ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುತೂಹಲ ಮೂಡಿಸಿದ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಭೇಟಿ

|
Google Oneindia Kannada News

Recommended Video

ಎಸ್ ಎಂ ಕೃಷ್ಣ ರನ್ನ ಭೇಟಿ ಮಾಡಿದ ಬಿ ಎಸ್ ಯಡಿಯೂರಪ್ಪ | Oneindia Kannada

ಬೆಂಗಳೂರು, ಜನವರಿ 03 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಹಿರಿಯ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ. ಪಕ್ಷದ ಅಧ್ಯಕ್ಷ ಅಮಿತ್ ಶಾ ಸೂಚನೆಯಂತೆ ಭೇಟಿ ಮಾಡಲಾಗಿದೆ.

ಬುಧವಾರ ಸಂಜೆ ಯಡಿಯೂರಪ್ಪ ಅವರು ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದರು. ಹೊಸ ವರ್ಷದ ಶುಭಾಶಯವನ್ನು ಕೋರಿದ ಯಡಿಯೂರಪ್ಪ ಅವರು ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು.

ಎಸ್ ಎಂ ಕೃಷ್ಣ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದ್ದೇಕೆ?ಎಸ್ ಎಂ ಕೃಷ್ಣ ಅವರನ್ನು ಡಿಕೆ ಶಿವಕುಮಾರ್ ಭೇಟಿ ಮಾಡಿದ್ದೇಕೆ?

ಅಮಿತ್ ಶಾ ಸೂಚನೆಯಂತೆ ಯಡಿಯೂರಪ್ಪ ಅವರು ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಬೇಕು ಎಂದು ಯಡಿಯೂರಪ್ಪ ಅವರು ಮನವಿ ಮಾಡಿದರು.

BS Yeddyurappa meets SM Krishna

ಯಡಿಯೂರಪ್ಪ ಭೇಟಿ ಬಳಿಕ ಮಾತನಾಡಿದ ಎಸ್.ಎಂ.ಕೃಷ್ಣ ಅವರು, 'ತಾವಾಗಲಿ, ಪುತ್ರಿ ಶಾಂಭವಿಯಾಗಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಪಕ್ಷದ ಪರವಾಗಿ ಪ್ರಚಾರ ಮಾಡುತ್ತೇನೆ' ಎಂದು ಹೇಳಿದರು.

ಎಸ್‌.ಎಂ.ಕೃಷ್ಣ ಮೂಲೆಗುಂಪು? ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಹೆಸರಿಲ್ಲಎಸ್‌.ಎಂ.ಕೃಷ್ಣ ಮೂಲೆಗುಂಪು? ಸ್ಟಾರ್‌ ಪ್ರಚಾರಕರ ಪಟ್ಟಿಯಲ್ಲಿ ಹೆಸರಿಲ್ಲ

ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಎಸ್.ಎಂ.ಕೃಷ್ಣ ಅವರು, 'ರೈತರ ಸಾಲಮನ್ನಾ ಮಾಡುವುದಾದರೆ ವೈಜ್ಞಾನಿಕವಾಗಿ ಮಾಡಬೇಕು. ಸಹಕಾರಿ ಬ್ಯಾಂಕ್‌ಗಳಲ್ಲಿ ಕೇವಲ ಬುಕ್ ಅಡ್ಜೆಸ್ಟಮೆಂಟ್ ಮಾಡುವುದರಿಂದ ರೈತರಿಗೆ ಯಾವುದೇ ಲಾಭವಿಲ್ಲ' ಎಂದರು.

ವೈರಲ್ ಸುದ್ದಿ : ಸಕ್ರಿಯ ರಾಜಕಾರಣದಿಂದ ಎಸ್‌.ಎಂ.ಕೃಷ್ಣ ನಿವೃತ್ತಿ?ವೈರಲ್ ಸುದ್ದಿ : ಸಕ್ರಿಯ ರಾಜಕಾರಣದಿಂದ ಎಸ್‌.ಎಂ.ಕೃಷ್ಣ ನಿವೃತ್ತಿ?

ಕರ್ನಾಟಕ ಬಿಜೆಪಿಯಲ್ಲಿ ಎಸ್.ಎಂ.ಕೃಷ್ಣ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಇತ್ತು. ಈ ಆರೋಪದ ನಡುವೆಯೇ ಯಡಿಯೂರಪ್ಪ ಭೇಟಿ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಜನವರಿ 1ರಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದ್ದರು. ಹಲವು ಹೊತ್ತು ಅವರ ಜೊತೆ ಮಾತುಕತೆ ನಡೆಸಿದ್ದರು.

English summary
Karnataka BJP president B.S.Yeddyurappa met senior party leader S.M.Krishna in Bengaluru. Yeddyurappa requested S.M.Krishna to campaign for Lok Sabha Election 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X