ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka Cabinet Expansion : ಯಡಿಯೂರಪ್ಪ ಸಂಪುಟ ಸೇರಿದ 17 ಶಾಸಕರು

|
Google Oneindia Kannada News

Recommended Video

      ಕರ್ನಾಟಕದ ನೂತನ ಮಂತ್ರಿಗಳು ಇವರೆ..? | Cabinet Expansion

      ಬೆಂಗಳೂರು, ಆಗಸ್ಟ್ 20 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಯಾಗಿದೆ. 17 ಶಾಸಕರು ಸಂಪುಟ ದರ್ಜೆ ಸಚಿವರಾಗಿ ಮಂಗಳವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

      ಮಂಗಳವಾರ ಬೆಳಗ್ಗೆ 10.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಿತು. ಜುಲೈ 26ರಂದು ಯಡಿಯೂರಪ್ಪ ಅಧಿಕಾರ ವಹಿಸಿಕೊಂಡಿದ್ದರು. ಈಗ ಸಂಪುಟ ವಿಸ್ತರಣೆ ಮಾಡಿದ್ದಾರೆ.

      ಸಂಪುಟ ವಿಸ್ತರಣೆ : ಯಡಿಯೂರಪ್ಪಗೆ ಅಮಿತ್ ಶಾ ಷರತ್ತು!ಸಂಪುಟ ವಿಸ್ತರಣೆ : ಯಡಿಯೂರಪ್ಪಗೆ ಅಮಿತ್ ಶಾ ಷರತ್ತು!

      BS Yediyurappa Cabinet Expansion

      ಯಡಿಯೂರಪ್ಪ ಸಂಪುಟ ಸೇರುವ ಶಾಸಕರ ಪಟ್ಟಿಯನ್ನು ಹೈಕಮಾಂಡ್ ಸೋಮವಾರ ತಡರಾತ್ರಿ ಅಂತಿಮಗೊಳಿಸಿದೆ. ಒಬ್ಬ ಮಹಿಳೆ, ಬಬ್ಬ ಪಕ್ಷೇತರ ಶಾಸಕ, ಒಬ್ಬರು ವಿಧಾನ ಪರಿಷತ್ ಸದಸ್ಯರು ಸೇರಿ 17 ಶಾಸಕರು ಸಚಿವರಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡರೂ ಸಹ ಲಕ್ಷ್ಮಣ ಸವದಿ ಸಚಿವರಾಗಿದ್ದಾರೆ.

      ಯಡಿಯೂರಪ್ಪ ಆಂಡ್ ಟೀಂ: ಸಂಪುಟ ವಿಸ್ತರಣೆ ಸಂತಸದ ಚಿತ್ರಗಳು

      ಎಂ. ಪಿ. ರೇಣುಕಾಚಾರ್ಯ, ಉಮೇಶ್ ಕತ್ತಿ, ಮುರುಗೇಶ್ ನಿರಾಣಿ, ಬಾಲಚಂದ್ರ ಜಾರಕಿಹೊಳಿ, ಅರವಿಂದ ಲಿಂಬಾವಳಿ, ರಾಜುಗೌಡ ಸೇರಿದಂತೆ ಹಲವು ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೈತಪ್ಪಿದೆ. ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

      ಯಡಿಯೂರಪ್ಪ ಸಂಪುಟ : ಹೈಕಮಾಂಡ್‌ ಬಳಿ 3 ಪಟ್ಟಿಯಡಿಯೂರಪ್ಪ ಸಂಪುಟ : ಹೈಕಮಾಂಡ್‌ ಬಳಿ 3 ಪಟ್ಟಿ

      Newest FirstOldest First
      3:41 PM, 20 Aug

      ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಯಾರಿಗೆ ಯಾವ ಖಾತೆ

      ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 25 ದಿನಗಳ ಬಳಿಕ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ದಾರೆ. ಮೊದಲ ಹಂತದಲ್ಲಿ 17 ಮಂದಿ ಶಾಸಕರನ್ನು ತಮ್ಮ ಕ್ಯಾಬಿನೆಟ್ ಗೆ ಸೇರಿಸಿಕೊಂಡಿದ್ದಾರೆ. ರಾಜಭವನದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರ ಗೌಪ್ಯತಾ ವಿಧಿ, ಪ್ರತಿಜ್ಞೆ ಪ್ರಮಾಣ ವಚನ ಸ್ವೀಕಾರ ನಡೆಯಿತು. ಈಗ ಯಾರಿಗೆ ಯಾವ ಖಾತೆ ಸಿಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ.
      2:30 PM, 20 Aug

      ಕೈತಪ್ಪಿದ ಸಚಿವ ಸ್ಥಾನ: ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ ಶಾಸಕರು

      ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸ್ಥಾನ ವಂಚಿತ ಹಲವು ಶಾಸಕರು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.
      1:53 PM, 20 Aug

