ರಾಜ್ಯಪಾಲರಿಗೆ ನೀಡಿರುವ ದೂರು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚು : ಚೆಲುವರಾಯಸ್ವಾಮಿ
ಬೆಂಗಳೂರು, ಆಗಸ್ಟ್ 07: ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನನ್ನ ವಿರುದ್ಧ ದೂರು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.
ಈ ಕುರಿತಾಗಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ಕೆಲ ಮಾಧ್ಯಮದಲ್ಲಿ ಮರು ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ. ನಮ್ಮ ಸರ್ಕಾರದ ಜನಪರ ಆಡಳಿತದ ಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದು ಇದು ಹತಾಶಾ ಮನೋಭಾವವಾಗಿದೆ ಎಂದು ಕಿಡಿಕಾರಿದ್ದಾರೆ.

ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಲಂಚಕ್ಕೆ ಒತ್ತಾಯಿಸಲಾಗಿದೆ ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿಯವರ ಮೂಲಕ ತನಿಖೆ ಮಾಡಿ ವರದಿ ಪಡೆಯುವಂತೆ ಚಲುವರಾಯಸ್ವಾಮಿ ಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಕೃಷಿ ಇಲಾಖೆಯಲ್ಲಿ ವರ್ಗಾವಣೆಗೆ ಹಣಕ್ಕೆ ಒತ್ತಾಯಿಸಲಾಗಿದೆ ಎಂದು ಮಂಡ್ಯ ಜಿಲ್ಲೆಯ ಅಧಿಕಾರಿಗಳ ಹೆಸರಿನಲ್ಲಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ ಎಂದು
ಕೆಲ ಮಾಧ್ಯಮದಲ್ಲಿ ಸುದ್ದಿ ಪ್ರಸಾರ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವರು ಸೂಕ್ತ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗ ಪಡಿಸುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಅಧಿಕಾರಿಗಳು ನೀಡಿರುವ ದೂರು ಎಂದು ಪ್ರಸಾರವಾಗಿರುವ ವರದಿ ಸತ್ಯಕ್ಕೆ ದೂರವಾಗಿದೆ. ಮಂಡ್ಯ ಜಿಲ್ಲೆಯ ಅಧಿಕಾರಿಗಳೆಂದು ಬಿಂಬಿಸಿ ರಾಜ್ಯಪಾಲರಿಗೆ ನೀಡಿರುವ ದೂರು ಪಿತೂರಿ ಸ್ವರೂಪದಲ್ಲಿದ್ದು ,ನಕಲಿ ವ್ಯಕ್ತಿಗಳು ಮಾಡಿರುವ ಯೋಜಿತ ಸಂಚಾಗಿದೆ. ನಮ್ಮ ಸರ್ಕಾರದ ಜನಪರ ಆಡಳಿತದ ಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಲೇ ಬಂದಿದ್ದು ಇದು ಹತಾಶೆ ಮನೋಭಾವವಾಗಿದೆ.
ನಕಲಿ ದೂರುಪತ್ರ ಸೃಷ್ಟಿ ಉದ್ದೇಶ ಪೂರ್ವಕವಾಗಿ ಕೆಟ್ಟ ಹೆಸರು ತರುಲು ಮಾಡುತ್ತಿರು ಮುಂದುವರೆದ ಪ್ರಯತ್ನ. ಹಾಗಾಗಿಯೇ ದೂರಿನ ಬಗ್ಗೆ ಮುಖ್ಯ ಕಾರ್ಯದರ್ಶಿಯವರ ಮೂಲಕ ತನಿಖೆ ಮಾಡಿ ವರದಿ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಚಲುವರಾಯಸ್ವಾಮಿ ಯವರು ಒತ್ತಾಯಿಸಿದ್ದಾರೆ.
ಇನ್ನೂ ರಾಜ್ಯಪಾಲರ ಕಚೇರಿಯಿಂದ ಮುಖ್ಯ ಕಾರ್ಯದರ್ಶಿ ಅವರಿಗೆ ಬರೆದ ಪತ್ರದಲ್ಲಿ "ಮಾನ್ಯ ರಾಜ್ಯಪಾಲರವರಿಗೆ ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ, ಶ್ರೀರಂಗಪಟ್ಟಣ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಮತ್ತು ಸಿಬ್ಬಂದಿ ಉಲ್ಲೇಖಿತ ದೂರರ್ಜಿಯನ್ನು ಸಲ್ಲಿಸಿರುತ್ತಾರೆ. ದೂರರ್ಜಿಯಲ್ಲಿ ಮೇಲಿನ ಅಧಿಕಾರಿಗಳು ಉಲ್ಲೇಖಿಸಿರುವಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ 6-8 ಲಕ್ಷ ರೂಪಾಯಿಗಳನ್ನು ನೀಡುವಂತೆ ಮಾನ್ಯ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿರುತ್ತಾರೆ.
ಲಂಚ ಕೇಳುವ ಇಂತಹ ಅನಿಷ್ಠ ಪದ್ಧತಿಗೆ ಕಡಿವಾಣ ಹಾಕುವ ಸಂಬಂಧ ಕ್ರಮ ವಹಿಸದಿದ್ದಲ್ಲಿ ಅಧಿಕಾರಿಗಳು ಕುಟುಂಬದ ಸದಸ್ಯರ ಜೊತೆಗೆ ವಿಷ ಕುಡಿಯುವುದಾಗಿ ತಿಳಿಸಿರುತ್ತಾರೆ. ಈ ದೂರರ್ಜಿಯನ್ನು ನಿಮಾನುಸಾರ ಪರಿಶೀಲಿಸಿ, ಸೂಕ್ತ ಕ್ರಮ ವಹಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಿದ್ದೇನೆ ಎಂದು ಉಲ್ಲೇಖಿಸಲಾಗಿದೆ.












Click it and Unblock the Notifications