ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ : ಶಿಕಾರಿಪುರ ಜನಸಂಘದಿಂದ ಬಿಜೆಪಿ ಗದ್ದುಗೆ ತನಕ

By Mahesh
|
Google Oneindia Kannada News

ಬೆಂಗಳೂರು, ಏಪ್ರಿಲ್ 14: ರೈತ ಪರ ಹೋರಾಟದಿಂದ ರಾಜಕೀಯ ಜೀವನಕ್ಕೆ ಕಾಲಿರಿಸಿದ ಬೂಕನಕೆರೆಯ ಯಡಿಯೂರಪ್ಪ ಅವರ ರಾಜಕೀಯ ಜೀವನ ಹತ್ತು ಹಲವು ಹೋರಾಟ, ವಿವಾದಗಳನ್ನು ಕಂಡಿದೆ.

ಬೂಕನಕೆರೆ ಎಂಬ ಕುಗ್ರಾಮದ ಬಡ ರೈತ ಕುಟುಂಬದ ಯಡಿಯೂರಪ್ಪ ರಾತ್ರಿ ಕಳೆದು ಬೆಳಗಾಗುವುದರಲ್ಲಿ ನಾಯಕರಾದವರಲ್ಲ. ಯಾವುದೇ ಗಾಡ್ ಫಾದರ್ ಇಲ್ಲದೇ ಸ್ವಂತ ಪರಿಶ್ರಮ ಮೇಲೆ ಹಂತ ಹಂತವಾಗಿ ಬೆಳೆದವರು. ಹಳ್ಳಿಯಿಂದಲೇ ಹೋರಾಟ ಆರಂಭಿಸಿ ರಾಜಕೀಯ ನೆಲೆಗಟ್ಟನ್ನು ಕಂಡುಕೊಂಡವರು. [ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿಎಸ್‌ವೈ]

ಪಕ್ಷ ಸಂಘಟನೆಯಲ್ಲಿ ನಿಪುಣರಾದ ಯಡಿಯೂರಪ್ಪಅವರು ಭಾಷಣಕ್ಕೆ ನಿಂತರೆ ಗುಡುಗು ಸಿಡಿಲುಗಳ ಮೇಳೈಕೆ. ಇಂಥ ಯಡಿಯೂರಪ್ಪ ಧೃತಿಗೆಡದೆ 80ರ ದಶಕದಲ್ಲಿ ಎರಡು ಶಾಸಕರಿದ್ದ ಪಕ್ಷವನ್ನು ಹಂತಹಂತವಾಗಿ ಬೆಳೆಸುತ್ತಾ ಶಾಸಕರ ಸಂಖ್ಯೆಯನ್ನು ನೂರರ ಗಡಿ ದಾಟುವಂತೆ ಮಾಡಿದ್ದು ಕಡಿಮೆ ಸಾಧನೆ ಏನಲ್ಲ.['ಸಿಎಂ ಆಗುವುದಕ್ಕಿಂತ 150 ಸ್ಥಾನ ಗೆಲ್ಲುವುದು ನನ್ನ ಗುರಿ': ಬಿಎಸ್ವೈ]

Yeddayurappa

ರೈತರ ಸಾಲ ಮನ್ನಾ, ಸಾರಾಯಿ ನಿಷೇಧ. ಲಾಟರಿ ನಿಷೇಧ, ರೈತರಿಗೆ ಶೇ.4 ಬಡ್ಡಿದರದಲ್ಲಿ ಸಾಲ, ಬಿಪಿಎಲ್ ಕುಟುಂಬಗಳ ಹೆಣ್ಣುಮಕ್ಕಳ ಸಬಲೀಕರಣಕ್ಕೆ ಭಾಗ್ಯಲಕ್ಷ್ಮಿ ಯೋಜನೆ, ಉಚಿತ ಬೈಸಿಕಲ್ ವಿತರಣೆ ಯೋಜನೆ, ನಿರುದ್ಯೋಗ ನಿವಾರಣೆಗೆ ಸುವರ್ಣ ಕಾಯಕ ಉದ್ಯೋಗ ತರಬೇತಿಯೋಜನೆ, ಹಿರಿಯ ನಾಗರಿಕರ ಸಾಮಾಜಿಕ ಭದ್ರೆತೆಗೆ ಸಂಧ್ಯಾ ಸುರಕ್ಷಾ ಯೋಜನೆ, ಮೊದಲಾದ ಕ್ರಾಂತಿಕಾರಿ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿ ಅನುಷ್ಠಾನಗೊಳಿಸಿದ ಹೆಗ್ಗಳಿಕೆ.[ಯಡಿಯೂರಪ್ಪಗೆ ರಾಜ್ಯಾಧ್ಯಕ್ಷ ಪಟ್ಟ : ಯಾರು, ಏನು ಹೇಳಿದರು?]


