Get Updates
Get notified of breaking news, exclusive insights, and must-see stories!

ಬ್ರೇಕಿಂಗ್ ನ್ಯೂಸ್‌ನಲ್ಲಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

Recommended Video

      Breaking News : ಫೇಸ್ ಬುಕ್ ನಲ್ಲಿ ವಿಡಿಯೋ ರಿಲೀಸ್ ಮಾಡಿದ ಬಿ ಎಸ್ ಯಡಿಯೂರಪ್ಪ

      ಶಿವಮೊಗ್ಗ, ಮಾರ್ಚ್ 16 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ ಜನರ ನಿರೀಕ್ಷೆ ಹುಸಿ ಮಾಡಿದ್ದಾರೆ. ಶುಕ್ರವಾರ ಸಂಜೆ 5 ಗಂಟೆಗೆ ಬ್ರೇಕಿಂಗ್ ನ್ಯೂಸ್ ಕೊಡುವುದಾಗಿ ತಮ್ಮ ಅಧಿಕೃತ ಖಾತೆಯಿಂದ ಟ್ವಿಟ್ ಮಾಡಿದ್ದ ಯಡಿಯೂರಪ್ಪ ಜನರನ್ನು, ಮಾಧ್ಯಮದವರನ್ನು ತುದಿಗಾಲ ಮೇಲೆ ನಿಲ್ಲಿಸಿದ್ದರು.

      ಯಡಿಯೂರಪ್ಪ ಅವರು ಸಂಜೆ 5.45ಕ್ಕೆ ಫೇಸ್‌ಬುಕ್ ಮೂಲಕ ಪ್ರತ್ಯಕ್ಷರಾದರು. ಸುಮಾರು 5 ನಿಮಿಷದ ವಿಡಿಯೋದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು.

      BS Yeddyurappa

      ಫೇಸ್‌ ಬುಕ್ ಲೈವ್‌ನಲ್ಲಿ ಹೇಳಿದ್ದೇನು?

      * ಕರ್ನಾಟಕ ಸರ್ಕಾರ ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದೆ. ರಾಜ್ಯದ ಜನರ ಮೇಲೆ ಸಾಲದ ಹೊರೆಯನ್ನು ಹೊರಿಸಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ.

      * ಜನರು ನಮ್ಮ ಮೇಲೆ ಭರವಸೆ ಇಟ್ಟಿದ್ದಾರೆ ಎಂದು ಸರ್ಕಾರ ಹೇಳಿತ್ತು. ಆದರೆ, ಜನರು ಇಟ್ಟ ಭರವಸೆಯನ್ನು ಸರ್ಕಾರ ಉಳಿಸಿಕೊಂಡಿಲ್ಲ.

      * ಕಳೆದ 5 ವರ್ಷಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಹಿಂದಿನ ಯಾವ ಸರ್ಕಾರವೂ ಮಾಡದಷ್ಟು ಸಾಲವನ್ನು ಈ ಸರ್ಕಾರ ಮಾಡಿದೆ. ಪ್ರತಿಯೊಬ್ಬ ಕನ್ನಡಿಗನ ಮೇಲೆ 45 ಸಾವಿರ ರೂ. ಸಾಲದ ಹೊರೆಯನ್ನು ಸರ್ಕಾರ ಹೊರಿಸಿದೆ.

      * ಕೃಷಿ, ಸೇವೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತವಾಗಿದೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿಯೂ ಅಭಿವೃದ್ಧಿ ಕುಂಠಿತವಾಗಿದೆ.

      * ನೀರಾವರಿ ಕ್ಷೇತ್ರದಲ್ಲಿ ಯೋಜನೆಗಳು ಸ್ಥಗಿತಗೊಂಡಿವೆ. ಇಂತಹ ಸಂದರ್ಭದಲ್ಲಿ ರಾಜ್ಯ ಅಭಿವೃದ್ಧಿಗೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಬೇಕಿದೆ.

      * ರಾಜ್ಯದ ಜನರಿಗೆ ನಂಬಿಕೆ ದ್ರೋಹ, ವಿಶ್ವಾಸ ದ್ರೋಹ ಮಾಡಿದ ಸರ್ಕಾರವನ್ನು ಜನರು ದೂರವಿಡಬೇಕಾಗಿದೆ.

      * ರಾಜ್ಯದ ಪರಿಸ್ಥಿತಿಯನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+