ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈಶ್ವರಪ್ಪ ಬಗ್ಗೆ ತಮ್ಮ ಮಹಾದಾಸೆಯನ್ನು ವ್ಯಕ್ತ ಪಡಿಸಿದ ಬಿಎಸ್‌ವೈ

|
Google Oneindia Kannada News

ಶಿವಮೊಗ್ಗ, ಜನವರಿ 9: ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಆಶಯ ಎಂದು ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆದ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಕೇಂದ್ರ ನಾಯಕರು ಮನವಿ ಮಾಡಲಿದ್ದಾರೆ. ಆದರೆ ನಾನು ಈಶ್ವರಪ್ಪ ಅವರನ್ನು ರಾಜ್ಯ ಸಚಿವ ಸಂಪುಟದಲ್ಲಿ ನೋಡಬೇಕು ಎಂದರು.

ಬಿಜೆಪಿ-ಕೆಜೆಪಿ ಒಡೆಯದಿದ್ದರೆ ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಗ್ತಾ ಇರಲಿಲ್ಲ: ಈಶ್ವರಪ್ಪಬಿಜೆಪಿ-ಕೆಜೆಪಿ ಒಡೆಯದಿದ್ದರೆ ಈ ಜನ್ಮದಲ್ಲಿ ಸಿದ್ದರಾಮಯ್ಯ ಸಿಎಂ ಆಗ್ತಾ ಇರಲಿಲ್ಲ: ಈಶ್ವರಪ್ಪ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಗಡುವು ನೀಡಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದನ್ನು ಸ್ವಾಗತಿಸುವ ಬದಲು ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಹಿರಿಯ ನಾಯಕರಾದ ಖರ್ಗೆಯವರು ಈ ರೀತಿಯ ಹೇಳಿಕೆ ನೀಡುವುದು ಸಲ್ಲದು. ರಾಜ್ಯದಲ್ಲಿ ಹಲವು ವರ್ಷ ಆಡಳಿತ ನಡೆಸಿದರೂ ಈ ರೀತಿ ಮಾಡಿಲ್ಲ. ನಾವೇ ಮಾಡಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

BS Yeddyurappa said that ks Eshwarappa should get a seat in the cabinet

ಈಗ ರಾಜ್ಯದಲ್ಲಿ ಬಾರಿ ಸುದ್ದಿಯಲ್ಲಿರುವ ಸ್ಯಾಂಟ್ರೋ ರವಿಗೆ ಬಿಜೆಪಿ ನಾಯಕರೊಂದಿಗಿನ ಸಂಪರ್ಕದ ಕುರಿತು ಮಾತನಾಡಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಸೂಚಿಸಿದ್ದಾರೆ. ತನಿಖೆಯ ನಂತರ ಸತ್ಯ ಎಲ್ಲರಿಗೂ ಗೊತ್ತಾಗಲಿದ್ದು, ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಮೋದಿ ಚಾಮುಂಡಿ ಬೆಟ್ಟ ಭೇಟಿ ಭವಿಷ್ಯ: ಬಿಜೆಪಿ ಹಿನ್ನಡೆಗೆ ಕಾರಣವಾಗಬಹುದಾದ ಅಂಶಗಳು ಯಾವುವು..?ಮೋದಿ ಚಾಮುಂಡಿ ಬೆಟ್ಟ ಭೇಟಿ ಭವಿಷ್ಯ: ಬಿಜೆಪಿ ಹಿನ್ನಡೆಗೆ ಕಾರಣವಾಗಬಹುದಾದ ಅಂಶಗಳು ಯಾವುವು..?

ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಲ್ಕೈದು ತಿಂಗಳು ಬಾಕಿ ಇರುವಾಗಲೇ ಕರ್ನಾಟಕದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯುವುದಕ್ಕೆ ರಾಜಕೀಯ ಪಕ್ಷಗಳು ಶತಾಯುಗತಾಯ ಯತ್ನ ನಡೆಸಿವೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‌ ಪಕ್ಷಗಳು ಈಗಿನಿಂದಲೇ ಚುನಾವಣೆಗೆ ಸಿದ್ದತೆ ನಡೆಸಿವೆ. ಆದರೆ, ಬೆಳಗಾವಿಯಲ್ಲಿ ಚಳಿಗಾಲದ ವಿಧಾನಸಭೆ ಕಲಾಪ ನಡೆಯುತ್ತಿರುವಾಗಲೇ ಶಿವಮೊಗ್ಗ ಶಾಸಕ ಕೆ.ಎಸ್‌.ಈಶ್ವರಪ್ಪ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು.

ಈಗ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರು ಕೆಎಸ್‌ ಈಶ್ವರಪ್ಪನವರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಹೇಳಿರುವುದು ಮತ್ತಷ್ಟು ಚರ್ಚೆ ಹುಟ್ಟುಹಾಕಿದೆ. ಗುತ್ತಿಗೆದಾರ ಸಂತೋಷ್‌ ಎಂಬಾತ ಉಡುಪಿಯ ಹೋಟೆಲ್‌ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ ತಲೆದಂಡವಾಗಿತ್ತು. ಈ ಅವರಿಗೆ ಮತ್ತೆ ಸಚಿವ ಸ್ಥಾನ ಕೊಡಬೇಕೆಂಬ ಮಾತುಗಳು ಕೇಳಿಬಂದಿವೆ.

English summary
BS Yeddyurappa, former CM and member of the BJP Parliamentary Board, said that it is my hope that Shivamogga MLA KS Eshwarappa gets a ministerial post this time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X