ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 21ರಂದು ಶಾಸಕರ ಸಭೆ ಕರೆದ ಬಿ.ಎಸ್.ಯಡಿಯೂರಪ್ಪ

|
Google Oneindia Kannada News

Recommended Video

ಕುತೂಹಲ ಮೂಡಿಸಿದ ಯಡಿಯೂರಪ್ಪ ನಡೆ..! ಕುಮಾರಣ್ಣನಿಗೆ ಆತಂಕ..? | Oneindia kannada

ಬೆಂಗಳೂರು, ಮೇ 17 : ಲೋಕಸಭಾ ಚುನಾವಣೆ 2019ರ ಮತ ಎಣಿಕೆಗೆ ಮೊದಲು ಕರ್ನಾಟಕ ಬಿಜೆಪಿ ಶಾಸಕರ ಸಭೆ ನಡೆಯಲಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಹ ಸಚಿವರು, ಶಾಸಕರ ಸಭೆಯನ್ನು ಕರೆದಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಮೇ 21ರಂದು ಶಾಸಕರ ಸಭೆಯನ್ನು ಬೆಂಗಳೂರಿನಲ್ಲಿ ಕರೆದಿದ್ದಾರೆ. ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿದ್ದು, ಅದಕ್ಕೂ ಮೊದಲು ನಡೆಯಲಿರುವ ಸಭೆಯಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ ಭೇಟಿಯಾದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರರಮೇಶ್ ಜಾರಕಿಹೊಳಿ ಭೇಟಿಯಾದ ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ

ಮೇ 23ರಂದು ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಆದ್ದರಿಂದ, ಮೇ 21ರಂದು ನಡೆಯಲಿರುವ ಸಭೆ ಕುತೂಹಲ ಮೂಡಿಸಿದೆ.

ಮೇ 21ಕ್ಕೆ ಮಹತ್ವದ ಸಭೆ ಕರೆದ ಎಚ್.ಡಿ.ದೇವೇಗೌಡರುಮೇ 21ಕ್ಕೆ ಮಹತ್ವದ ಸಭೆ ಕರೆದ ಎಚ್.ಡಿ.ದೇವೇಗೌಡರು

ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ರಾಜ್ಯದ ಮೈತ್ರಿ ಸರ್ಕಾರದಲ್ಲಿ ಭಿನ್ನಮತ ಉಂಟಾಗುವ ಸಾಧ್ಯತೆ ಇದ್ದು, ಆಗ ಬಿಜೆಪಿ ನಡೆ ಏನಾಗಿರಬೇಕು? ಎಂದು ಶಾಸಕರ ಜೊತೆ ಯಡಿಯೂರಪ್ಪ ಅವರು ಚರ್ಚೆ ನಡೆಸಿ, ಅಭಿಪ್ರಾಯ ಸಂಗ್ರಹಿಸಲಿದ್ದಾರೆ.....

ಉಪ ಚುನಾವಣೆ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಹಾದಿ ಸುಗಮ?ಉಪ ಚುನಾವಣೆ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಹಾದಿ ಸುಗಮ?

ಉಪ ಚುನಾವಣೆ, ಲೋಕಸಭಾ ಚುನಾವಣೆ

ಉಪ ಚುನಾವಣೆ, ಲೋಕಸಭಾ ಚುನಾವಣೆ

ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಮಾತ್ರ ಪ್ರಕಟವಾಗುತ್ತಿಲ್ಲ. ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಸಹ ಪ್ರಕಟವಾಗಲಿದೆ. ಆದ್ದರಿಂದ, ಫಲಿತಾಂಶದ ಬಳಿಕ ಮುಂದೇನು? ಎಂದು ಚರ್ಚಿಸಲು ಯಡಿಯೂರಪ್ಪ ಅವರು ಸಭೆ ಕರೆದಿದ್ದಾರೆ.

ಅತೃಪ್ತ ಶಾಸಕರ ನಡೆ

ಅತೃಪ್ತ ಶಾಸಕರ ನಡೆ

ಕಾಂಗ್ರೆಸ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ, ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಇತರ ಶಾಸಕರು ಮೇ 23ರ ಬಳಿಕ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ. ಆದ್ದರಿಂದ, ಶಾಸಕರ ಅಭಿಪ್ರಾಯವನ್ನು ಯಡಿಯೂರಪ್ಪ ಸಂಗ್ರಹಿಸಲಿದ್ದಾರೆ.

ಮೈತ್ರಿ ಸರ್ಕಾರದ ಕಗ್ಗಂಟು

ಮೈತ್ರಿ ಸರ್ಕಾರದ ಕಗ್ಗಂಟು

ಲೋಕಸಭಾ ಚುನಾವಣಾ ಫಲಿತಾಂಶ ಮೈತ್ರಿ ಸರ್ಕಾರದಲ್ಲಿ ವೈಮನಸ್ಸು ತರಲಿದೆ ಎಂಬ ವಿಶ್ವಾಸದಲ್ಲಿ ಬಿಜೆಪಿ ನಾಯಕರಿದ್ದಾರೆ. ಆದ್ದರಿಂದ, ಕಗ್ಗಂಟು ಉಂಟಾದರೆ ಪಕ್ಷದ ಮುಂದಿನ ನಡೆ ಏನಾಗಿರಬೇಕು? ಎಂದು ಯಡಿಯೂರಪ್ಪ ಅವರು ಶಾಸಕರಿಂದ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಿದ್ದಾರೆ.

ಸಭೆ ಕರೆದ ಎಚ್.ಡಿ.ದೇವೇಗೌಡ

ಸಭೆ ಕರೆದ ಎಚ್.ಡಿ.ದೇವೇಗೌಡ

ಮತ್ತೊಂದು ಕಡೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸಹ ಮೇ 21ರಂದು ಜೆಡಿಎಸ್‌ನ ಸಚಿವರು, ಶಾಸಕರ ಸಭೆಯನ್ನು ಕರೆದಿದ್ದಾರೆ. ಒಂದೇ ದಿನ ಎರಡೂ ಪಕ್ಷಗಳು ಸಭೆ ನಡೆಸಲಿದ್ದು, ಮೇ 23ರ ನಂತರ ರಾಜ್ಯ ರಾಜಕೀಯದಲ್ಲಿ ಏನಾಗಲಿದೆ? ಎಂದು ಕಾದು ನೋಡಬೇಕಿದೆ.

English summary
Karnataka BJP president B.S.Yeddyurappa called party MLA's meeting ahead of the Lok sabha elections 2019 counting on May 23, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X