲರಿಗೆ ಅಧಿಕಾರಿ ದೂರು!

ಮಂಡ್ಯ, ಆಗಸ್ಟ್‌ 07: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದ್ದು, 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದೂರು ನೀಡಿದ್ದಾರೆ.

ಮಂಡ್ಯ, ಮಳ್ಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಆತ್ಮ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರಿನ ಜೊತೆಗಿನ ಪತ್ರದಲ್ಲಿ ಹೇಳಿದ್ದಾರೆ.

Bribery Allegation Against Minister Chaluvarayaswamy Some Officers Write A Letter To Governor

ಸಚಿವರ ವಿರುದ್ಧದ ದೂರಿನ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಅವರಿಗೆ ಪತ್ರ ಬರೆದಿರುವ ರಾಜ್ಯಪಾಲರು, ಪರಿಶೀಲಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಮಧ್ಯೆ ದೂರಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಚಲುವರಾಯಸ್ವಾಮಿ, ಇಲಾಖೆ ಕಾರ್ಯದರ್ಶಿಯಿಂದ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ರಾಜ್ಯಪಾಲರ ಪತ್ರದಲ್ಲೇನಿದೆ?

ರಾಜ್ಯಪಾಲರ ಕಚೇರಿಯಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ "ಮಾನ್ಯ ರಾಜ್ಯಪಾಲರವರಿಗೆ ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿ ಉಲ್ಲೇಖಿತ ದೂರರ್ಜಿಯನ್ನು ಸಲ್ಲಿಸಿರುತ್ತಾರೆ. ದೂರರ್ಜಿಯಲ್ಲಿ ಮೇಲಿನ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ 6-8 ಲಕ್ಷ ರೂಪಾಯಿಗಳನ್ನು ನೀಡುವಂತೆ ಮಾನ್ಯ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿರುತ್ತಾರೆ.

ಲಂಚ ಕೇಳುವ ಇಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕುವ ಸಂಬಂಧ ಕ್ರಮ ವಹಿಸದಿದ್ದಲ್ಲಿ ಅಧಿಕಾರಿಗಳು ಕುಟುಂಬದ ಸದಸ್ಯರ ಜೊತೆಗೆ ವಿಷ ಕುಡಿಯುವುದಾಗಿ ತಿಳಿಸಿರುತ್ತಾರೆ. ಈ ದೂರರ್ಜಿಯನ್ನು ನಿಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ವಹಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಿದ್ದೇನೆ ಎಂದು ಉಲ್ಲೇಖಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+