ವಿಶ್ವಾಸ ಮತ ಯಾಚಿಸದೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಿಎಸ್ವೈ
Recommended Video

ವಿಶ್ವಾಸ ಮತ ಯಾಚಿಸದೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಬಿಎಸ್ವೈ | Oneindia Kannada
ಬೆಂಗಳೂರು, ಮೇ 19: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ. ವಿಶ್ವಾಸಮತ ಯಾಚನೆ ಮಾಡದೆ ನೇರವಾಗಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ಸದನದಲ್ಲಿ ಘೋಷಿಸಿದರು.
ಸದನದಲ್ಲಿ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಗಿದ ನಂತರ ಒಂದು ಸಾಲಿನ ವಿಶ್ವಾಸ ಮತಯಾಚನೆ ನಿರ್ಣಯ ಮಂಡಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಷಣ ಆರಂಭಿಸಿದರು.

ಭಾಷಣದುದ್ದಕ್ಕೂ ಭಾವುಕರಾಗಿ ಮಾತನಾಡಿದ ಯಡಿಯೂರಪ್ಪ ತಾವು ವಿಶ್ವಾಸ ಮತಯಾಚನೆ ಮಾಡದೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪ್ರಕಟಿಸಿದರು.
ಸದನ ಮುಗಿದ ನಂತರ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಲಿದ್ದೇನೆ ಎಂದು ಹೇಳಿದರು. ಅದರಂತೆ ಅವರು ಈಗ ರಾಜಭವನದತ್ತ ಹೊರಟಿದ್ದಾರೆ.
ಹೀಗೆ ಬಹು ನಿರೀಕ್ಷೆಯೊಂದಿಗೆ ಮೂರು ದಿನಗಳ ಕೆಳಗೆ ಪ್ರಮಾಣ ವಚನ ಸ್ವೀಕರಿಸಿ ಸರಕಾರ ರಚಿಸಿದ್ದ ಬಿಎಸ್ ಯಡಿಯೂರಪ್ಪ ಅವರ ಸರಕಾರ ಪತನವಾಗಿದೆ.












Click it and Unblock the Notifications