1975 : ಶಿಕಾರಿಪುರ ಪುರಸಭೆ ಸದಸ್ಯರಾಗಿ ಆಯ್ಕೆ, 1977ರಲ್ಲಿ ಅಧ್ಯಕ್ಷ.
1980 : ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ.
1983 : ಮಾಜಿ ಸಚಿವ ವೆಂಕಟಪ್ಪ ಅವರನ್ನು ಸೋಲಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶ
1985 : 88 ವರೆಗೆ ಬಿಜೆಪಿ ಜಿಲ್ಲಾಧ್ಯಕ್ಷ, 1988 ರಲ್ಲಿ ರಾಜ್ಯಾಧ್ಯಕ್ಷ,
1992 ರಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನ ನಿರ್ವಹಣೆ
1994 : ವಿಧಾನಸಭೆ ಪ್ರತಿಪಕ್ಷದ ನಾಯಕ.

1999 : ಮತ್ತೆ ರಾಜ್ಯಾಧ್ಯಕ್ಷ, 2000 ರಲ್ಲಿ ಮೇಲ್ಮನೆ ಸದಸ್ಯ [ಯಡಿಯೂರಪ್ಪ ಮುಂದಿರುವ 6 ಪ್ರಮುಖ ಸವಾಲುಗಳು]
2004 : ಐದನೇ ಬಾರಿಗೆ ವಿಧಾನಸಭೆ ಪ್ರವೇಶ, ಇನ್ನೊಮ್ಮೆ ಪ್ರತಿಪಕ್ಷದ ನಾಯಕ
2006 : ಸಮ್ಮಿಶ್ರ ಸರ್ಕಾರ ರಚನೆ, ಉಪಮುಖ್ಯಮಂತ್ರಿ, ಹಣಕಾಸು ಮತ್ತು ಅಬಕಾರಿ ಖಾತೆಗಳ ನಿರ್ವಹಣೆ.

Yeddyurappa

2007 : ನವೆಂಬರ್ 12 ರಿಂದ 17ರ ವರೆಗೆ 7 ದಿನ ಮಾತ್ರ ಮುಖ್ಯಮಂತ್ರಿಯಾಗಿ ಪದವಿ ಅಲಂಕರಿಸಿದ್ದರು.
2008 : ಮೇ 30ರ ಶುಕ್ರವಾರ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ನಂತರ ಸದಾನಂದ ಗೌಡರಿಗೆ ಸಿಎಂ ಪಟ್ಟ ಒಲಿದಿದ್ದು, ಬಂಡಾಯವೆದ್ದು ಜಗದೀಶ್ ಶೆಟ್ಟರ್ ರನ್ನು ಕುರ್ಚಿಯಲ್ಲಿ ಕೂರಿಸಿದ್ದು ಸಾಧನೆಗಿಂತ ವೈಫಲ್ಯ ಎನ್ನಬಹುದು.

* ಬಿಜೆಪಿಯಿಂದ ಹೊರ ಬಿದ್ದ ಮೇಲೆ ಕರ್ನಾಟಕ ಜನತಾ ಪಕ್ಷ ಸ್ಥಾಪನೆ, ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದರು.
* ಕೆಜೆಪಿ ತಕ್ಕಮಟ್ಟಿನ ಸಾಧನೆ ಮಾಡಿದರೂ ಆಂತರಿಕ ಒತ್ತಡದಿಂದ ರಾಷ್ಟ್ರ ರಾಜಕೀಯದ ಕನಸಿನಿಂದ ತಾವೇ ಬೆಳೆಸಿದ ಪಕ್ಷವನ್ನು ತೊರೆದರು.

ಕರ್ನಾಟಕದ ಬಿಜೆಪಿ ಅಧ್ಯಕ್ಷರಾಗಿ ಬಿಎಸ್ ಯಡಿಯೂರಪ್ಪ


2014: ಜನವರಿಯಲ್ಲಿ ಬಿಜೆಪಿಗೆ ಮರು ಸೇರ್ಪಡೆ, ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಸ್ಪರ್ಧೆ, ಗೆಲುವು.
* ಆಗಸ್ಟ್ ತಿಂಗಳಿನಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ.

2016: ಬಿಜೆಪಿ ಸಂಸದರಾಗಿದ್ದ ಯಡಿಯೂರಪ್ಪ ಅವರು ಏಪ್ರಿಲ್ 14, 2016ರಂದು ಬಿಜೆಪಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ.

English summary
During 1972, at the age of 29 years BS Yeddyurappa was elected as President, Shikaripura Taluk Jana Sangha and entered public life. Now at 73 he takes charge as Karnataka BJP President.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X