ವಿಶ್ವಾಸ ಗೆದ್ದ ಸಿಎಂ ಯಡಿಯೂರಪ್ಪ: ಇನ್ನಿತರೆ ಬೆಳವಣಿಗೆಗಳು
ಬೆಂಗಳೂರು, ಜುಲೈ 29: ಧ್ವನಿ ಮತದ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ಗೆದ್ದಿದ್ದಾರೆ. ಹಾಗೆಯೇ ಮೂರು ತಿಂಗಳಿಗೆ ಲೇಖಾನುದಾನ ಮಂಡಿಸಿದ್ದಾರೆ.
ಕರ್ನಾಟಕದ 26ನೇ ಮುಖ್ಯಮಂತ್ರಿಯಾಗಿ ಶುಕ್ರವಾರ ಪದಗ್ರಹಣ ಮಾಡಿರುವ ಬಿ. ಎಸ್. ಯಡಿಯೂರಪ್ಪ ಇವತ್ತು ವಿಶ್ವಾಸಮತವನ್ನು ಸಾಬೀತುಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸೋಮವಾರ ವಿಧಾನಸೌಧದ ರಾಜ್ಯ ರಾಜಕಾರಣದ ಸುದ್ದಿಕೇಂದ್ರವಾಗಿದೆ.
ಧನ ವಿನಿಯೋಗ ವಿಧೇಯಕ, ಯಡಿಯೂರಪ್ಪ ವಿಶ್ವಾಸಮತ ಹಾಗೂ ಪೂರಕ ಬಜೆಟ್‌ಗೆ ಇಂದು ವಿಧಾನಸಭೆಯಲ್ಲಿ ಅಂಗೀಕಾರ ದೊರೆಯಿತು.

"ಧನವಿನಿಯೋಗ ವಿಧೇಯಕಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬೆಂಬಲಿಸುತ್ತವೆ ಅಂದುಕೊಂಡಿದ್ದೇನೆ. ದ್ವೇಷದ ರಾಜಕಾರಣ ಮಾಡಿಲ್ಲ, ಎಲ್ಲ ಪಕ್ಷಗಳ ಸಹಕಾರ ಪಡೆದು, ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ದಿಯ ನಿರ್ಧಾರ ಮಾಡಿದ್ದೇನೆ," ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಶಾಸಕಾಂಗ ಸಭೆಯ ಬಗ್ಗೆ ವಿವರ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, 105 ಪಕ್ಷದ ಶಾಸಕರಲ್ಲದೇ ಒಬ್ಬರು ಪಕ್ಷೇತರ ಅಭ್ಯರ್ಥಿಗಳು ಬೆಂಬಲಿಸುವ ಸಾಧ್ಯತೆ ಇದೆ.
ವಿಶ್ವಾಸಮತದ ಹಿನ್ನೆಲೆಯಲ್ಲಿ ಬಿಜೆಪಿ ವಿಪ್ ಜಾರಿ ಮಾಡಲಾಗಿದ್ದು, ಎಲ್ಲ ಶಾಸಕರು ಹಾಜರಾಗುವಂತೆ ನೋಡಿಕೊಳ್ಳುವಂತೆ 12 ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ಧನ ವಿನಿಯೋಗ ವಿಧೇಯಕ ಅಂಗೀಕಾರಕ್ಕೆ ಸಹಕರಿಸುವಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರನ್ನು ಕೋರಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಶಾಸಕರು ಅನರ್ಹಗೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸುವ ಹಾದಿ ಸುಲಭವಾಗಿದೆ.
ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಎಚ್‌ಡಿ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಮಂಡಿಸಿದ ವಿಶ್ವಾಸಮತ ಯಾಚನೆ ಪರಸ್ತಾವನೆ ಮೇಲೆ ನಡೆದ ದೀರ್ಘ ಚರ್ಚೆಯ ಬಳಿಕ ಮಂಗಳವಾರ ನಡೆದ ಕಲಾಪದಲ್ಲಿ ವಿಶ್ವಾಸಮತ ಪಡೆಯಲು ವಿಫಲರಾಗಿದ್ದರು.
ಪ್ರಸಕ್ತ 15ನೇ ವಿಧಾನಸಭೆಯ ಅವಧಿ ಮುಗಿಯುವವರೆಗೆ ಅನ್ವಯವಾಗುವಂತೆ ಎಲ್ಲಾ 14 ಶಾಸಕರನ್ನು ಅನರ್ಹಗೊಳಿಸ ಸ್ಪೀಕರ್ ಆದೇಶ ಹೊರಡಿಸಿದ್ದಾರೆ.
ಈ ವಿಚಾರ ಸೋಮವಾರ ನ್ಯಾಯಾಲಯದ ಮೆಟ್ಟಿಲೇರಲಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ, ನ್ಯಾಯಾಲಯಗಳು ಹಾಗೂ ರಾಜಕೀಯ ಪಡಸಾಲೆಯಲ್ಲಿ ನಡೆಯುವ ದಿನ ಬೆಳವಣಿಗೆಗಳ ಕ್ಷಣಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.











Click it and Unblock the Notifications