      'ಮುಖ್ಯಮಂತ್ರಿ'ಯಾಗಿ ಪ್ರಮಾಣವಚನ: ಮಾಧುಸ್ವಾಮಿ ಯಡವಟ್ಟು

      ಸಮ್ಮಿಶ್ರ ಸರ್ಕಾರದ ಸಂಧ್ಯಾಕಾಲದಲ್ಲಿ ವಿಧಾನಸಭೆಯಲ್ಲಿ ತೀವ್ರ ಚರ್ಚೆ ನಡೆದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್‌ನ ಅನುಭವಿ ನಾಯಕರು ಕಾನೂನಿನ ಪುಸ್ತಕದ ಮೂಲೆ ಮೂಲೆಯಿಂದ ಅಂಶಗಳನ್ನು ಕೆದಕಿ ತಂದು ಪುಂಖಾನುಪುಂಖವಾಗಿ ಹೇಳುತ್ತಿದ್ದರೆ, ವಿರೋಧಪಕ್ಷದ ಸ್ಥಾನದಲ್ಲಿ ಕುಳಿತಿದ್ದ ಬಿಜೆಪಿ ನಾಯಕರು ಮಾತಿಲ್ಲದಂತೆ ಕುಳಿತಿದ್ದರು. ಆಗ ಉಳಿದ 104 ಶಾಸಕರ ಪರವಾಗಿ ಬ್ಯಾಟ್ ಬೀಸಿದವರು ತುಮಕೂರಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕ ಸಿಎಸ್ ಮಾಧುಸ್ವಾಮಿ.
      1:52 PM, 20 Aug

      ಕೈ ತಪ್ಪಿದ ಸಚಿವ ಸ್ಥಾನ : ಯಾರು, ಏನು ಹೇಳಿದರು?

      ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಿದ್ದಾರೆ. 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಹಲವು ಶಾಸಕರಿಗೆ ನಿರಾಸೆಯಾಗಿದೆ.
      1:51 PM, 20 Aug

      ಯಡಿಯೂರಪ್ಪ ಸಂಪುಟ: ಸಚಿವ ಸ್ಥಾನ ವಂಚಿತ ಶಾಸಕರ ಪಟ್ಟಿ

      ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆಯ ಮೊದಲ ಹಂತ ಸಂಪನ್ನವಾಗಿದೆ. ಮಂಗಳವಾರ ಬೆಳಗ್ಗೆ 17 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಬೆಳಗ್ಗೆ 10.30ಕ್ಕೆ ನಡೆದ ಸರಳ ಸಮಾರಂಭದಲ್ಲಿ ಬಹುತೇಕ ನಿರೀಕ್ಷಿತ ಶಾಸಕರು, ಸಚಿವ ಸ್ಥಾನ ಪಡೆದುಕೊಂಡಿದ್ದಾರೆ.
      12:22 PM, 20 Aug

      ಯಡಿಯೂರಪ್ಪ ಸಂಪುಟದಲ್ಲಿ ಯಾವ ಜಾತಿಯ ಶಾಸಕರಿಗೆ ಸ್ಥಾನ?

      ನಿರೀಕ್ಷೆಯಂತೆಯೇ ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಪಟ್ಟಿ ಹೊರಬರುತ್ತಿದ್ದಂತೆಯೇ ವಿವಿಧ ಬಗೆಯ ಅಸಮಾಧಾನಗಳು ಹೊರಬರತೊಡಗಿವೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಅನೇಕ ಶಾಸಕರು ಬೇಸರ, ಸಿಟ್ಟು ವ್ಯಕ್ತಪಡಿಸಲು ಆರಂಭಿಸಿದ್ದಾರೆ.
      11:20 AM, 20 Aug

      ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      Advertisement
      11:17 AM, 20 Aug

      ಔರಾದ್ ಕ್ಷೇತ್ರದ ಶಾಸಕ ಪ್ರಭು ಚೌವಾಣ್ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      11:14 AM, 20 Aug

      ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್. ನಾಗೇಶ್ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
      11:11 AM, 20 Aug

      ನರಗುಂದ ಕ್ಷೇತ್ರದ ಶಾಸಕ ಸಿ.ಸಿ.ಪಾಟೀಲ್ ಸಂಪುಟದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      11:09 AM, 20 Aug

      ಚಿಕ್ಕನಾಯಕನಹಳ್ಳಿ ಶಾಸಕ ಜೆ. ಸಿ. ಮಾಧುಸ್ವಾಮಿ ಸಂಪುಟದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      11:06 AM, 20 Aug

      ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      Advertisement
      11:03 AM, 20 Aug

      ಶಿಗ್ಗಾವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      11:02 AM, 20 Aug

      ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ. ಟಿ. ರವಿ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:58 AM, 20 Aug

      ಗೋವಿಂದರಾಜ ನಗರ ಕ್ಷೇತ್ರದ ಶಾಸಕ ವಿ. ಸೋಮಣ್ಣ ಸಂಪುಟ ದರ್ಜೆ ಸಚಿವರಾಗಿ ಬಸವಾದಿ ಪ್ರಮುಖರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:56 AM, 20 Aug

      ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:52 AM, 20 Aug

      ಮೊಳಕಾಲ್ಮೂರು ಕ್ಷೇತ್ರದ ಶಾಸಕ ಬಿ. ಶ್ರೀರಾಮುಲು ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:50 AM, 20 Aug

      ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:47 AM, 20 Aug

      ಪದ್ಮನಾಭನಗರದ ಶಾಸಕ ಆರ್. ಅಶೋಕ (ಜಾಲಹಳ್ಳಿ ರಾಮಯ್ಯ ಅಶೋಕ) ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:44 AM, 20 Aug

      ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಕೆ. ಎಸ್. ಈಶ್ವರಪ್ಪ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:41 AM, 20 Aug

      ಅಥಣಿ ಕ್ಷೇತ್ರದ ಮಾಜಿ ಶಾಸಕ ಲಕ್ಷಣ ಸಂಗಪ್ಪ ಸವದಿ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. 2018ರ ಚುನಾವಣೆಯಲ್ಲಿ ಸೋಲು ಅನುಭವಿಸಿದರೂ ಲಕ್ಷಣ ಸವದಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.
      10:38 AM, 20 Aug

      ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವತ್ಥ್ ನಾರಾಯಣ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:36 AM, 20 Aug

      ಮುಧೋಳ ಶಾಸಕ ಗೋವಿಂದ ಕಾರಜೋಳ ಸಂಪುಟ ದರ್ಜೆ ಸಚಿವರಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
      10:29 AM, 20 Aug

      ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಸಚಿವ ಸ್ಥಾನ ಕೈ ತಪ್ಪಿದ ಕಾರಣಕ್ಕೆ ಬೇಸರಗೊಂಡಿದ್ದಾರೆ. "ಸವದಿಗೆ ಸಚಿವ ಸ್ಥಾನ ನೀಡಿ ನನ್ನನ್ನು ಕೈ ಬಿಟ್ಟಿದ್ದಾರೆ. 8 ಬಾರಿ ಗೆದ್ದರೂ ಕಡೆಗಣಿಸಲಾಗಿದೆ" ಎಂದು ಅವರು ಹೇಳಿದ್ದಾರೆ.
      10:25 AM, 20 Aug

      ಚಿಕ್ಕನಾಯಕನಹಳ್ಳಿ ಶಾಸಕ ಜೆ. ಸಿ. ಮಾಧುಸ್ವಾಮಿ ಸಚಿವರಾಗುತ್ತಿದ್ದಾರೆ. 'ಕಂದಾಯ ಇಲಾಖೆ ಜವಾಬ್ದಾರಿ ಕೊಟ್ಟರೆ ಗ್ರಾಮೀಣ ಜನತೆಗೆ ಸ್ಪಂದಿಸಲು ಅನುಕೂಲವಾಗುತ್ತದೆ. ಸಾಕಷ್ಟು ಸವಾಲುಗಳು ಸರ್ಕಾರದ ಮುಂದಿದೆ. ಅವುಗಳನ್ನೆಲ್ಲಾ ಪ್ರಾಮಾಣಿಕವಾದಿ ಎದುರಿಸುತ್ತೇವೆ" ಎಂದು ಹೇಳಿದರು.
      10:20 AM, 20 Aug

      "ಶಿವಮೊಗ್ಗ ಜಿಲ್ಲೆಯವನಾದ ಕಾರಣ ನನಗೆ ಸಚಿವ ಸ್ಥಾನ ಕೈ ತಪ್ಪಿತು. ಆದರೆ, ನನಗೆ ಅಸಮಾಧಾನವಿಲ್ಲ. ಯಡಿಯೂರಪ್ಪ ಮುಖ್ಯಮಂತ್ರಿ, ಈಶ್ವರಪ್ಪ ಸಚಿವರಾಗುತ್ತಿದ್ದಾರೆ. ಆರಗ ಜ್ಞಾನೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದಿತ್ತು" ಎಂದು ಸಾಗರ ಕ್ಷೇತ್ರದ ಶಾಸಕ, ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದರು.
      10:18 AM, 20 Aug

      ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಯಾರು ಯಾರಿದ್ದಾರೆ? ಸಂಪೂರ್ಣ ಪಟ್ಟಿ

      ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ 25 ದಿನಗಳ ಬಳಿಕ ಕೊನೆಗೂ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರದ ಧ್ವನಿ ಕೇಳಿಸಲಿದೆ. ಹೆಚ್ಚೂ ಕಡಿಮೆ ಒಂದು ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲು ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಅಸ್ತು ಎಂದಿದೆ.
      10:13 AM, 20 Aug

      ರಾಜಭವನಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
      10:09 AM, 20 Aug

      ಕೆ.ಎಸ್.ಈಶ್ವರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ತೆರಳುವ ಮೊದಲು ಬೆಂಗಳೂರಿನ ದತ್ತ ಮಂದಿರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
      10:00 AM, 20 Aug

      ಒಕ್ಕಲಿಗ ಸಮುದಾಯದವರು : ಡಾ.ಅಶ್ವತ್ಥ್ ನಾರಾಯಣ, ಆರ್. ಅಶೋಕ್, ಸಿ. ಟಿ. ರವಿ
      READ MORE

      English summary
      Karnataka Chief Minister B.S.Yediyurappa cabinet expansion held on August 20, 2019. 17 MLA's joined cabinet, Here are the live updates in Kannada.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X