BSY ಬಿಜೆಪಿಯ ಅಧಿಕೃತ ಸಿಎಂ ಅಭ್ಯರ್ಥಿ: ಅಮಿತ್ ಶಾ
ನವದೆಹಲಿ, ಮೇ 26: 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಬಿಎಸ್ ವೈ ಮುಖ್ಯಮಂತ್ರಿ ಅಭ್ಯರ್ಥಿಯಾಗಿರಲಿದ್ದಾರೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಧಿಕೃತ ಘೋಷಿಸಿದ್ದಾರೆ.
ನವದಹೆಲಿಯಲ್ಲಿ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಈ ವಿಚಾರ ತಿಳಿಸಿದರು.

ಕರ್ನಾಟಕದಲ್ಲಿ ಮುಂದಿನ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಬಗ್ಗೆ ಪ್ರತಿನಿಧಿಗಳು ಪ್ರಶ್ನೆ ಕೇಳಿದಾಗ, ''ಕರ್ನಾಟಕದ ಮುಂದಿನ ಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲೇ ಎದುರಿಸುತ್ತೇವೆ'' ಎಂದು ಅಮಿತ್ ಶಾ ತಿಳಿಸಿದರು.
ಈ ಬಗ್ಗೆ ಮತ್ತಷ್ಟು ಕೆದಕಿದ ಮಾಧ್ಯಮ ಪ್ರತಿನಿಧಿಗಳು, ''ಕರ್ನಾಟಕದ ವಿಧಾನಸಭೆ ಚುನಾವಣೆಗೆ ಬಿಎಸ್ ಯಡಿಯೂರಪ್ಪ ಅವರನ್ನೇ ಬಿಜೆಪಿಯು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವುದೇ?'' ಎಂದು ಕೇಳಿದರು.
ಈ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ''ಹೌದು. ಬಿಎಸ್ ವೈ ಅವರೇ ಬಿಜೆಪಿಯ ಮುಂದಿನ ಮುಖ್ಯಮಂತ್ರಿಯಾಗಿರಲಿದ್ದಾರೆ'' ಎಂದು ತಿಳಿಸಿದ್ದಾರೆ.












Click it and Unblock the Notifications