ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಪಾಲ ಕೈಗೆ ಆಡಿಯೋ ಬಾಂಬ್: ಸರ್ಕಾರ ವಜಾಕ್ಕೆ ಕೆಪಿಸಿಸಿ ಆಗ್ರಹ

|
Google Oneindia Kannada News

ಬೆಂಗಳೂರು, ನವೆಂಬರ್ 02: 'ಕಾನೂನಾತ್ಮಕವಾಗಿ ಏನು ಮಾಡಬಾರದೋ ಅದೆಲ್ಲವನ್ನು ಮಾಡಿದ್ದಾರೆ, ಪಕ್ಷಾಂತರ ನಿಷೇಧ ಕಾಯ್ದೆಯಲ್ಲಿ ಉಲ್ಲಂಘಿಸಿದ್ದಾರೆ. ಸಂವಿಧಾನದ ಆಶಯವನ್ನು ಬುಡಮೇಲು ಮಾಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹಿಸುತ್ತಿದೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

"ಬಿಎಸ್ ವೈ ಭಾವನಾತ್ಮಕವಾಗಿ ಮಾತಾಡಿದ್ದಕ್ಕೆ ಅರ್ಥ ಕಲ್ಪಿಸುವುದು ಬೇಡ"

"ಆಪರೇಷನ್ ಕಮಲ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ರಾಷ್ಟ್ರಪತಿಯವರನ್ನೂ ಭೇಟಿ ಮಾಡಿ, ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ಅನರ್ಹ ಶಾಸಕರಿಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ರಕ್ಷಣೆ ನೀಡಿದ್ದರು", ಆಪರೇಷನ್ ಕಮಲ ನಡೆದಿದ್ದರ ಬಗ್ಗೆ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯ ಆಂತರಿಕ ಸಭೆಯಲ್ಲಿ ಹೇಳಿದ್ದಾರೆ ಎನ್ನಲಾದ ಆಡಿಯೋ/ವಿಡಿಯೋ ತುಣುಕು ಈಗ ವೈರಲ್ ಆಗಿದ್ದು, ಕಾಂಗ್ರೆಸ್ ಕೈಗೆ ಪ್ರಮುಖ ಅಸ್ತ್ರವಾಗಿದೆ.

BS Yediyurappa Audio leaked: KPCC seek Governor to take action against BJP government

ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಅನರ್ಹ ಶಾಸಕರ ವಿರುದ್ಧ ಕೆಲ ಬಿಜೆಪಿ ಮುಖಂಡರು ಹೇಳಿಕೆ ನೀಡುತ್ತಿರುವುದನ್ನು ವಿರೋಧಿಸಿ ಅವರನ್ನು ತರಾಟೆಗೆ ತೆಗೆದುಕೊಳ್ಳಲು ಹೋದ ಯಡಿಯೂರಪ್ಪ ಅವರು ಮಾತಿನ ಭರದಲ್ಲಿ ಅನರ್ಹ ಶಾಸಕರು ಇಲ್ಲದಿದ್ದರೆ ಸರ್ಕಾರ ಇರುತ್ತಿತ್ತಾ? 17 ಶಾಸಕರ ರಾಜೀನಾಮೆ ತೀರ್ಮಾನ ನಾನು ತೆಗೆದುಕೊಂಡಿದ್ದಲ್ಲ, ರಾಷ್ಟ್ರೀಯ ಅಧ್ಯಕ್ಷರಿಗೆ ಗೊತ್ತಿದ್ದೇ ಎರಡೂವರೆ ತಿಂಗಳು ಮುಂಬೈನಲ್ಲಿ ಇಟ್ಟಿದ್ದು ಎಂಬುದು ನಿಮಗೆಲ್ಲ ಗೊತ್ತಿದೆಯಲ್ಲವೇ ಎಂದು ಯಡಿಯೂರಪ್ಪ ಪ್ರಶ್ನಿಸಿದ್ದರು.

'ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ನಾನು ರಾಜೀನಾಮೆ ನೀಡಿಲ್ಲ''ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರಲು ನಾನು ರಾಜೀನಾಮೆ ನೀಡಿಲ್ಲ'

ಕಾಂಗ್ರೆಸ್- ಜೆಡಿಎಸ್ ಶಾಸಕರ ಸರಣಿ ರಾಜೀನಾಮೆ ಬಳಿಕ ಅಲ್ಪಸಂಖ್ಯೆಗೆ ಕುಸಿದ ಕೈ ತೆನೆ ಸರ್ಕಾರ ಪತನವಾಗಲು ಆಪರೇಷನ್ ಕಮಲ ಅಸ್ತ್ರವನ್ನು ಬಿಜೆಪಿ ಬಳಸಿದೆ. ರಾಜೀನಾಮೆ ನೀಡಿದ ಶಾಸಕರನ್ನು ಮುಂಬೈನ ಹೋಟೆಲ್ ನಲ್ಲಿ ಇರಿಸಿಕೊಂಡಿದ್ದರು. ಇದೆಲ್ಲವೂ ಹಾಲಿ ಗೃಹ ಸಚಿವ ಅಮಿತ್ ಶಾ ಅವರ ಅಣತಿಯಂತೆ ನಡೆದಿದೆ, ಯಡಿಯೂರಪ್ಪ ಅವರ ಹೇಳಿಕೆಯಿಂದ ಕೈ ತೆನೆ ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ಹಿಡಿದ ವಾಮಮಾರ್ಗ ಈಗ ಬಹಿರಂಗವಾಗಿದೆ ಎಂದು ಕಾಂಗ್ರೆಸ್ ದೂರಿದೆ.

English summary
BS Yediyurappa Audio leaked, KPCC president Dinesh Gundurao, former CM Siddaramaiah and others today visited Raj Bhavan and requested a Governor Vajubhai Vala to take action against BJP government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X