ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ: 'ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ?

|
Google Oneindia Kannada News

ಬೆಂಗಳೂರು, ಜೂನ್ 29: ರಾಜಸ್ಥಾನದಲ್ಲಿ ಟೈಲರ್ ಶಿರಚ್ಛೇದ ಮಾಡಿರುವ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ, ಕೊಲೆಪಾತಕರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ. ಅಲ್ಲದೆ ಕೊಲೆಯಾದ ಕನ್ಹಯ್ಯ ಲಾಲ್ ಕುಟುಂಬದ ಜತೆ ನಾವೆಲ್ಲರೂ ನಿಲ್ಲಬೇಕಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಸರಣಿ ಟ್ವೀಟ್ ಮಾಡಿದ್ದು, ಅದರ ಪೂರ್ಣ ಪಾಠ ಇಂತಿದೆ. "ರಾಜಸ್ಥಾನದಲ್ಲಿ ಮುಗ್ಧ ಟೈಲರ್ ಶಿರಚ್ಛೇದ ಮಾಡಿರುವ ಘಟನೆ ನನಗೆ ತೀವ್ರ ಘಾಸಿ ಉಂಟು ಮಾಡಿದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪೈಶಾಚಿಕ ಕೃತ್ಯ. ಹಿಂಸೆ ಯಾವುದಕ್ಕೂ ಉತ್ತರವಲ್ಲ, ಪರಿಹಾರವೂ ಅಲ್ಲ. ಯಾವ ಧರ್ಮವೂ ಹಿಂಸೆಯನ್ನು ಒಪ್ಪುವುದೂ ಇಲ್ಲ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Breaking: ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಟೈಲರ್ ಶಿರಚ್ಛೇದ Breaking: ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಟೈಲರ್ ಶಿರಚ್ಛೇದ

"ಕನ್ಹಯ್ಯ ಲಾಲ್ ಅವರ ಕಿರಾತಕ ಹತ್ಯೆಯನ್ನು ಪಕ್ಷಾತೀತವಾಗಿ ಖಂಡಿಸಲೇಬೇಕು. ಆ ಪಾತಕಿಗಳಿಗೆ ಕಠಿಣಾತಿ ಕಠಿಣ ಶಿಕ್ಷೆ ವಿಧಿಸಬೇಕು. ಮತ್ತೊಮ್ಮೆ ಇಂಥ ಘಟನೆಗಳು ಮರುಕಳಿಸಲೇಬಾರದು. ರಕ್ಕಸರಷ್ಟೇ ಇಂಥ ಕೃತ್ಯ ಎಸಗಲು ಸಾಧ್ಯ. ಕಾನೂನು-ಕಾಯ್ದೆ ಎನ್ನುವುದಕ್ಕಿಂತ ಮನಃಪರಿವರ್ತನೆಯಿಂದಲೇ ಇಂಥ ಸ್ಥಿತಿಯಿಂದ ಎಲ್ಲರೂ ಹೊರಬೇಕಿದೆ" ಎಂದು ಟ್ವೀಟ್ ಮೂಲಕ ಅಭಿಪ್ರಾಯ ಪಟ್ಟರು.

Brutal Murder Of Tailor In Rajasthan, H D Kumaraswamy Reaction

"ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಿದೆ? ಕೊಲೆ, ಕೋಮುವಾದ, ಅಸಹಿಷ್ಣುತೆ, ದ್ವೇಷದಿಂದ ಧರ್ಮಗಳು ಉಳಿಯುವುದಿಲ್ಲ. ಮಾನವೀಯತೆ ಸತ್ತರಷ್ಟೇ ಕೋಮುವಾದ ವಿಜೃಂಭಿಸುತ್ತದೆ. ದರ್ಪ ಹೆಚ್ಚಿದಷ್ಟೂ ಧರ್ಮಗಳೂ ಅಳಿಯುತ್ತವೆ. ಕನ್ಹಯ್ಯ ಕೊಲೆ ಇಂಥ ದರ್ಪವನ್ನು ನಾಮಾವಶೇಷ ಮಾಡಲಿ" ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

"ಕನ್ಹಯ್ಯ ಅವರಿಗಾಗಿ ಇಡೀ ಭಾರತ ಕಣ್ಣೀರಿಡುತ್ತಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಕರುಣಿಸಲಿ. ಕನ್ಹಯ್ಯ ಅವರ ಸಾವು ಕೊಂದು ವಿಜೃಂಭಿಸುವ ಕಿರಾರತಕ ಮನಃಸ್ಥಿತಿಯನ್ನು ಬದಲಿಸಲಿ" ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಉದಯ್‌ಪುರ ಪ್ರಕರಣ: ಕನ್ಹಯ್ಯಾ ಲಾಲ್‌ ಅಂತಿಮ ಸಂಸ್ಕಾರಕ್ಕೆ ಜನಸ್ತೋಮ- ಬಿಗಿ ಭದ್ರತೆಉದಯ್‌ಪುರ ಪ್ರಕರಣ: ಕನ್ಹಯ್ಯಾ ಲಾಲ್‌ ಅಂತಿಮ ಸಂಸ್ಕಾರಕ್ಕೆ ಜನಸ್ತೋಮ- ಬಿಗಿ ಭದ್ರತೆ

Brutal Murder Of Tailor In Rajasthan, H D Kumaraswamy Reaction

ರಾಜಸ್ಥಾನದ ಉದಯಪುರದಲ್ಲಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾರನ್ನು ಬೆಂಬಲಿಸಿ ಪೋಸ್ಟ್ ಹಾಕಿದ್ದ ಟೈಲರ್ ಕನ್ಹಯ್ಯಾ ಲಾಲ್‌ರನ್ನು ಹಾಡಹಗಲಿನಲ್ಲೇ ಹತ್ಯೆ ಮಾಡಲಾಗಿತ್ತು. ತಾಲಿಬಾನ್ ಮಾದರಿಯಲ್ಲಿ ಟೈಲರ್ ಅಂಗಡಿಗೆ ನುಗ್ಗಿದ ಆರೋಪಿಗಳು ಕತ್ತು ಕೊಯ್ದು ಹತ್ಯೆ ಮಾಡಿ, ಹತ್ಯೆ ಮಾಡಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

Recommended Video

ಕ್ರಿಕೆಟರ್ಸ್ ರೂಲ್ಸ್ ಫಾಲೋ ಮಾಡಿದ್ರೂ ಕಷ್ಟ ಮಾಡದಿದ್ರೂ ಕಷ್ಟ?ಟೀಂ ಇಂಡಿಯಾಗೆ ಸಂಕಷ್ಟ | Oneindia Kannada

English summary
Brutal Murder Of Tailor In Rajasthan, Udaipur. H. D. Kumaraswamy Reaction. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X