ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿಎಸ್‌ವೈ

|
Google Oneindia Kannada News

ಬೆಂಗಳೂರು, ಏಪ್ರಿಲ್ 14 : ಶಿವಮೊಗ್ಗ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಸಂಜೆ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಗುರುವಾರ ಬೆಳಗ್ಗೆ 11.30ರ ಸುಮಾರಿಗೆ ನಿರ್ಗಮಿತ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಅವರು ಪಕ್ಷದ ಧ್ವಜ ನೀಡಿ, ಯಡಿಯೂರಪ್ಪ ಅವರಿಗೆ ಅಧಿಕಾರವನ್ನು ಹಸ್ತಾಂತರ ಮಾಡಿದರು. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ 4ನೇ ಬಾರಿಗೆ ಯಡಿಯೂರಪ್ಪ ಅವರು ಅಧಿಕಾರ ವಹಿಸಿಕೊಂಡರು. [ಯಡಿಯೂರಪ್ಪ ಮುಂದಿರುವ 6 ಪ್ರಮುಖ ಸವಾಲುಗಳು]

yeddyurappa

ಕೇಂದ್ರ ಸಚಿವರಾದ ಅನಂತ್ ಕುಮಾರ್, ಜಿ.ಎಂ.ಸಿದ್ದೇಶ್ವರ, ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಆರ್.ಅಶೋಕ್, ಎಂ.ಪಿ.ರೇಣುಕಾಚಾರ್ಯ ಮುಂತಾದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. [ಅಂಬೇಡ್ಕರ್ ಫೋಟೊ ಎಸೆದ ಬಿಎಸ್ ವೈ ಈಗ ರಾಜ್ಯಾಧ್ಯಕ್ಷ]

ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಕ್ಷೇತ್ರದ ಹಾಲಿ ಸಂಸದ ಯಡಿಯೂರಪ್ಪ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದು ಬಂದಿರುವುದು ಇದು 4 ನೇ ಬಾರಿ. ಈ ಹಿಂದೆ 1988, 1999 ಮತ್ತು 2007ರಲ್ಲಿ ಯಡಿಯೂರಪ್ಪ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸಿದ್ದರು.

ಸಂಜೆ ಸಮಾವೇಶ : ಇಂದು ಸಂಜೆ 4.30ಕ್ಕೆ ಅರಮನೆ ಮೈದಾನ (ಗಾಯತ್ರಿ ವಿಹಾರ)ದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಯಡಿಯೂರಪ್ಪ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

English summary
Former Chief Minister of Karnataka B.S. Yeddyurappa took charge as Karnataka BJP president on April 14, 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X