ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಸಿಎಂ ಬೊಮ್ಮಾಯಿ!
ಬೆಂಗಳೂರು, ಆ. 06: "ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವುದರಿಂದ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುವುದಲ್ಲದೆ, ನ್ಯಾಯಾಂಗ ಇನ್ನಷ್ಟು ಮಾನವೀಯ ಹಾಗೂ ಜನಸ್ನೇಹಿಯಾಗಲು ಸಾಧ್ಯ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿಜ್ಞಾನೇಶ್ವರ ಅಧ್ಯಯನ ಪೀಠದ ವತಿಯಿಂದ ಆಯೋಜಿಸಲಾಗಿದ್ದ 'ಕರ್ನಾಟಕದಲ್ಲಿ ಮಿತಾಕ್ಷರ, ವಚನ, ದಾಸ ಮತ್ತು ಜಾನಪದ ಸಾಹಿತ್ಯದಲ್ಲಿ ಕಾನೂನಿನ ಸಮಾಜಮುಖಿ ಮೌಲ್ಯಗಳು: ಒಂದು ಪರಿಶೋಧನೆ' ವೆಬಿನಾರ್‌ನ್ನು ಆನ್‌ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದರು.
"ಕರ್ನಾಟಕದ ವಚನ, ದಾಸ ಸಾಹಿತ್ಯ ಹಾಗೂ ಜಾನಪದ ಸಾಹಿತ್ಯಗಳು ಸಮಾನತೆ, ಸಹಿಷ್ಣುತೆ, ಧನ್ಯತೆ, ಕ್ಷಮಾಗುಣ ಮೊದಲಾದ ಭಾವಗಳನ್ನು ಸಮರ್ಥವಾಗಿ ಅಭಿವ್ಯಕ್ತಪಡಿಸಿವೆ, ಈ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಅಳವಡಿಸುವ ನಿಟ್ಟಿನಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠ ಕಾರ್ಯನಿರ್ವಹಿಸಬೇಕಾಗಿದೆ" ಎಂದು ಇದೇ ವೇಳೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಾಮಾಜಿಕ ಬದಲಾವಣೆ ಜೊತೆ ಕಾನೂನಿನ ಪರಿವರ್ತನೆ
"ಸಮಾಜದಲ್ಲಿನ ಬದಲಾವಣೆಗಳೊಂದಿಗೆ ಕಾನೂನಿನಲ್ಲಿಯೂ ಪರಿವರ್ತನೆಗಳಾಗಿವೆ. ಇಂದಿನ ದಿನಗಳಲ್ಲಿ ಸಾಮಾಜಿಕ ಸ್ಥಿತಿಗತಿಗಳಲ್ಲಿ, ವ್ಯಕ್ತಿ-ವ್ಯಕ್ತಿಯ ಸಂಬಂಧದಲ್ಲಿ, ಸಮಾಜ- ಸಮಾಜದ ಸಂಬಂಧದಲ್ಲಿ ಅಗಾಧ ಬದಲಾವಣೆಗಳಾಗುತ್ತಿದೆ. ಅಂತೆಯೇ ಕಾನೂನಿನ ಕುರಿತ ಜನತೆಯ ಚಿಂತನೆಯಲ್ಲಿಯೂ ಬದಲಾವಣೆಗಳಾಗುತ್ತಿದೆ. ಈ ಅಂಶಗಳ ಕುರಿತು ಅಧ್ಯಯನ ಪೀಠ ಅಧ್ಯಯನ ನಡೆಸಬೇಕು" ಎಂದು ಸಿಎಂ ಬೊಮ್ಮಾಯಿ ಆಶಿಸಿದರು.

ಕರ್ನಾಟಕದ ಸಾಹಿತ್ಯ ಕ್ಷೇತ್ರದ ಕ್ರಾಂತಿ ಗಮನಾರ್ಹ
"ಕರ್ನಾಟಕದ ಸಾಹಿತ್ಯ ಕ್ಷೇತ್ರದ ಕ್ರಾಂತಿ ಗಮನಾರ್ಹವಾದುದು. ನಮ್ಮ ದೇಶದ ಕಾನೂನಿಗೆ ಆಧಾರವಾದ ಸಂವಿಧಾನದ ಆಶಯಗಳು ಬಸವಣ್ಣನವರ ಚಿಂತನೆಗಳನ್ನೇ ಬಿಂಬಿಸುತ್ತದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಸಕ್ತಿ ವಹಿಸಿ ಸ್ಥಾಪಿಸಿದ ಈ ಅಧ್ಯಯನ ಪೀಠವು ರಾಷ್ಟ್ರೀಯ, ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತಾಗಲಿ" ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು.

ನ್ಯಾ. ಶಿವರಾಜ ಪಾಟೀಲ್ ಭಾಗಿ
ಕಾರ್ಯಕ್ರಮದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ. ಕೆ. ಸುಧಾಕರ್, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ನ್ಯಾ. ಶಿವರಾಜ ಪಾಟೀಲ್, ನ್ಯಾ. ಬಿ. ಎನ್. ಕೃಷ್ಣ, ಕಾನೂನು ವಿವಿ ಕುಲಪತಿ ಪ್ರೊ. ಈಶ್ವರ ಭಟ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಗಿರೀಶ ಹೊಸೂರು ವೆಬಿನಾರ್ ನಲ್ಲಿ ಉಪಸ್ಥಿತರಿದ್ದರು.
Recommended Video

ಕರ್ನಾಟಕ-ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ
ವೆಬಿನಾರ್ ಬಳಿಕ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೌಹಾರ್ದಯುತ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಾತುಕತೆಯಲ್ಲಿ ಪ್ರಮುಖವಾಗಿ, ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಸಮಾಲೋಚನೆ ನಡೆಸಲಾಯಿತು.
ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ ಕೊಡುವುದು ಸೇರಿದಂತೆ, ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಜಲ ವಿವಾದಗಳನ್ನು ಬಗೆಹರಿಸಿಕೊಳ್ಳುವ ಸಂಬಂಧ ಮಾಜಿ ಸಿಎಂ ಪವಾರ್ ಹಾಗೂ ಸಿಎಂ ಬೊಮ್ಮಾಯಿ ನಡುವೆ ಮಾತುಕತೆ ನಡೆಯಿತು. ಎರಡೂ ರಾಜ್ಯಗಳ ನಡುವಿನ ಅಂರಾರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಕೂಡ ಸಹಮತದ ತೀರ್ಮಾನಕ್ಕೆ ಬರಲಾಗಿದ್ದು, ಈ ಕುರಿತಂತೆ ನವದೆಹಲಿಯಲ್ಲಿ ಸಭೆ ನಿಗದಿ ಮಾಡುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಯಿತು ಎಂದು ಮುಖ್ಯಮಂತ್ರಿಗಳ ಸಚಿವಾಲಯ ಮಾಹಿತಿ ಕೊಟ್ಟಿದೆ.
-
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications