ಬಿಜೆಪಿ ಜೊತೆ ಜೆಡಿಎಸ್ ವಿಲೀನ ಕುರಿತು ಯಡಿಯೂರಪ್ಪ, ಕುಮಾರಸ್ವಾಮಿ ಮಹತ್ವದ ಹೇಳಿಕೆ!

ಬೆಂಗಳೂರು, ಡಿ. 20: ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆದಿರುವುದಾಗಲೇ ಮತ್ತೊಂದು ಮಹತ್ವದ ರಾಜಕೀಯ ಬೆಳವಣಿಗೆ ರಾಜ್ಯದಲ್ಲಿ ನಡೆದಿದೆ. ಇತ್ತೀಚೆಗೆ ಬಿಜೆಪಿ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮೃದು ಧೋರಣೆ ಹೊಂದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ ಜೊತೆಗೆ ಪ್ರಾದೇಶಿಕ ಪಕ್ಷ ಜೆಡಿಎಸ್ ವಿಲೀನ ವಾಗುತ್ತದೆ ಎಂಬ ಚರ್ಚೆಗಳೂ ನಡೆದಿದ್ದವು.

ಇದಕ್ಕೆ ಕಾರಣವಾಗಿದ್ದು ಇತ್ತೀಚೆಗೆ ಬಿಜೆಪಿ ತೀರ್ಮಾನಗಳನ್ನು ಜೆಡಿಎಸ್ ಬೆಂಬಲಿಸುತ್ತಿರುವುದು. ವಿಧಾನ ಪರಿಷತ್‌ನಲ್ಲಿ ಭೂ ಸುಧಾರಣೆ ತಿದ್ದುಪಡಿ ವಿಧೇಯಕಕ್ಕೆ ಜೆಡಿಎಸ್ ಬೆಂಬಲ ಕೊಟ್ಟಿತ್ತು. ನಂತರ ವಿಧಾನ ಪರಿಷತ್ ಸಭಾಪತಿಗಳ ವಿರುದ್ಧ ಬಿಜೆಪಿ ಕೊಟ್ಟಿದ್ದ ಅವಿಶ್ವಾಸ ಗೊತ್ತುವಳಿಗೂ ಜೆಡಿಎಸ್ ಬೆಂಬಲ ಕೊಟ್ಟಿತ್ತು. ಜೊತೆಗೆ ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಶುಭಾಶಯ ಕೋರಿದ್ದು, ಈ ಎಲ್ಲ ಬೆಳವಣಿಗೆಗಳು ಸಹಜವಾಗಿಯೆ ಕುತೂಹಲ ಮೂಡಿಸಿದ್ದವು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ವಿಲಿನದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ.

ನಮಗೆ ಬೆಂಬಲ ಕೊಟ್ಟಿದ್ದಾರೆ

ನಮಗೆ ಬೆಂಬಲ ಕೊಟ್ಟಿದ್ದಾರೆ

ಜಾತ್ಯಾತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಜೆ.ಡಿ.ಎಸ್. ಪಕ್ಷದ ಯಾವುದೇ ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆ.ಡಿ.ಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲಗಳ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟ ಪಡಿಸಿದ್ದಾರೆ.

ಸತ್ಯಕ್ಕೆ ದೂರವಾದ ಸುದ್ದಿ

ಸತ್ಯಕ್ಕೆ ದೂರವಾದ ಸುದ್ದಿ

ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಃ ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ. ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರೂ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಜೆಡಿಎಸ್ ಜನರ ಗಟ್ಟಿ ಧ್ವನಿ

ಜೆಡಿಎಸ್ ಜನರ ಗಟ್ಟಿ ಧ್ವನಿ

ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ ಎಂದು ಮಾಜಿ ಸಿಎಂ ಎಚ್‌ಡಿಕೆ ಅವರು ಸರಣಿ ಟ್ವೀಟ್‌ನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ

ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ

ರೈತರ ಸಾಲಮನ್ನಾ, ಬಡವರ ಬಂಧು ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ಮಾಜಿ ಪ್ರಧಾನಿ ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್ ಪಕ್ಷದ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟವಾಗಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

Recommended Video

    Team India ಬ್ಯಾಟಿಂಗ್ ವೈಫಲ್ಯಕ್ಕೆ ಕಾರಣ ತಿಳಿಸಿಕೊಟ್ಟ Mike Hussey | Oneindia Kannada
    ವಿಷಯಾಧಾರಿತ ಬೆಂಬಲ

    ವಿಷಯಾಧಾರಿತ ಬೆಂಬಲ

    ಜೆಡಿಎಸ್ ಬಿಜೆಪಿಯ 'ಬಿ ಟೀಂ' ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ 'ಬಿ ಟೀಂ' ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

    ವಿಷಯಾಧಾರಿತ ಬೆಂಬಲ ಕೊಡುತ್ತೇವೆ ಎಂದು ಎಚ್‌ಡಿಕೆ ಹೇಳಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+