ಪ್ರಕೃತಿ ಚಿಕಿತ್ಸೆ, ವಿಶ್ರಾಂತಿಗಾಗಿ ಜಿಂದಾಲ್‌ಗೆ ಯಡಿಯೂರಪ್ಪ ದಾಖಲು

ಬೆಂಗಳೂರು, ಜುಲೈ 26 : ಮಾಜಿ ಮುಖ್ಯಮಂತ್ರಿ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಜಿಂದಾಲ್‌ಗೆ ದಾಖಲಾಗಿದ್ದಾರೆ. 5 ದಿನಗಳ ಕಾಲ ಪ್ರಕೃತಿ ಚಿಕಿತ್ಸೆ, ವಿಶ್ರಾಂತಿಯನ್ನು ಯಡಿಯೂರಪ್ಪ ಪಡೆಯಲಿದ್ದಾರೆ.

ಜುಲೈ 25ರಂದು 75 ವರ್ಷದ ಯಡಿಯೂರಪ್ಪ ಅವರು ಬೆಂಗಳೂರು ನಗರದ ಹೊರವಲಯದಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದಾರೆ. ಜುಲೈ 29ರ ತನಕ ಅವರು ಪ್ರಕೃತಿ ಚಿಕಿತ್ಸೆ ಪಡೆಯಲಿದ್ದಾರೆ.

BS Yeddyurappa hospitalised for Nature Cure treatment

ರಾಜ್ಯ ಪ್ರವಾಸ, ವಿಧಾನಸಭೆ ಚುನಾವಣೆ ಪ್ರಚಾರದ ಬಳಿಕ ಅವರು ವಿಶ್ರಾಂತಿ ಪಡೆದಿರಲಿಲ್ಲ. ಬಿಜೆಪಿ ಸರ್ಕಾರ ರಚನೆ ನಂತರ ನಡೆದ ಬೆಳವಣಿಗೆಗಳ ಬಳಿಕ ಅವರು ಬಿಡುವಿಲ್ಲದ ಕಾರ್ಯಗಳಲ್ಲಿ ತೊಡಗಿದ್ದರು. ಲೋಕಸಭೆ ಚುನಾವಣಾ ಪ್ರಚಾರ ಕಾರ್ಯ ಆರಂಭಕ್ಕೂ ಮುನ್ನ ವಿಶ್ರಾಂತಿ ಮೊರೆ ಹೋಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ಬಳಿಕ ಧರ್ಮಸ್ಥಳದಲ್ಲಿ 10 ದಿನಗಳ ಕಾಲ ಪ್ರಕೃತಿ ಚಿಕಿತ್ಸೆ ಪಡೆದಿದ್ದರು. ಈಗ ಯಡಿಯೂರಪ್ಪ ಅವರು ಪ್ರಕೃತಿ ಚಿಕಿತ್ಸೆ, ವಿಶ್ರಾಂತಿ ಪಡೆದು ಲೋಕಸಭೆ ಚುನಾವಣೆಯ ಸಿದ್ಧತೆ ಆರಂಭಿಸಲಿದ್ದಾರೆ.

ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರ ರಾಷ್ಟ್ರಮಟ್ಟದಲ್ಲಿ ಪ್ರಸಿದ್ಧಿಯಾಗಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎರಡು ಬಾರಿ ಇಲ್ಲಿಗೆ ಆಗಮಿಸಿ ಕೆಮ್ಮು, ಸಕ್ಕರೆ ಖಾಯಿಲೆಗೆ ಚಿಕಿತ್ಸೆ ಪಡೆದಿದ್ದಾರೆ.

ಯಡಿಯೂರಪ್ಪ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾದ ಹಿನ್ನಲೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾರ್ಯಕರ್ತರು ಯಡಿಯೂರಪ್ಪ ಅವರನ್ನ ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+